NEWSದೇಶ-ವಿದೇಶ

ಭಾರತದಲ್ಲಿ 81 ಸಾವಿರ ಗಡಿದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ:  ಭಾರತದಲ್ಲಿ ಕೊರೊನಾ ಅಟ್ಟಹಾಸ ದಿನ ಕಳೆದಂತೆ ಹೆಚ್ಚಾಗುತ್ತಲೇ ಇದ್ದು, ಕೊರೊನಾ ಸೋಂಕಿತರ ಸಂಖ್ಯೆ 81,997ಕ್ಕೆ ಏರಿದೆ. ಈವರೆಗೆ 2,649 ಜನರು ಬಲಿಯಾಗಿದ್ದಾರೆ.

ಇನ್ನು 27,969 ಸೋಂಕಿತರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಈ ನಡುವೆ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಅದರಲ್ಲಿ ಮಹಾರಾಷ್ಟ್ರದಲ್ಲಿ ಈವರೆಗೆ 1,019 ಮಂದಿ ವಿಶ್ವಮಾರಿಯಿಂದ ಅಸುನೀಗಿದ್ದಾರೆ.  ಒಟ್ಟು 27,524 ಮಂದಿಗೆ ಈವರೆಗೆ ಸೋಂಕು ತಗುಲಿದೆ. 6,059 ಮಂದಿ ಸೋಂಕಿನಿಂದ ಇಲ್ಲಿ ಗುಣಮುಖರಾಗಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಅದೇರೀತಿ ಗುಜರಾತ್‍ನಲ್ಲಿ 9,592 ಮಂದಿ ಸೋಂಕಿಗೆ ತುತ್ತಾಗಿದ್ದು, 586 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 9,674 ಮಂದಿಗೆ ಕೊರೊನಾ ತಗುಲಿದ್ದು, 66 ಮಂದಿ ಮೃತಪಟ್ಟಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 8,470 ಮಂದಿ ತುತ್ತಾಗಿದ್ದು, 115 ಮಂದಿ ಮೃತಪಟ್ಟಿದ್ದಾರೆ. 3,045 ಮಂದಿ ಸೋಂಕು ಗೆದ್ದು ಬಂದಿದ್ದಾರೆ.

ಕರ್ನಾಟಕದಲ್ಲಿ ಈವರೆಗೆ 987 ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 35ಕ್ಕೆ ಏರಿದೆ. ಒಟ್ಟು 460 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆಂಧ್ರಪ್ರದೇಶದಲ್ಲಿ 2,205 ಮಂದಿಗೆ ಸೋಂಕು, 48 ಮಂದಿ ಮೃತ. 1,192 ಜನರು ರೋಗದಿಂದ ಮುಕ್ತಗೊಂಡಿದ್ದಾರೆ.

ತೆಲಂಗಾಣದಲ್ಲಿ 1,414 ಮಂದಿ ಕೊರೊನಾಗೆ ತುತ್ತಾಗಿದ್ದು, 34 ಮಂದಿ ಬಲಿಯಾಗಿದ್ದಾರೆ. ಕೇರಳದಲ್ಲಿ 561 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ನಾಲ್ವರು ಮೃತಪಟ್ಟಿದ್ದಾರೆ. 493 ಮಂದಿ ಕೊರೊನಾದಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...