Please assign a menu to the primary menu location under menu

NEWSದೇಶ-ವಿದೇಶ

ದೇಶದಲ್ಲಿ ಕೊರೊನಾ ಅಟ್ಟಹಾಸ, 24 ಗಂಟೆಯಲ್ಲಿ 11.5 ಸಾವಿರ ಮಂದಿಯಲ್ಲಿ ಪಾಸಿಟಿವ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು ಕಳೆದ 24ಗಂಟೆಯಲ್ಲಿ ಮತ್ತೆ ಹೊಸದಾಗಿ 11,502 ಮಂದಿಯಲ್ಲಿ ಸೋಂಕು ಹರಡಿದ್ದು, ಜನತೆ ಆತಂಕ ವ್ಯಕ್ತಪಡಿಸಿದ್ದಾರೆ.

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3.32 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

ದೇಶದಲ್ಲಿ ಒಟ್ಟಾರೆಯಾಗಿ 3,32,424 ಮಂದಿಯಲ್ಲಿ ಸೋಂಕು ಕಾಣಸಿಕೊಂಡಿದೆ. ಅದರಲ್ಲಿೊ ಭಾನುವಾರ ಒಂದೇ ದಿನ 325 ಮಂದಿ ಮಹಾಮಾರಿಗೆ ಅಸುನೀಗಿದ್ದು, ಸಾವಿನ ಸಂಖ್ಯೆ ಕೂಡ 9520ಕ್ಕೆ ಏರಿಕೆಯಾಗಿದೆ.

3.32 ಲಕ್ಷ ಮಂದಿ ಸೋಂಕಿತರ ಪೈಕಿ 1,69,798 ಮಂದಿ ಗುಣಮುಖರಾಗಿದ್ದು, ಪ್ಇನ್ನೂ 1,53,106 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

ದೇಶದಲ್ಲಿ ಪತ್ತೆಯಾಗಿರುವ ಒಟ್ಟಾರೆ ಸೋಂಕಿತರ ಪೈಕಿ ಮಹಾರಾಷ್ಟ್ರ ರಾಜ್ಯದ ಪಾಲು ಹೆಚ್ಚಾಗಿದೆ. ಭಾನುವಾರ ಈ ರಾಜ್ಯದಲ್ಲಿ 3,390 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,07,958ಕ್ಕೆ ಏರಿಕೆ ಆಗಿದೆ.

ನ್ಯೂಡೆಲ್ಲಿ 2,224, ತಮಿಳುನಾಡಿನಲ್ಲಿ 1,947, ಗುಜರಾತ್‌ನಲ್ಲಿ 511, ಪಶ್ಚಿಮ ಬಂಗಾಳ ರಾಜ್ಯದಲ್ಲಿ 389, ಕರ್ನಾಟಕದಲ್ಲಿ 176 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

Leave a Reply

error: Content is protected !!
LATEST
ಚನ್ನರಾಯಪಟ್ಟಣ ರೈತ ನಿಯೋಗದಿಂಸ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ