ನ್ಯೂಡೆಲ್ಲಿ: ರಕ್ಷಣ ಸಾಮಗ್ರಿಗಳ ಉತ್ಪಾದನೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಕೇಂದ್ರ ಸರ್ಕಾರ ದೇಶೀಯ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದೆ.
101 ವಿವಿಧ ರಕ್ಷಣ ಸಾಮಗ್ರಿಗಳ ಉತ್ಪಾದನೆಗೆ ರಕ್ಷಣ ಇಲಾಖೆ ನಿರ್ಧಾರ ತೆಗೆದುಕೊಂಡಿದ್ದು, ಅದನ್ನು ದೇಶೀಯ ರಕ್ಷಣ ಕಂಪನಿಗಳಿಗೆ ಗುತ್ತಿಗೆ ನೀಡಿ ಆ ಮೂಲಕ ಸ್ವಾವಲಂಬಿ ಭಾರತ ಮಾಡಲಾಗುವುದು ಎಂದು ರಕ್ಷಣ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಈ ಮೂಲಕ ಸೇನೆಯಲ್ಲಿ 2020 ರಿಂದ 2024ರ ಮಧ್ಯೆ ಮಹತ್ವದ ಕಾರ್ಯ ನಡೆಯಲಿದೆ. ಸಂಪೂರ್ಣವಾಗಿ ರಕ್ಷಣಾ ಸಾಮಗ್ರಿ ದೇಶದಲ್ಲೇ ಉತ್ಪಾದನೆ ಆಗಲಿದೆ. ಇದಕ್ಕಾಗಿ ಪ್ರತ್ಯೇಕ ಬಜೆಟ್ ಮುಖ್ಯಸ್ಥರ ನೇಮಕ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
6-7ವರ್ಷದಲ್ಲಿ ಸಂರ್ಪೂಣ ಸ್ವಾವಲಂಬನೆ ಸಾಧಿಸುವ ದೃಷ್ಟಿಯಲ್ಲಿ 4 ಲಕ್ಷ ಕೋಟಿ ರೂ. ವೆಚ್ಚದಲ್ಲಿ ಸಾಮಗ್ರಿಗಳನ್ನು ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
The embargo on imports is planned to be progressively implemented between 2020 to 2024. Our aim is to apprise the Indian defence industry about the anticipated requirements of the Armed Forces so that they are better prepared to realise the goal of indigenisation.
— Rajnath Singh (@rajnathsingh) August 9, 2020