Please assign a menu to the primary menu location under menu

NEWSಕ್ರೀಡೆದೇಶ-ವಿದೇಶ

ಎಲ್ಲಿದ್ದೇವೆ ಎಂದು ವಿವರ ನೀಡದ ಐವರು ಕ್ರಿಕೆಟಿಗರಿಗೆ ನೋಟಿಸ್‌ ನೀಡಿದ ನಾಡಾ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ತಾವು ಎಲ್ಲಿದ್ದೇವೆ ಎಂಬ ಬಗ್ಗೆ ಮಾಹಿತಿ ನೀಡದ ಐವರು ಕ್ರೀಡಾಪಟುಗಳಿಗೆ ರಾಷ್ಟ್ರೀಯ ಉದ್ದೀಪನಾ ಮದ್ದು ತಡೆ ಘಟಕ (ನಾಡಾ) ಶನಿವಾರ ನೋಟಿಸ್ ಜಾರಿ ಮಾಡಿದೆ.

ಕ್ರಿಕೆಟಿಗರಾದ ಕೆ.ಎಲ್. ರಾಹುಲ್, ಚೇತೇಶ್ವರ ಪೂಜಾರ ಮತ್ತು ರವೀಂದ್ರ ಜಡೇಜಾ ಒಳಗೊಂಡಂತೆ ಕೇಂದ್ರೀಯ ಗುತ್ತಿಗೆ ಪದ್ಧತಿಯಲ್ಲಿರುವ ಇಬ್ಬರು ಮಹಿಳಾ ಕ್ರಿಕೆಟಿಗರು ಸೇರಿ  ಐವರು ಈ ನೋಟಿಸ್‌ಗೆ ಉತ್ತರ ನೀಡಬೇಕಿದೆ.

ಈ ನೋಟಿಸ್ ಪಡೆದವರಲ್ಲಿ ಮಹಿಳಾ ಕ್ರಿಕೆಟರ್ ಸ್ಮೃತಿ ಮಂದಾನಾ ಮತ್ತು ದೀಪ್ತಿ ಶರ್ಮಾ ಅವರು ಇದ್ದಾರೆ. ಇವರೆಲ್ಲರೂ ನಾಡ ಅಡಿಯಲ್ಲಿ ಬರುವ ಒಟ್ಟು 110 ಮಂದಿ ಕ್ರೀಡಾಪಟುಗಳ ಪಟ್ಟಿಯಲ್ಲಿದ್ದಾರೆ. ಇನ್ನು ನೋಟಿಸ್‌ಗೆ ಸ್ಪಂದಿಸಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ( ಬಿಸಿಸಿಐ) ಆಟಗಾರರನ್ನು ಸಮರ್ಥಿಸಿಕೊಂಡಿದ್ದು ಪಾಸ್ವರ್ಡ್ ಸಮಸ್ಯೆಯಿಂದ ವಿವರ ಸಲ್ಲಿಸಲು ವಿಳಂಬವಾಗಿದೆ ಎಂದು ತಿಳಿಸಿದೆ.

ಕ್ರಿಕೆಟ್ ಆಟಗಾರರೆಲ್ಲರೂ ತಂತ್ರಜ್ಞಾನ ಬಳಕೆಯಲ್ಲಿ ಪಳಗಿದವರೇ ಆಗಿದ್ದಾರೆ ಆದರೂ ಕೆಲವರಿಗೆ ವಿವರಗಳನ್ನು ತುಂಬಲು ಆಗುತ್ತಿಲ್ಲ. ಇನ್ನು ಕೆಲವರಿಗೆ ಸಮಯ ಸಿಗುತ್ತಿಲ್ಲ. ಅದೇನೇ ಇರಲಿ ಅವರು ಪ್ರತಿನಿಧಿಸುವ ಸಂಸ್ಥೆಯೂ ಇದಕ್ಕೆ ಜವಾಬ್ದಾರಿಯಾಗಿದ್ದು, ಆಟಗಾರರ ಮಾಹಿತಿ ಒದಗಿಸಬೇಕಿತ್ತು. ಈ ಬಗ್ಗೆ  ಬಿಸಿಸಿಐ ಈ ಹಿಂದೆ ಒಪ್ಪಿಕೊಂಡಿದೆ ಆದ್ದರಿಂದ ಸಂಸ್ಥೆ ಮಾಹಿತಿ ಅಪ್ಲೋಡ್ ಮಾಡಬೇಕಾಗಿತ್ತು ಎಂದು ನಾಡಾ ಮಹಾ ನಿರ್ದೇಶಕ ನವೀನ್ ಅಗರವಾಲ್  ತಿಳಿಸಿದ್ದಾರೆ.

ಇನ್ನು ಕ್ರಿಕೆಟಿಗರ ಮಾಹಿತಿ ಸಮರ್ಪಕವಾಗಿ ಅಪ್ಲೋಡ್ ಆಗದೇ ಇರುವುದಕ್ಕೆ ಬಿಸಿಸಿಐ ಈಗಾಗಲೇ ಕಾರಣ ನೀಡಿದೆ. ಸಾಫ್ಟ್ ವೇರ್ ನ ಪಾಸ್ ವರ್ಡ್ ಗೆ  ಸಂಬಂಧಿಸಿದ ಸಮಸ್ಯೆಯಾಗಿತ್ತು ಈಗ ಅದನ್ನು ಸರಿಪಡಿಸಲಾಗಿದೆ ಎಂದು ವಿವರಿಸಿದೆ. ಆದರೆ ತಾಂತ್ರಿಕ ಅಂಶಗಳನ್ನು ಪರಿಶೀಲಿಸಿದ ಬಳಿಕವಷ್ಟೇ ಸತ್ಯಾಸತ್ಯತೆ ತಿಳಿಯಲಿದೆ ಎಂದು ನವೀನ್ ಹೇಳಿದ್ದಾರೆ.

ಗಂಭೀರ ತಪ್ಪು ಎಸಗಿದರೆ ಅಮಾನತು

ಮಾಹಿತಿ ನೀಡಲು ಸತತ ಮೂರು ಬಾರಿ ವಿಫಲವಾದರೆ ಉದ್ದೀಪನಾ ಮದ್ದು ತಡೆ ನಿಯಮದಡಿ (ಎಡಿಆರ್ ಬಿ) ಮೊದಲ ತಪ್ಪು ಎಂದು ಪರಿಗಣಿಸಲಾಗುತ್ತದೆ. ಜತೆಗೆ ತಪ್ಪೆಸಗಿರುವುದು ಸಾಬೀತಾದರೆ ವಿಚಾರಣೆಗಾಗಿ ಎರಡು ವರ್ಷ ಕಾಲ ಅಮಾನತು ಶಿಕ್ಷೆ ಅನುಭವಿಸಬೇಕಾಗುತ್ತದೆ.

ಈ ಕುರಿತು ಬಿಸಿಸಿಐನ ಹಿರಿಯ ಪದಾಧಿಕಾರಿಯೊಬ್ಬರು ಮಾತನಾಡಿದ್ದು, ಲಾಕ್ ಡೌನ್ ಅವಧಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸತತವಾಗಿ ಚಾಟ್ ಮಾಡುವವರಿಗೆ ಸಾಫ್ಟ್ ವೇರ್ ನಲ್ಲಿ ಮಾಹಿತಿ ತುಂಬಲು ಕಷ್ಟವಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

ಇನ್ನು ಆಟಗಾರರಿಗೆ ಇದು ಸಮಸ್ಯೆಯಾಗಿದ್ದರೆ ಸಂಸ್ಥೆಯೇ ಅದರ ಜವಾಬ್ದಾರಿ ತೆಗೆದುಕೊಂಡು ವಿವರವನ್ನು ತುಂಬಬೇಕಿತ್ತಲ್ಲವೇ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ KKRTC ರಾಯಚೂರು: ಲಿಂಗಸುಗೂರು ಘಟಕ ವ್ಯವಸ್ಥಾಪಕ, ಡಿಸಿ ಅಮಾನತಿಗೆ ಕರವೇ ಆಗ್ರಹ ಮೈಸೂರು: ಸಾಲದ ಸುಳಿಗೆ ಸಿಲುಕಿದ KSRTC ಕಂಡಕ್ಟ‌ರ್: ನಾಲೆಗೆ ಹಾರಿ ಆತ್ಮಹತ್ಯೆ ಎಸ್‌.ಎಂ.ಕೃಷ್ಣ ಇನ್ನಿಲ್ಲ- ಪ್ರೇಮ ಕೃಷ್ಣಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮುಶೋಕ ಸಂದೇಶ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ, ಮಾಜಿ ಸಿಎಂಗಳು ಸೇರಿ ಅನೇಕ ಗಣ್ಯರ ಸಂತಾಪ ಮಾಜಿ ಸಿಎಂ SMK ನಿಧನ: ನಾಳೆ ಶಾಲಾ- ಕಾಲೇಜು, ಕಚೇರಿಗಳಿಗೆ ರಜೆ ಘೋಷಣೆ ಅಕ್ರಮ ಪಡಿತರ ವಿರುದ್ಧ ವಿಶೇಷ ಕಾರ್ಯಾಚರಣೆ: ಆಹಾರ ಸಚಿವ ಮುನಿಯಪ್ಪ KSRTC ನಿವೃತ್ತ ನೌಕರರಿಗೆ ಫ್ರೀ ಪಾಸ್‌ ಕೊಡಿ: ಹಣ ಕಟ್ಟಿದ ಮೇಲೆ ಪಾಸ್‌ ನೀಡುವುದು ಸಲ್ಲ BMTC- ಅನ್ಯ ಭಾಷೆ ಆಧಾರ್‌ಕಾರ್ಡ್‌ ವಿಳಾಸ ಕರ್ನಾಟಕದಾಗಿದ್ದಲ್ಲಿ ಮಾನ್ಯ ಮಾಡಿ: ಸಿಟಿಎಂ ಆದೇಶ