NEWSದೇಶ-ವಿದೇಶಸಂಸ್ಕೃತಿ

ಚೀನಾ ಕ್ಯಾತೆ: ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ

ಜೂ.19ರಂದು ಗಡಿ ವಿಚಾರಕ್ಕೆ ಸಂಬಂಧಿಸಿದ ಚರ್ಚೆ  

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಗಡಿಯಲ್ಲಿ ಚೀನಾದ ಯುದ್ಧೋನ್ಮಾದ ಮತ್ತು ಅದರಿಂದ ಉದ್ಭವಿಸಿರುವ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸರ್ವಪಕ್ಷ ಮುಖಂಡರ ಸಭೆ ಕರೆದಿದ್ದಾರೆ.

ಉಭಯ ದೇಶಗಳ ಯೋಧರ ನಡುವೆ ಸಂಘರ್ಷ ಏರ್ಪಟ್ಟಿರುವ  ಹಿನ್ನೆಲೆಯಲ್ಲಿ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮೋದಿಯವರು ಜೂ.19ರ ಸಂಜೆ 5 ಗಂಟೆಗೆ ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

ಇದೇ ವೇಳೆ ಭಾನುವಾರ ದೇಶವನ್ನು ಉದ್ದೇಶಿಸಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು, ಸರಕಾರದ ನಡೆಯ ಬಗ್ಗೆ ವಿವರಿಸುವ ಸಾಧ್ಯತೆ ಇದೆ. ಜೊತೆಗೆ ಕೊರೊನಾ ಕಟ್ಟಿಹಾಕುವ ಬಗ್ಗೆಯೂ ಮೋದಿ ಜನ ಜಾಗೃತಿಗೆ ಕರೆ ನೀಡಲಿದ್ದಾರೆ ಎಂದು ಹೇಳಲಾಗಿದೆ.

ಈ ಮಧ್ಯೆ ಗಡಿಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಸರಕಾರವು ಮೂರೂ ರಕ್ಷಣಾ ಪಡೆಗಳಿಗೆ ಸಂದೇಶ ರವಾನಿಸಿದೆ. ಗಡಿ ತಾಪ ಶಮನಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು ಮೇಜರ್‍ ಜನರಲ್ಲುಗಳ ಮಟ್ಟದ ಮಾತುಕತೆಯಲ್ಲಿ ನಿರತವಾಗಿವೆ.

ಪೂರ್ವ ಲಡಾಖ್‌ನ ಗಾಲ್ವಾನ್ ಗಡಿಯಲ್ಲಿ 5 ವಾರಗಳಿಂದ ಬಿಕ್ಕಟ್ಟು ಏರ್ಪಟ್ಟಿದೆ. ಈ ಕುರಿತು ಎರಡೂ ದೇಶಗಳ ನಡುವೆ ಮಾತುಕತೆ ನಡೆದಿದ್ದು, ಸ್ಥಳದಿಂದ ಹಿಂದೆ ಸರಿಯುವ ಕುರಿತು ಒಮ್ಮತಕ್ಕೆ ಬರಲಾಗಿತ್ತು. ಅದರಂತೆ ಚೀನಾ ಯೋಧರು ಸೋಮವಾರ ರಾತ್ರಿ ಕಾಲ್ತೆಗೆಯಲು ಆರಂಭಿಸಿದ್ದರು.

ಈ ಸಂದರ್ಭದಲ್ಲಿ ಏಕಾಏಕಿ ಭಾರತೀಯ ಯೋಧರ ಮೇಲೆ ದೊಣ್ಣೆ ಹಾಗೂ ಕಲ್ಲುಗಳಿಂದ ದಾಳಿ ನಡೆಸಿದ್ದರು. ಕೂಡಲೇ ಭಾರತೀಯ ಯೋಧರು ಪ್ರತಿದಾಳಿ ಮಾಳಿ ಮಾಡಿದರು.  ಹಲವು ತಾಸು  ಯೋಧರ ನಡುವೆ ಘರ್ಷಣೆ ನಡೆಯಿತು. ಮಧ್ಯರಾತ್ರಿ ಬಳಿಕ ಕಲಹ ನಿಂತಿತ್ತು. ಈ ಘರ್ಷಣೆಯಲ್ಲಿ ಭಾರತದ ಕರ್ನಲ್ ಸೇರಿ 20 ಮಂದಿ ಸಾವನ್ನಪ್ಪಿದ್ದಾರೆ.

Leave a Reply