ನ್ಯೂಡೆಲ್ಲಿ: ವಲಸಿಗರ ಸುರಕ್ಷಿತ ಹಾಗೂ ತ್ವರಿತ ಸಾರಿಗೆಯನ್ನು ಖಚಿತಪಡಿಸಿ ಕೊಳ್ಳಲು, ಭಾರತೀಯ ರೈಲ್ವೆಯು ದೇಶದಲ್ಲಿ ರೈಲ್ವೆ ಸಂಪರ್ಕ ಹೊಂದಿರುವ ಎಲ್ಲಾ ಜಿಲ್ಲೆಗಳಿಂದ ಶ್ರಮಿಕ್ ವಿಶೇಷ ರೈಲುಗಳನ್ನು ಓಡಿಸಲಾಗುದು ಎಂದು ರೈಲ್ವೆ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವರು ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಭಾರತೀಯ ರೈಲ್ವೆಯು ದಿನಕ್ಕೆ ಸುಮಾರು 300 ಶ್ರಮಿಕ್ ವಿಶೇಷ ರೈಲುಗಳನ್ನು ಓಡಿಸುವ ಸಾಮರ್ಥ್ಯ ಹೊಂದಿದೆ. ದೇಶಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಸಿಲುಕಿಕೊಂಡಿರುವ ವಲಸಿಗರು ತಮ್ಮ ತವರು ರಾಜ್ಯಗಳನ್ನು ಸೇರಿಕೊಳ್ಳಲು ಇದು ಹೆಚ್ಚು ಅನುಕೂಲಕರವಾಗಿದೆ ಎಂದು ತಿಳಿಸಿದ್ದಾರೆ.
ರೈಲ್ವೆ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವರು ಇಂದು ದೇಶದ ಜಿಲ್ಲಾಧಿಕಾರಿಗಳಿಗೆ ಸಿಲುಕಿಕೊಂಡ ಕಾರ್ಮಿಕರ ಮತ್ತು ಗಮ್ಯಸ್ಥಾನಗಳ ಪಟ್ಟಿಯನ್ನು ಸಿದ್ಧಪಡಿಸುವಂತೆ ಮತ್ತು ರಾಜ್ಯ ನೋಡಲ್ ಅಧಿಕಾರಿ ಮೂಲಕ ರೈಲ್ವೆಗೆ ಕೋರಿಕೆ ಸಲ್ಲಿಸುವಂತೆ ಕೇಳಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಪೂರ್ಣ ಸಾಮರ್ಥ್ಯ ರೈಲ್ವೆ ರೇಕ್‌ಗಳ ಕಾರ್ಯಾಚರಣೆಯು ದೇಶಾದ್ಯಂತದ ವಲಸಿಗರಿಗೆ ತಮ್ಮ ಸ್ವಂತ ರಾಜ್ಯಗಳಿಗೆ ಹೋಗಲು ಬಯಸುವವರಿಗೆ ಗಮನಾರ್ಹ ಪರಿಹಾರ ನೀಡುತ್ತದೆ. ಜಿಲ್ಲೆಗಳ ನೈಜ ಅಗತ್ಯಗಳಿಗೆ ಅನುಗುಣವಾಗಿ ಶ್ರಮಿಕ್ ವಿಶೇಷ ರೈಲುಗಳ ಓಡಾಟವನ್ನು ಹೆಚ್ಚಿಸಲು ಭಾರತೀಯ ರೈಲ್ವೆಯು ಸಿದ್ಧವಾಗಿದೆ ಎಂದಿದ್ದಾರೆ.
ಪ್ರಸ್ತುತ, ಈಗಾಗಲೇ 15 ಲಕ್ಷಕ್ಕೂ ಹೆಚ್ಚು ವಲಸಿಗರನ್ನು ರೈಲ್ವೆಯು ತಮ್ಮ ತವರು ರಾಜ್ಯಗಳಿಗೆ ಸಾಗಿಸಿದ್ದು. ಸುಮಾರು 1150 ಶ್ರಮಿಕ್ ವಿಶೇಷ ರೈಲುಗಳನ್ನು ಕಾರ್ಯಗತ ಗೊಳಿಸಲಾಗಿದೆ. ಭಾರತೀಯ ರೈಲ್ವೆಯು ದಿನಕ್ಕೆ ಸುಮಾರು ಎರಡು ಪಟ್ಟು ವಲಸಿಗರನ್ನು ಸುಲಭವಾಗಿ ಸಾಗಿಸಬಹುದು ಎಂದು ವಿವರಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail