NEWSಕ್ರೀಡೆದೇಶ-ವಿದೇಶ

ಅಂತಾರಾಷ್ಟ್ರೀಯ ಕ್ರಿಕೆಟ್‌ ವೃತ್ತಿ ಜೀವನಕ್ಕೆ ಧೋನಿ ವಿದಾಯ 

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ವಿದಾಯ ಘೋಷಿಸಿದ್ದಾರೆ.

ಶನಿವಾರ (ಆಗಸ್ಟ್‌ 15) ತಮ್ಮ ಇನ್‌ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಆ ಮೂಲಕ ಕಳೆದ ಹಲವು ತಿಂಗಳುಗಳಿಂದ ಎದ್ದಿದ ಊಹಾಪೋಹಗಳಿಗೆ ಇಂದು ಕ್ಯಾಪ್ಟನ್‌ ಕೂಲ್‌ ಪೂರ್ಣ ವಿರಾಮವಿಟ್ಟರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

“ನನ್ನ ವೃತ್ತಿ ಜೀವನದಲ್ಲಿ ನೀವು ತೋರಿದ ಪ್ರೀತಿ ಹಾಗೂ ಸಹಕಾರಕ್ಕೆ ಧನ್ಯವಾದಗಳು. 1929 ಗಂಟೆಗಳ ಬಳಿಕ ನಾನು ನಿವೃತ್ತಿ ಹೊಂದುತ್ತಿದ್ದೇನೆ.” ಎಂದು ಎರಡು ಬಾರಿ ವಿಶ್ವಕಪ್‌ ವಿಜೇತ ನಾಯಕ ಎಂ.ಎಸ್‌.ಧೋನಿ ಇನ್‌ಸ್ಟಾಗ್ರಾಮ್‌ ಪೋಸ್ಟ್ ಮಾಡಿದ್ದಾರೆ.

2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಎಂಎಸ್ ಧೋನಿ ಪಾದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2007ರ ಟಿ20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಕಪ್ ಗೆದ್ದು ಬೀಗಿತ್ತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿರುವ ಎಂಎಸ್ ಧೋನಿ ಅವರು ಐಪಿಎಲ್ ನಲ್ಲಿ ಮಾತ್ರ ಆಡಲಿದ್ದಾರೆ.

ಎಂಎಸ್ ಧೋನಿ ಅವರು 350 ಏಕದಿನ ಪಂದ್ಯಗಳನ್ನಾಡಿದ್ದು ಪಂದ್ಯವೊಂದರಲ್ಲಿ 183 ರನ್ ಬಾರಿದ್ದಾರೆ. ಇನ್ನು ಮಹತ್ವದ ಐಸಿಸಿ ಟೂರ್ನಿಗಳಾದ ಏಕದಿನ ವಿಶ್ವಕಪ್, ಟಿ20 ವಿಶ್ವಕಪ್ ಮತ್ತು ಚಾಂಪಿಯನ್ ಟ್ರೋಫಿ ಗೆಲ್ಲಿಸಿಕೊಟ್ಟ ಕೀರ್ತಿ ಧೋನಿಯವರದ್ದು.

2017ರಲ್ಲಿ ಧೋನಿ ತಮ್ಮ ನಾಯಕ ಸ್ಥಾನಕ್ಕೆ ವಿದಾಯ ಘೋಷಿಸಿದ್ದರು. ಬಳಿಕ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಟೀಂ ಇಂಡಿಯಾ ತಂಡದ ನಾಯಕತ್ವ ವಹಿಸಿಕೊಂಡಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?