NEWSದೇಶ-ವಿದೇಶ

ನ್ಯೂಡೆಲ್ಲಿ ಸಿಎಂ ಕೇಜ್ರಿವಾಲ್‌ಗೆ ನಾಳೆ ಕೊರೊನಾ ಟೆಸ್ಟ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಲ್ಲಿ ಗಂಟಲು ನೋವು ಮತ್ತು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರ ಕೊರೊನಾ ಸೋಂಕು ಪರೀಕ್ಷೆಗೆ ಒಳಪಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜ್ವರ ಮತ್ತು ಗಂಟಲು ನೋವು ಇರುವುದರಿಂದ ಸಿಎಂ ಕೇಜ್ರಿವಾಲ್‌ ಸ್ವಯಂ ಹೋಂ ಕ್ವಾರಂಟೈನ್‌ನಲ್ಲಿ ಇರಲು ನಿರ್ಧರಿಸಿದ್ದಾರೆ.

ಕೇಜ್ರಿವಾಲ್ ಅವರಿಗೆ ಡಯಾಬಿಟಿಸ್ ಕೂಡ ಇದೇ. ಭಾನುವಾರ ಮಧ್ಯಾಹ್ನದವರೆಗೆ ಗಂಟಲು ನೋವು ಮತ್ತು ಜ್ವರ ಇತ್ತು. ಇಂದು ಸ್ವಲ್ಪ ಹೆಚ್ಚಾಗಿರುವ ಕಾರಣ ಮಂಗಳವಾರ ಬೆಳಗ್ಗೆ ಕೋವಿ-19 ಪರೀಕ್ಷೆ ನಡೆಸುವಂತೆ  ವೈದ್ಯರು ಸೂಚಿಸಿದ್ದಾರೆ ಎಂದು ಸಿಎಂ ಕಚೇರಿಯ ಮೂಲಗಳಿಂದ ತಿಳಿದು ಬಂದಿದೆ.

ಭಾನುವಾರ ಬೆಳಗ್ಗೆ ಸಚಿವ ಸಂಪುಟ ಸಭೆಯಲ್ಲಿ ಅವರು ಭಾಗಿಯಾಗಿದ್ದನ್ನು ಹೊರತುಪಡಿಸಿದರೆ ನಂತರ ಯಾವುದೇ ಸಭೆಯಲ್ಲೂ ಭಾಗಿಯಾಗಿಲ್ಲ. ಕಳೆದ ಎರಡು ತಿಂಗಳಿನಿಂದ ಕೇಜ್ರಿವಾಲ್ ಅವರು ವಿಡಿಯೋ ಸಂವಾದದ ಮೂಲಕ ಮಾತ್ರ ಸಭೆಯನ್ನು ನಡೆಸುತ್ತಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...