Vijayapatha – ವಿಜಯಪಥ
Friday, November 1, 2024
NEWSನಮ್ಮರಾಜ್ಯರಾಜಕೀಯ

ವೀರಶೈವ-ಲಿಂಗಾಯತ ಸಮುದಾಯದ ಒಬಿಸಿ ವಿಚಾರ: ಸಿಎಂ ಬಿಎಸ್‌ವೈ ನಡೆಗೆ ಹೈಕಮಾಂಡ್ ಕಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಡೆ ಬಗ್ಗೆ ಬಿಜೆಪಿ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇನ್ನು ವೀರಶೈವ-ಲಿಂಗಾಯತ ಸಮುದಾಯವನ್ನು ಒಬಿಸಿ ಸೇರಿಸುವ ವಿಚಾರಕ್ಕೆ ಹೈಕಮಾಂಡ್ ಕೆಂಗಣ್ಣು ಬೀರಿರುವುದು ತಿಳಿದುಬಂದಿದೆ. ಜತೆಗೆ ಪರಿಸ್ಥಿತಿ ದಿನೇದಿನೆ ಇಕ್ಕಟ್ಟಾಗುತ್ತಿದೆ. ಆಂತರಿಕವಾಗಿ ಅಸಮಾಧಾನ ಭುಗೆಲೇಳುತ್ತಿದ್ದು, ಹೈಕಮಾಂಡ್ ಕೂಡ ಸಿಎಂ ಅವರ ಕೆಲ ನಡೆಗಳ ಬಗ್ಗೆ ಕಡಿಕಾರುತ್ತಿದೆ.

ಇನ್ನು ಪಕ್ಷದ ವೇದಿಕೆಯಲ್ಲಿ, ಕೋರ್ ಕಮಿಟಿಯಲ್ಲಿ ಮತ್ತು ಹೈಕಮಾಂಡ್ ನಾಯಕರ ಜತೆ ಚರ್ಚೆ ನಡೆಸದೆಯೇ ನಿರ್ಧಾರ ಕೈಗೊಂಡಿದ್ಧಾರೆ ಎಂಬುದು ಹೈಕಮಾಂಡ್​ ಕೋಪಕ್ಕೆ ಕಾರಣ ಎನ್ನಲಾಗಿದೆ.

ಕೇಂದ್ರದಿಂದ ಕೆಲ ಪ್ರಭಾವಿ ನಾಯಕರು ಖುದ್ದಾಗಿ ಯಡಿಯೂರಪ್ಪಗೆ ಕರೆ ಮಾಡಿ ಈ ವಿಚಾರದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಅದಾದ ನಂತರ ಯಡಿಯೂರಪ್ಪ ಅವರು ವೀರಶೈವ-ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸುವ ಪ್ರಸ್ತಾಪವನ್ನು ಕೈಬಿಟ್ಟರೆ ಎನ್ನಲಾಗಿದೆ. ಆದರೆ, ಸಿಎಂ ತಾನು ದೆಹಲಿಗೆ ಹೋಗಿ ಕೇಂದ್ರ ನಾಯಕರನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ.

ಈ ನಡುವೆ ಈಗ ಆಗಿರುವ ಬೆಳವಣಿಗೆ ಅವರಿಗೆ ಮುಖಭಂಗವಾದಂತಾಗಿದೆ. ಹೈಕಮಾಂಡ್ ಮಟ್ಟದಲ್ಲಿ ಇತ್ತೀಚಿನ ದಿನಗಳಲ್ಲಿ ಯಡಿಯೂರಪ್ಪಗೆ ಇದೇ ಮೊದಲ ಬಾರಿಗೆ ಈ ಹಿನ್ನಡೆ ಆಗಿದೆ ಎಂದು ಪಕ್ಷದೊಳಗೇ ಗುಸುಗುಸು ಆರಂಭವಾಗಿದೆ.

ಸಚಿವಾಕಾಂಕ್ಷಿಗಳ ಬಂಡಾಯದ ಭೀತಿ
ಇನ್ನೊಂದೆಡೆ ಯಡಿಯೂರಪ್ಪ ಅವರಿಗೆ ಸಚಿವಾಕಾಂಕ್ಷಿಗಳ ಬಂಡಾಯದ ಭೀತಿ ಎದುರಾಗಿದೆ. ಅದರಲ್ಲೂ ಮೈತ್ರಿಪಾಳಯದಿಂದ ಸಿಡಿದು ಬಂದ 17 ಜನರ ಪೈಕಿ ಮಂತ್ರಿ ಆಗದೇ ಉಳಿದುಕೊಂಡಿರುವ ಆರ್. ಶಂಕರ್, ಎಂಟಿಬಿ ನಾಗರಾಜ್ ಮತ್ತು ಎಚ್. ವಿಶ್ವನಾಥ್ ಅವರಿಂದ ಒತ್ತಡ ಹೆಚ್ಚಾಗಿದೆ.

ಬೆನ್ನಿಗೆ ನಿಂತ ಕುರುಬ ಸಮುದಾಯದ ಸ್ವಾಮೀಜಿಗಳು
ಕಾಕತಾಳೀಯವಾಗಿ ಈ ಮೂವರೂ ಕೂಡ ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಈಗ ಕುರುಬ ಸಮುದಾಯದ ಸ್ವಾಮೀಜಿಗಳೂ ಕೂಡ ಈ ಮೂವರು ಮುಖಂಡರ ಬೆನ್ನಿಗೆ ನಿಂತು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.

ಈ ಮೂವರಿಗೆ ಸಚಿವ ಸ್ಥಾನ ಕೊಡುವುದರ ಜತೆಗೆ ಕುರುಬ ಸಮುದಾಯಕ್ಕೆ ಎಸ್​ಟಿ ಸ್ಥಾನಮಾನ ಕೊಡಬೇಕು. ನಿಗಮ ಸ್ಥಾಪನೆ ಮಾಡಿ 500 ಕೋಟಿ ರೂ. ಅನುದಾನ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಸಿಎಂ ಭೇಟಿಯಾಗಿ ಪ್ರತ್ಯೇಕ ಮಾತುಕತೆ
ಇನ್ನು ಎಚ್‌.ವಿಶ್ವನಾಥ್, ಆರ್. ಶಂಕರ್ ಮತ್ತು ಎಂಟಿಬಿ ನಾಗರಾಜ್ ತಮ್ಮ ಬೇಡಿಕೆಗಳನ್ನಿಟ್ಟುಕೊಂಡು ಇಂದು ಬೆಳಗ್ಗೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ.

ಈ ನಡುವೆ ಮುಖ್ಯಮಂತ್ರಿಗಳು ನಮ್ಮನ್ನು ನೋಡಿದ ಕೂಡಲೇ ಎರಡು ಮೂರು ದಿನಗಳಲ್ಲಿ ಮಂತ್ರಿ ಮಾಡುತ್ತೇನೆ ಎನ್ನುತಾರೆ. ಆದರೆ, ಇನ್ನೂ ಕೂಡ ನಿರ್ಧಾರ ಮಾಡಿಲ್ಲ. ಅವರ ಪಕ್ಷದಲ್ಲಿ ಯಾರನ್ನ ಬೇಕಾದರೂ ಮಂತ್ರಿ ಮಾಡಲಿ. ಆದರೆ, ತ್ಯಾಗ ಮಾಡಿ ಬಂದಿರುವವರನ್ನು ಮೊದಲು ಸಂಪುಟಕ್ಕೆ ಸೇರಿಸಿಕೊಳ್ಳಲಿ. ಈ ಕೆಲಸವನ್ನು ಆದಷ್ಟು ಬೇಗ ಮಾಡಲಿ ಎಂದು ಎಂಟಿಬಿ ನಾಗರಾಜ್ ಆಗ್ರಹಿಸಿದ್ದಾರೆ.

ಸಿಎಂ ಆದಷ್ಟೂ ಬೇಗ ಸಂಪುಟ ವಿಸ್ತರಣೆ ಮಾಡುತ್ತೇನೆಂದು ಹೇಳುತ್ತಲೇ ಬಂದಿದ್ದಾರೆ. ನಾವು ಕೂಡ ಬಹಳಷ್ಟು ನಿರೀಕ್ಷೆಯಲ್ಲಿದ್ದೇವೆ. ಅವರು ಬೇಗ ಸಂಪುಟ ವಿಸ್ತರಣೆ ಮಾಡಬೇಕು ಎಂದು ಆರ್. ಶಂಕರ್ ಒತ್ತಾಯಿಸಿದ್ದಾರೆ.

ಇನ್ನು ಎಚ್. ವಿಶ್ವನಾಥ್ ಮಾತನಾಡಿ, ಯಡಿಯೂರಪ್ಪ ಸಿಎಂ ಆಗಲು ಕಾರಣಕರ್ತರಾದವರಿಗೆ ಮಂತ್ರಿ ಮಾಡಬೇಕು. ನಮಗೆ ಸಚಿವ ಸ್ಥಾನ ನೀಡಬೇಕು. ಹಾಗೆಯೇ, ಕುರುಬ ಅಭಿವೃದ್ಧಿ ಪ್ರಾಧಿಕಾರ ಮಾಡಬೇಕು. ಸಮುದಾಯವನ್ನು ಎಸ್​ಟಿ ಪಟ್ಟಿಗೆ ಸೇರಿಸಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ