Please assign a menu to the primary menu location under menu

NEWSದೇಶ-ವಿದೇಶ

20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್‌ ಯಾರ‍್ಯಾರಿಗೆ ಹಂಚಿಕೆಯಾಗುತ್ತೆ?

ಇಂದು ಸಂಜೆ ಸುದ್ದಿಗೋಷ್ಠಿನಡೆಸಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ನಿನ್ನೆ ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡುವೆ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಘೋಷಣೆ ಮಾಡಿರುವ  20 ಲಕ್ಷ ಕೋಟಿ ರೂ. ಪ್ಯಾಕೇಜ್‌ನಲ್ಲಿ ಯಾರುಯಾರಿಗೆ ಸಿಗಲಿದೆ ಎಂಬ ವಿವರವನ್ನು ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್‌ ಇಂದು ನೀಡಲಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಸುದ್ದಿಗೋಷ್ಠಿ ನಡೆಸಲಿರುವ ಕೇಂದ್ರ ವಿತ್ತ ಸಚಿವರು ಈ ಕುರಿತು ಸಮಗ್ರವಾಗಿ ವಿವರ ನೀಡಲಿದ್ದಾರೆ ಎಂದು ಹೇಳಲಾಗಿದೆ. ಆದರೆ, ಸುದ್ದಿಗೋಷ್ಠಿ ಯನ್ನು ಇಂದು ಸಂಜೆ  ನಡೆಸುವುದಾಗಿ ವಿತ್ತ ಇಲಾಖೆ ತಿಳಿಸಿದೆ.

ಇನ್ನು ವಿತ್ತ ಸಚಿವರು ಗ್ರಾಮೀಣ ಭಾಗಕ್ಕೆ ಹೆಚ್ಚು ಒತ್ತುಕೊಡುವ ನಿಟ್ಟಿನಲ್ಲಿ ಪ್ಯಾಕೇಜ್‌  ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನರೇಗಾ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣರಿಗೆ ಹೆಚ್ಚು ಉದ್ಯೋಗ ನೀಡಿ ಅವರನ್ನು ಆರ್ಥಿಕವಾಗಿ ಸಬಲರಾಗಿಸು ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೆಜ್ಜೆ ಹಾಕಲಿದೆ ಎಂದು ಹೇಳಲಾಗುತ್ತಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಪ್ರಧಾನಿ ಸಕಾಲಿಕ ವಿಶೇಷ ಆರ್ಥಿಕ ಪ್ಯಾಕೇಜ್  ಸ್ವಾಗತಾರ್ಹ
ದೇಶವು ಕೊವಿಡ್-19 ಸೋಂಕಿನ ನಿಯಂತ್ರಣಕ್ಕಾಗಿ ಕೈಕೊಂಡ ಲಾಕಡೌನ ಜನರ ಆರೋಗ್ಯ ರಕ್ಷಾ ಕವಚವಾದಂತೆ ಪ್ರಧಾನಿ ನರೇಂದ್ರ ಮೋದಿಯವರು  ಸರ್ವ ವರ್ಗಗಳ ಆರ್ಥಿಕ  ವೃದ್ದಿಗೆ  ಘೋಷಿಸಿದ 20 ಲಕ್ಷ ಕೋಟಿಯ ವಿಶೇಷ ಪ್ಯಾಕೇಜ್ ಅತ್ಯಂತ ಸಕಾಲಿಕ ಹಾಗೂ ಸ್ವಾಗತಾರ್ಹ ನಿರ್ಧಾರವಾಗಿದೆ ಎಂದು ರಾಜ್ಯದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ್‌ ತಿಳಿಸಿದ್ದಾರೆ.

ಇದೊಂದು ಐತಿಹಾಸಿಕ ನಿರ್ಧಾರವಾಗಲಿದ್ದು, ಭಾರತದ ಆರ್ಥಿಕ ವ್ಯವಸ್ಥೆ ಯ ಮಹತ್ವದ ಅಂಗಗಳಾದ ಸಣ್ಣ ಕೈಗಾರಿಕೆ, ಕೃಷಿ, ತೆರಿಗೆದಾರ ಮಧ್ಯಮ ವರ್ಗದ ಜನರು ತಮ್ಮ ಆರ್ಥಿಕತೆಯನ್ನು ಮತ್ತೆ ಸರಿ ದಾರಿಗೆ ತರಲು ಇದೊಂದು ಅತ್ಯುತ್ತಮ ಹೆಜ್ಜೆಯಾಗಿದೆ. ಪ್ರಧಾನಿಗಳ ಸಬ್ ಕಾ ಸಾಥ್, ಸಬ್ ವಿಕಾಸ್. ಘೋಷಣೆ ಈ ನಿರ್ಧಾರದಲ್ಲಿ ಅನಾವರಣಗೊಂಡಿದೆ ಎಂದು  ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

error: Content is protected !!
LATEST
ನಮ್ಮ ಕ್ಲಿನಿಕ್ ಹೆಸರಲ್ಲಿ ನೂರಾರು ಕೋಟಿ ಗುಳುಂ: ಎಎಪಿ ಉಷಾ ಮೋಹನ್ KSRTC- ಫೋನ್‌ ಪೇ ಹಗರಣ- ₹20 ಸಾವಿರ ಲಂಚ ಕೊಟ್ಟ ಡಿಸಿ, ಡಿಟಿಒ ಅಮಾನತುಮಾಡಿ: ಎಂಡಿ ಭೇಟಿ ಮಾಡಿದ ನಾಗರಾಜ್‌ ಇಂದು ಸಾರಿಗೆ ನಿಗಮಗಳಲ್ಲಿ ಚಾಲಕರ ದಿನದ ಸಂಭ್ರಮ - ಘಟಕಗಳಲ್ಲಿ ಹೂಗುಚ್ಛ ನೀಡಿ ಶುಭ ಕೋರಿದ ಸಹೋದ್ಯೋಗಿಗಳು KSRTC ಬಸ್ ನಿಲ್ದಾಣದ ಅವ್ಯವಸ್ಥೆ ಕಂಡು ಡಿಸಿ ಬೆವರಿಳಿಸಿದ  ಉಪಲೋಕಾಯುಕ್ತರು BMTC: ಅತೀ ಶೀಘ್ರದಲ್ಲೇ ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ- ಎಂಡಿ ರಾಮಚಂದ್ರನ್‌ KKRTC ಬಸ್‌-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ: ಯುವತಿ ಸಾವು, 18ಮಂದಿಗೆ ಗಾಯ KSRTC: ಭ್ರಷ್ಟಾಚಾರ ಬಯಲು ಮಾಡದಂತೆ ದೂರುದಾರನ ಬಾಯಿ ಮುಚ್ಚಿಸಲು ATI ಮೂಲಕ ₹20 ಸಾವಿರ ಕೊಟ್ಟರೇ ಡಿಸಿ, ಡಿಟಿಒ! ಮಗನ ಎದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ KSRTC ಮೆಕ್ಯಾನಿಕ್‌ ಚಾಲಕನ ನಿಯಂತ್ರಣ ತಪ್ಪಿ ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ: 14 ಜನ ಮೃತ 2026ಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿ ಸಾಧ್ಯತೆ: ರಾಜ್ಯಾಧ್ಯಕ್ಷ ಷಡಾಕ್ಷರಿ