ನ್ಯೂಡೆಲ್ಲಿ: ರೇಪೋ ದರ ಕಡಿತ ಮಾಡಿದ್ದು, ಎಲ್ಲಾ ರೀತಿಯ ಸಾಲಗಳ ಇಎಂಐ ಪಾವತಿಗೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಉಂಟಾಗಿರುವ ಲಾಕ್‌ಡೌನ್‌ನಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಸಂಕಷ್ಟಕ್ಕೆ ಸಿಲುಕಿದೆ. ಈ ನಡುವೆ ಜನರು ಹಣದ ಸಮಸ್ಯೆಯನ್ನು ಎದುರಿಸುತ್ತಿದ್ದು, ಅದನ್ನು ನಿವಾರಿಸುವ ಜವಾಬ್ದಾರಿ ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಶೇ.4.4 ರಷ್ಟಿದ್ದ ರೇಪೋದರವನ್ನು ಶೇ.4ಕ್ಕೆ ಇಳಿಕೆ ಮಾಡಲಾಗಿದೆ. ಇದನ್ನು 40 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದ್ದು, ಇದರಿಂದಾಗಿ ಗೃಹಸಾಲ, ವಾಹನ ಹಾಗೂ ವೈಯಕ್ತಿಕ ಸಾಲದ ಮೇಲಿನ ಬಡ್ಡಿದರದಲ್ಲೂ ಇಳಿಕೆ ಮಾಡಿದಂತ್ತಾಗಿದೆ.
ಇನ್ನು ಮೂರು ತಿಂಗಳ ಇಎಂಐ ಪಾವತಿಯನ್ನು ಮುಂದೂಡಲಾಗಿದ್ದು, ಇದರಿಂದ ಆಗಸ್ಟ್ 31ರ ವರೆಗೂ ಯಾವುದೇ ಸಾಲವನ್ನು ಮರುಪಾವತಿಸದ್ದಿದ್ದರೂ ಹೆಚ್ಚುವರಿ ಬಡ್ಡಿ ವಿಧಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕೊರೊನಾ ಸೋಂಕಿನಿಂದ ಜಗತ್ತಿನಲ್ಲಿ ದೊಡ್ಡಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಇದರಿಂದ ಇಂದು ದೇಶದ ಆರ್ಥಿಕತೆಗೂ ಸಂಕಷ್ಟ ಉಂಟಾಗಿದ್ದರೂ ಕೃಷಿ ಕ್ಷೇತ್ರ ಮಾತ್ರ ಆಶಾದಾಯಕವಾಗಿದೆ ಎಂದು ಹೇಳಿದ್ದಾರೆ. ಇದರಿಂದ ದೇಶದಲ್ಲಿ ಆಹಾರ ಸಮಸ್ಯೆ ಇರುವುದಿಲ್ಲ. ಹೀಗಾಗಿ ನಾವು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಆಹಾರ ಉತ್ಪಾದನೆಯಲ್ಲಿ ಕೊಂಚ ಸಮಸ್ಯೆ ಇದೆ ಎಂದು ತಿಳಿಸಿದ್ದಾರೆ.
ಆಹಾರ ಹಣದುಬ್ಬರ ಏಪ್ರಿಲ್‌ನಲ್ಲಿ ಶೇ.8.6ಕ್ಕೆ ಹೆಚ್ಚಾಗಿದೆ. ಲಾಕ್‌ಡೌನ್ ನಂತರ ಖಾಸಗಿ ಭೋಗದ ಪ್ರಮಾಣವೂ ಕಡಿಮೆಯಾಗಿದೆ. ಔದ್ಯಮಿಕ ಉತ್ಪಾದನೆಗೂ ಹೊಡೆತ ಬಿದ್ದಿದೆ. ಇದಷ್ಟೇ ಅಲ್ಲದೇ ಹೂಡಿಕೆಗೆ ಸಂಚಕಾರ ಎದುರಾಗಿದೆ. ಆಮದು ಶೇ.58ರಷ್ಟು ತಗ್ಗಿದೆ. ಇನ್ನೊಂದೆಡೆ ಆಹಾರ ಉತ್ಪಾದನೆಯಲ್ಲೂ ಕುಸಿತ ಕಂಡಿದೆ ಎಂದು ವಿಶ್ಲೇಷಣೆ ಮಾಡಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail