NEWSಕೃಷಿದೇಶ-ವಿದೇಶ

ಪ್ರಧಾನಿ ಮೋದಿಯಿಂದ ಇಂದು ಕೃಷಿ ಮೂಲಸೌಕರ್ಯಕ್ಕೆ ಲಕ್ಷ ಕೋಟಿ ರೂ. ಬಿಡುಗಡೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ:  ದೇಶದ ಕೃಷಿ ವಲಯಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ದೃಷ್ಟಿಯಿಂದ ಒಂದು ಲಕ್ಷ ಕೋಟಿ ರೂ. ನಿಧಿ ಬಿಡುಗಡೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಈ ನಿಧಿ ಬಿಡುಗಡೆ ಮಾಡಲಿದ್ದು, ಆದೇ ರೀತಿ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ದೇಶದ 8.5 ಕೋಟಿ ರೈತರಿಗೆ 6 ನೇ ಕಂತಾಗಿ 17,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು ಎಂದು  ನಿನ್ನೆ ಹೇಳಿಕೆ ನೀಡಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ಕೃಷಿ ಉತ್ಪನ್ನಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಈ 1 ಲಕ್ಷ ಕೋಟಿ ರೂ. ನಿಧಿಯನ್ನು ಬಳಸಲಾಗುವುದು. ರೈತರು ಬೆಳೆದ ಬೆಳೆಗಳನ್ನು ಸಂರಕ್ಷಿಸಲು ಕೋಲ್ಡ್ ಸ್ಟೋರೇಜ್ ಸ್ಥಾಪನೆ, ಸಂಸ್ಕರಣಾ ಘಟಕಗಳು ಸೇರಿ ಇನ್ನಿತರ ಸೌಲಭ್ಯಕ್ಕೆ ಈ ಹಣವನ್ನು ಉಪಯೋಗಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ವಿವರಿಸಿದ್ದಾರೆ.

ಬೆಳೆಗಳನ್ನು ಸಂರಕ್ಷಿಸಲು ಕೋಲ್ಡ್ ಸ್ಟೋರೇಜ್ ಸ್ಥಾಪನೆ, ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವುದರಿಂದ  ರೈತರ ಬೆಳೆಗಳಿಗೆ ಹೆಚ್ಚಿನ ಬೆಲೆ ಕಲ್ಪಿಸಲು ಸಾಧ್ಯವಾಗಲಿದೆ. ಅಲ್ಲದೆ ರೈತರು ತಾವು ಬೆಳೆದ ಉತ್ಪನ್ನಗಳನ್ನು ಹತಾಶೆಯ ಬೆಲೆಗಳಿಗೆ ಮಾರಾಟಮಾಡದೆ ಅವುಗಳನ್ನು ಹೆಚ್ಚಿನ ಕಾಲ ಶೀತಲ ಗೃಹಗಳಲ್ಲಿ ಸಂಗ್ರಹಿಸಿ, ಸೂಕ್ತ ಬೆಲೆ ಬಂದಾಗ ಮಾರಾಟ ಮಾಡಬಹುದು ಎಂದು ತಿಳಿಸಿದ್ದಾರೆ.

ಕೃಷಿ ಮೂಲಸೌಕರ್ಯ ನಿಧಿಯಡಿ ಪ್ರಧಾನಿ ಮೋದಿ ಹಣ ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕೂಡ ವಿಡಿಯೋ ಕಾನ್ಫರೆನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದೇಶದ ವಿವಿಧ ಪ್ರದೇಶಗಳ ರೈತರು ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು