ನ್ಯೂಡೆಲ್ಲಿ: ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಗೆ ಕೊರೊನಾ ಪಾಸಿಟಿವ್ ಬಂದಿದ್ದು ಇದರಿಂದ ಆರೋಪಿಗಳಿರೋ ತಿಹಾರ್ ಜೈಲಿನಲ್ಲಿ ಕೋವಿಡ್-19 ಭಯ ಕಾಡುತ್ತಿದೆ.
ಕೆಲ ದಿನಗಳ ಹಿಂದೆ ಆರೋಪಿಯನ್ನು ಆತ್ಯಾಚಾರ ಪ್ರಕರಣದಲ್ಲಿ ತಿಹಾರ್ ಜೈಲಿಗೆ ಕಳುಹಿಸಲಾಗಿತ್ತು. ಜೈಲ್ ನಂ. 2ರಲ್ಲಿ ಆ ಆರೋಪಿಯನ್ನು ಇರಿಸಲಾಗಿತ್ತು. ಮೇ 9ರಂದು ಆರೋಪಿ ಅತ್ಯಾಚಾರ ಎಸಗಿದ್ದ ಸಂತ್ರಸ್ತೆಗೆ ಕೊರೊನಾ ಸೋಂಕು ತಗುಲಿರುವ ವಿಚಾರ ಬೆಳಕಿಗೆ ಬಂದಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಈ ವಿಚಾರ ತಿಳಿಯುತ್ತಿದ್ದಂತೆ ಎಚ್ಚೆತ್ತ ಜೈಲಧಿಕಾರಿಗಳು ಆರೋಪಿ ಸೇರಿದಂತೆ ಇಬ್ಬರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದಾರೆ. ಬಳಿಕ ಅವರನ್ನು ಪ್ರತ್ಯೇಕ ಸೆಲ್‌ನಲ್ಲಿರಿಸಿ ಕ್ವಾರಂಟೈನ್ ಮಾಡಲಾಗುತ್ತಿದೆ. ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಜೈಲಿಗೆ ಬರುವವರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಸದ್ಯ ಈ ಆರೋಪಿಗಳ ವರದಿಗಾಗಿ ಜೈಲ್ ಅಧಿಕಾರಿಗಳು ಕಾಯುತ್ತಿದ್ದಾರೆ.
ಒಂದು ವೇಳೆ ಇವರ ವರದಿ ಪಾಸಿಟಿವ್ ಬಂದರೆ ಜೈಲಿನಲ್ಲಿ ಎಷ್ಟು ಮಂದಿ ಸಂಪರ್ಕದಲ್ಲಿದ್ದರೋ ಅಷ್ಟು ಮಂದಿ ಮತ್ತು ಅವರ ಕುಟುಂಬದವರನ್ನು ಪರೀಕ್ಷೆಗೊಳಪಡಿಸುವ ಜತೆಗೆ 14 ದಿನಗಳ ಕ್ವಾರಂಟೈನ್ ಮಾಡಬೇಕಾಗುತ್ತದೆ. ಇದರಿಂದ ಜೈಲಿನಲ್ಲಿರೋ ಬಹುತೇಕ ಅಧಿಕಾರಿಗಳು ಮತ್ತು ಕೈದಿಗಳನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಬೇಕಾಗುತ್ತದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail