Please assign a menu to the primary menu location under menu

NEWSದೇಶ-ವಿದೇಶ

ದೇಶ ಮತ್ತೆ ಅಭಿವೃದ್ಧಿ ಪಥದತ್ತ ಸಾಗಲಿದೆ

ವೀಡಿಯೊ ಕಾನ್ಫರೆನ್ಸ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶ್ವಾಸ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೋವಿಡ್‌-19 ನಡುವೆ ಭಾರತ ಮತ್ತೆ ಅಭಿವೃದ್ಧಿಯ ಪಥದಲ್ಲಿ ಸಾಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿಯ (ಸಿಐಐ) ವಾರ್ಷಿಕ ಅಧಿವೇಶನ 2020 ಹಿನ್ನೆಲೆಯಲ್ಲಿ ವೀಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಕೊರೊನಾ ಸೋಂಕಿನಿಂದ ಜೀವ ಉಳಿಸಿಕೊಳ್ಳುವ ಜತೆಗೆ ದೇಶದ ಅರ್ಥ ವ್ಯವಸ್ಥೆಯನ್ನು ಮೇಲೆತ್ತುವ ಕೆಲಸಕ್ಕೆ ನಾವು ಮುಂದಾಗಬೇಕಿದೆ. ಆ ನಿಟ್ಟಿನಲ್ಲಿ ನಾವು ಸಾಗುತ್ತಿದ್ದೇವೆ ಎಂದು ಹೇಳಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಸ್ವಾವಲಂಬಿ ಭಾರತ ಕಟ್ಟಲು ರೈತ ಉದ್ಯಮಿ ಮತ್ತು ವ್ಯಾಪಾರಿಗಳು ನಮ್ಮೊಂದಿಗೆ ಕೈ ಜೋಡಿಸಿ ಎಂದು ಕರೆ ನೀಡಿದ ಅವರು, ಆರ್ಥಿಕತೆಯ ಬೆಳವಣಿಗೆ ಶೀಘ್ರದಲ್ಲೇ ಮರಳಲಿದೆ ಎಂದು ಹೇಳಿದರು.

ಅನ್‌ಲಾಕ್ ಫೇಸ್ -ಒನೊಂದಿಗೆ ಭಾರತ ಈಗಾಗಲೇ ತನ್ನ ಬೆಳವಣಿಗೆಯನ್ನು ಮರಳಿ ಪಡೆಯಲು ಪ್ರಾರಂಭಿಸಿದೆ. ಕೊರೊನಾ ವೈರಸ್ ನಮ್ಮ ಬೆಳವಣಿಗೆಗೆ ಆಮೆವೇಗ ನೀಡಿದೆ ಎಂಬುದು ನಿಜವಾಗಿದ್ದರೂ, ಭಾರತವು ಈಗ ಲಾಕ್‌ಡೌನ್ ಅನ್ನು ಬಿಟ್ಟು ಅನ್‌ಲಾಕ್ ಹಂತ 1 ಕ್ಕೆ ಪ್ರವೇಶಿಸಿದೆ. ಆದ್ದರಿಂದ ಒಂದು ರೀತಿಯಲ್ಲಿ, ನಾವು ಈಗಾಗಲೇ ನಮ್ಮ ಬೆಳವಣಿಗೆಯನ್ನು ಮರಳಿ ಪಡೆಯಲು ಪ್ರಾರಂಭಿಸಿದ್ದೇವೆ. ಭಾರತದ ಸಾಮರ್ಥ್ಯಗಳು, ಬಿಕ್ಕಟ್ಟು ನಿರ್ವಹಣೆ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ನಾವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಜತೆಯಲ್ಲೇ  ಆರ್ಥಿಕ ಚೇತರಿಕೆಗೆ ಸಂಬಂಧಿಸಿದ   ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು  ಹೇಳಿದರು.

ಕೊರೊನಾ ವೈರಸ್ ವಿರುದ್ಧ ಹೋರಾಡುವುದರ ಜೊತೆಗೆ ಆರ್ಥಿಕತೆಯನ್ನು ಬಲಪಡಿಸುವುದು ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ. ದೀರ್ಘಾವಧಿಯಲ್ಲಿ ದೇಶದ ಜನತೆಗೆ ಸಹಾಯ ಮಾಡುವ ನಿರ್ಧಾರಗಳನ್ನು ಸರ್ಕಾರ ತೆಗೆದುಕೊಂಡಿದೆ ಎಂದು ಹೇಳಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಲಾಕ್‌ಡೌನ್‌ ಬಗ್ಗೆ ಸಮಯಕ್ಕೆ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಾಗಿತ್ತು. ಕೊರೊನಾ ಕುರಿತ ಮುಂಜಾಗ್ರತೆ ತೆಗೆದುಕೊಂಡಿರುವ ಬಗ್ಗೆ ನಮ್ಮ ದೇಶವನ್ನು ಇತರರೊಂದಿಗೆ ಹೋಲಿಸಿದಾಗ, ಲಾಕ್‌ಡೌನ್ ನಮಗೆ ಹೇಗೆ ಸಹಾಯ ಮಾಡಿದೆ ಎಂಬುದನ್ನು ತಿಳಿದುಕೊಳ್ಳಬಹುದು ಎಂದು ಹೇಳಿದರು.

ಬಡ ಮತ್ತು ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ನೀಡುವ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಯಡಿ 53,000 ಕೋಟಿ ರೂ.ಗಿಂತ ಹೆಚ್ಚಿನ ಆರ್ಥಿಕ ನೆರವು ನೀಡಲಾಗಿದೆ ಎಂದು ಮೋದಿ  ವಿವರಿಸಿದರು. ಇನ್ನು ಮುಂದುವರಿದು ಕಲ್ಲಿದ್ದಲು ಗಣಿಗಾರಿಕೆ ಕ್ಷೇತ್ರ ಸುಧಾರಣೆಯಾಗಿದೆ. ಇಂದು ವಿಶ್ವದಲ್ಲೇ ಕಲ್ಲಿದ್ದಲೂ ಗಣಿಗಾರಿಕೆಯಲ್ಲಿ ನಾವು ಮೂರನೆ ಸ್ಥಾನದಲ್ಲಿ ಇದ್ದೇವೆ ಎಂದು ಹೇಳಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಸಣ್ಣ ಮತ್ತು ಮಧ್ಯಮ ಉದ್ದಿಮೆಗಳು ದೇಶ ಅಭಿವೃದ್ಧಿಗೆ ಪೂರಕವಾಗಿವೆ. ಇವುಗಳಿಂದ ದೇಶದ ಆರ್ಥ ವ್ಯವಸ್ಥೆ ಬಲಗೊಳ್ಳಲಿದೆ ಎಂಬ ವಿಶ್ವಾಸ ನನಗಿದೆ. ಅಂತ್ಯಯೇ ದೇಶದ ಬೆನ್ನೆಲುಬಾಗಿರುವ ರೈತರು ತಾವು ಬೆಳೆದ ಬೆಳೆಯನ್ನು ಯಾರ ಹಂಗು ಇಲ್ಲದೇ ಮಾರಾಟ ಮಾಡಲಿ ಎಂಬ ಉದ್ದೇಶದಿಂದ ಮುಕ್ತ ಮಾರುಕಟ್ಟೆ ವುವಸ್ಥೆಯನ್ನ ಜಾರಿಗೆ ತರಲಾಗಿದೆ. ಇದರಿಂದ ರೈತರಿಗೆ ಲಾಭದ ಜತೆಗೆ ತಾವು ಇಚ್ಛಿಸಿದ ರೀತಿ ವ್ಯವಹರಿಸಬಹುದು. ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ