ನ್ಯೂಡೆಲ್ಲಿ: ದೇಶದಲ್ಲೂ ದಿನದಿಂದ ದಿನಕ್ಕೆ ವಿಶ್ವಮಾರಿ ಕೊರೊನಾ ಅಟ್ಟಹಾಸ ಮುಂದುವರಿಯುತ್ತಿದ್ದು, ಇದರಿಂದ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ.
ಅಂದರೆ ಕಳೆದ 24 ಗಂಟೆಯಲ್ಲಿ ದೇಶದ 9,889 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2.26 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ದೇಶದ ವಿವಿಧ ರಾಜ್ಯಗಳಲ್ಲಿ ಒಂದು ದಿನದ ಗರಿಷ್ಟ ಸೋಂಕಿತರ ಸಂಖ್ಯೆ ದಾಖಲಾಗಿದ್ದು, ನಿನ್ನೆ ಒಂದೇ ದಿನ ದೇಶಾದ್ಯಂತ 9, 889 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,26,713ಕ್ಕೇರಿದೆ.
ಇನ್ನು ನಿನ್ನೆ ಒಂದೇ ದಿನ ದೇಶಾದ್ಯಂತ 275 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 6,363ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,343 ಸೋಂಕಿತರು ಗುಣಮುಖರಾಗಿ ಮನೆಗೆ ಮರಳಿದ್ದಾರೆ, ಆ ಮೂಲಕ ಒಟ್ಟಾರೆ ಸೋಂಕಿತರಲ್ಲಿ 108,450 ಮಂದಿ ಈವರೆಗೆ ಗುಣಮುಖರಾಗಿರುವುದು ತುಸು ಸಮಾಧಾನದ ವಿಷಯವಾಗಿದೆ. ಇನ್ನು 1,11,900 ಸಕ್ರಿಯ ಪ್ರಕರಣಗಳಿದ್ದು ನಿಗದಿತ ಆಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ವಿಶ್ವದಲ್ಲಿ ಕೊರೊನಾ ಸೋಂಕಿಗೆ ಒಳಗಾದವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು ಅತೀ ಹೆಚ್ಚು ಸೋಂಕಿತರನ್ನು ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತ 7ನೇ ಸ್ಥಾನದಲ್ಲಿದೆ. ಇನ್ನು ಅಮೆರಿಕ, ಬ್ರೆಜಿಲ್, ರಷ್ಯಾ, ಬ್ರಿಟನ್, ಸ್ಪೇನ್ ಮತ್ತು ಇಟಲಿ ನಂತರದ ಸ್ಥಾನವನ್ನು ನಮ್ಮ ದೇಶ ಹೊಂದಿರುವುದು ಸದ್ಯದ ಪರಿಸ್ಥಿತಿಯಲ್ಲಿ ಆತಂಕವನ್ನೂ ಹೆಚ್ಚಿಸಿದೆ.