NEWSದೇಶ-ವಿದೇಶನಮ್ಮರಾಜ್ಯವಿಜ್ಞಾನ

ಇಂಧನ ಬೆಲೆ ಏರಿಕೆ ವಾಪಸ್‌ಗೆ ಸೋನಿಯಾ ಗಾಂಧಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ತೈಲ ಬೆಲೆ ಏರಿಕೆಯನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ

ದೇಶದಲ್ಲಿ ಕೊರೊನಾ ವೈರಸ್ ವ್ಯಾಪಿಸಿರುವ ಈ ಸಂಕಷ್ಟದ ಸಮಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡುವ ಸರ್ಕಾರದ ನಿರ್ಧಾರ ವಿವೇಕ ಶೂನ್ಯವಾದದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ಜನರು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವಾಗ ಸರ್ಕಾರವು ತೈಲೋತ್ಪನ್ನಗಳ ಬೆಲೆ ಏರಿಕೆ ಲಾಭ ಮಾಡಿಕೊಳ್ಳಬಾರದು. ಡೀಸೆಲ್ ಪೆಟ್ರೋಲ್ ಬೆಲೆ ಸತತ ಹತ್ತು ದಿನಗಳ ಕಾಲ ಏರಿಕೆ ಕಂಡಿದೆ ಇದರಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವ ಈ ಸಮಯದಲ್ಲಿ ಈ ರೀತಿಯ ನಿರ್ಧಾರ ಸರ್ಕಾರಕ್ಕೆ ಸಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾರ್ಚ್ ತಿಂಗಳಿನಿಂದ ಆರಂಭಿಸಿ ಕನಿಷ್ಠ ಹತ್ತು ಬಾರಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಿದ್ದರಿಂದ ಬೇಸರವಾಗಿದೆ. ಸರ್ಕಾರದ ಈ ನಿರ್ಧಾರದಿಂದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 2.6 ಲಕ್ಷ ಕೋಟಿ ರೂಪಾಯಿ ಹರಿದು ಬಂದಿದೆ ಎಂದು ಸೋನಿಯಾ ಗಾಂಧಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ

ಇಂಧನ ದರ ಏರಿಕೆ ನಿರ್ಧಾರವನ್ನು ವಾಪಸ್ ಪಡೆದು ಲಾಭವನ್ನು ನೇರವಾಗಿ ಜನರಿಗೆ ವರ್ಗಾಯಿಸಬೇಕು. ದೇಶದ ಜನರು ಸಬಲೀಕರಣ ಹೊಂದಬೇಕು ಎಂಬ ನಿಲುವು ನಿಮ್ಮದಾಗಿದ್ದರೆ ಅಥವಾ ನೀವು ಬಯಸಿದ್ದರೆ ಜನಸಾಮಾನ್ಯರ ಮೇಲೆ ಹೇರುತ್ತಿರುವ ಆರ್ಥಿಕ ಹೊರೆಯನ್ನು ತಗ್ಗಿಸಲು ಮುಂದಾಗಬೇಕೆಂದು ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ