NEWSದೇಶ-ವಿದೇಶ

ಇಂದು ರಾತ್ರಿ 8ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಲಿದ್ದಾರೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಇಂದು ರಾತ್ರಿ 8ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ. ದೇಶದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದ್ದು, ಅದಕ್ಕೆ ಕಡಿವಾಣ ಹಾಕುವ ಕುರಿತು ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುದನ್ನು ಈ ವೇಳೆ ತಿಳಿಸಲಿದ್ದಾರೆ ಎನ್ನಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಆದರೆ, ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ನಿನ್ನೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಕೊಟ್ಟ ಮಾಹಿತಿಯನ್ನು ಗಮನಿಸಿದರೆ ಇಂದು ಒಂದೇ ದಿನ 63 ಕೊರೊನಾ ಪಾಸಿಟಿವ್‌ ಕೇಸ್‌ಗಳು ರಾಜ್ಯದಲ್ಲಿ ಪತ್ತೆಯಾಗಿದ್ದು, ಲಾಕ್‌ಡೌನ್‌ ಸಡಿಲ ಗೊಳಿಸಿದರೆ ಮುಂದಾಗುವ ಪರಿಣಾಮಗಳನ್ನು ಇಂದಿಲ್ಲಿ ಉಲ್ಲೇಖಿಸುವ ಅಗತ್ಯವಿದೆ.

ಒಟ್ಟಾರೆ ಪ್ರಧಾನಿ ಮೋದಿ ಅವರು ದೇಶದಲ್ಲಿ ಕೊರೊನಾದಿಂದ ಉಂಟಾಗಿರುವ ಬಿಕ್ಕಟ್ಟಿನ ಬಗ್ಗೆ ಯಾವ ನಿರ್ಧಾರ ತೆಗೆದುಕೊಳ್ಳುವರೋ ಎಂಬುದನ್ನು ಇಂದು ರಾತ್ರಿ 8 ಗಂಟೆಗೆ ಅವರು ಮಾತನಾಡುವ ವೇಳೆ ತಿಳಿದುಕೊಳ್ಳ ಬಹುದಾಗಿದ್ದು, ದೇಶದ ಜನರು ಅದಕ್ಕಾಗಿ ಕಾತುರದಿಂದ ಕಾದು ಕುಳಿತಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply