ನ್ಯೂಡೆಲ್ಲಿ: ನಮ್ಮ ತಂದೆ ಬದುಕಿದ್ದಾರೆ ದಯಮಾಡಿ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಮನವಿ ಮಾಡಿದ್ದಾರೆ.
ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಹಿನ್ನೆಲೆಯಲ್ಲಿ ಎರಡು ದಿನದ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆದರೆ, ಚಿಕಿತ್ಸೆಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಹೀಗಾಗಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈಗ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದಾರೆ.
ಈ ಮಧ್ಯೆ ಕೆಲವು ಕಿಡಿಗೇಡಿಗಳು ಪ್ರಣಬ್ ಮುಖರ್ಜಿ ಮೃತಪಟ್ಟಿದ್ದಾರೆ ಎನ್ನುವ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಮಟ್ಟಕ್ಕೆ ತಲುಪಿತ್ತು. ಅಲ್ಲದೆ ರಾಷ್ಟ್ರೀಯ ಚಾನೆಲ್‌ವೊಂದರಲ್ಲಿ ಈ ಬಗ್ಗೆ ಸುಳ್ಳು ಸುದ್ದಿ ಹರಿದಾಡಿತ್ತು.
ಈ ಬಗ್ಗೆ ಬೇಸರಗೊಂಡಿರುವ ಪ್ರಣಬ್ ಮುಖರ್ಜಿ ಅವರ ಪುತ್ರ ತಮ್ಮ ಟ್ವೀಟ್‌ನಲ್ಲಿ ನನ್ನ ತಂದೆ ಇನ್ನೂ ಜೀವಂತವಾಗಿದ್ದಾರೆ ಮತ್ತು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಹೆಸರಾಂತ ಪತ್ರಕರ್ತರು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತಿರುವ ಊಹಾಪೋಹಗಳು ಮತ್ತು ಸುಳ್ಳು ಸುದ್ದಿಗಳು ಭಾರತದಲ್ಲಿ ಮಾಧ್ಯಮವು ಸುಳ್ಳು ಸುದ್ದಿಯ ಕಾರ್ಖಾನೆಯಾಗಿ ಮಾರ್ಪಟ್ಟಿದೆ ಎಂಬುದನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
My Father Shri Pranab Mukherjee is still alive & haemodynamically stable !
Speculations & fake news being circulated by reputed Journalists on social media clearly reflects that Media in India has become a factory of Fake News .— Abhijit Mukherjee (@ABHIJIT_LS) August 13, 2020