NEWSಶಿಕ್ಷಣ-

ಸಂಕ್ರಾಂತಿ ಬಳಿಕ ಆಫ್‌ಲೈನ್‌ ತರಗತಿ ಆರಂಭ: ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳಲ್ಲಿ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಸಂಕ್ರಾಂತಿ ಬಳಿಕ ಆಫ್‌ಲೈನ್‌ ತರಗತಿ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ, ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಸರ್ಕಾರಿ ಮತ್ತು ಖಾಸಗಿ ವಲಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು ಹಾಗೂ ಇಲಾಖೆಯ ಅಧಿಕಾರಿಗಳ ಜತೆ ಶುಕ್ರವಾರ ಸಭೆ ನಡೆಸಿದ ಸಚಿವರು ಬಳಿಕ ಈ ವಿಷಯ ಪ್ರಕಟಿಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಕುಲಪತಿಗಳು ಆಫ್‌ಲೈನ್‌ ತರಗತಿಗಳನ್ನು ಆರಂಭಿಸುವಂತೆ ಸಲಹೆ ನೀಡಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಸಮಾಲೋಚಿಸಿ ವರದಿ ನೀಡುವಂತೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಈಗಾಗಲೇ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಮತ್ತು ಇಂಜಿನಿಯರಿಂಗ್‌ ತರಗತಿಗಳ ಅಂತಿಮ ವರ್ಷದ ಮತ್ತು ಅಂತಿಮ ಸೆಮಿಸ್ಟರ್‌ನ ಆಫ್‌ಲೈನ್‌ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಆ ಯಶಸ್ಸಿನ ಆಧಾರದಲ್ಲಿ ಉಳಿದ ತರಗತಿಗಳನ್ನು ಶುರು ಮಾಡಲಾಗುವುದು. ಯುಜಿಸಿ ಮತ್ತು ಕೋವಿಡ್‌ ಮಾರ್ಗಸೂಚಿ ಪ್ರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಯುಜಿಸಿ ನಿಯಮದಂತೆ ಮಾರ್ಚ್‌ನಲ್ಲಿ ಪರೀಕ್ಷೆ ಮುಗಿಯಬೇಕಾಗುತ್ತದೆ. ಆದರೆ, ಹಲವು ವಿಶ್ವವಿದ್ಯಾಲಯಗಳ ಕಾಲೇಜುಗಳಲ್ಲಿ ಪಠ್ಯಕ್ರಮಗಳು ಪೂರ್ಣಗೊಂಡಿರದ ಕಾರಣ, ಏಪ್ರಿಲ್ ಅಥವಾ ಮೇನಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಈ ಬಗ್ಗೆ ಶೀಘ್ರವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮೇ ತಿಂಗಳಲ್ಲಿ ನಡೆಸಲಾಗುವುದು ಎಂದು ಈಗಾಗಲೇ ಘೋಷಿಸಲಾಗಿದೆ. ಇದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಉನ್ನತ ಶಿಕ್ಷಣದ ಶೈಕ್ಷಣಿಕ ವೇಳಾಪಟ್ಟಿಯನ್ನು ರೂಪಿಸಲಾಗುವುದು’ ಎಂದು ಹೇಳಿದರು.

ಇನ್ನು ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸುಮಾರು 15 ಸಾವಿರ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದರು. ಆಫ್‌ಲೈನ್‌ ತರಗತಿಗಳು ಪ್ರಾರಂಭವಾಗುವ ವೇಳೆಗೆ, ಈ ಉಪನ್ಯಾಸಕರ ಸೇವೆಯನ್ನು ಮುಂದುವರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪದವಿಯ ಎಲ್ಲ ತರಗತಿಗಳು ಆರಂಭವಾದ ಮೇಲೆ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಸೌಲಭ್ಯ ಒದಗಿಸಲಾಗುವುದು. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯೂ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದರು.

ಪರೀಕ್ಷೆಗೆ ಅವಸರ ಬೇಡ
ಖಾಸಗಿ ಕಾಲೇಜುಗಳಲ್ಲಿ ಬಹುತೇಕ ಪಠ್ಯಕ್ರಮ ಮುಗಿದಿದೆ. ಆದರೆ, ಸರ್ಕಾರಿ ಕಾಲೇಜುಗಳಲ್ಲಿ ಆಗಿಲ್ಲ. ಫೆಬ್ರುವರಿ–ಮಾರ್ಚ್‌ನಲ್ಲಿಯೇ ಪರೀಕ್ಷೆ ನಡೆಸಬೇಕು ಎಂದು ಕೆಲವು ಕುಲಪತಿಗಳು ಒತ್ತಾಯಿಸಿರುವುದು ಗೊತ್ತಾಗಿದೆ. ಒಂದು ಸೆಮಿಸ್ಟರ್‌ ಅವಧಿ 90 ದಿನ ಇರುತ್ತದೆ. ಈಗ ಕನಿಷ್ಠ 45 ದಿನಗಳಾದರೂ ಪಾಠ ಮಾಡಲು ಬೇಕು. ಒಂದೂವರೆ ತಿಂಗಳ ಕೆಲಸದ ದಿನಗಳ ನಂತರ ಪರೀಕ್ಷೆ ನಡೆಸುವುದು ಸೂಕ್ತ’ ಎಂದು ಸರ್ಕಾರಿ ಪದವಿ ಕಾಲೇಜುಗಳ ಅಧ್ಯಾಪಕರ ಸಂಘದ ಅಧ್ಯಕ್ಷ ಡಾ.ಟಿ.ಎಂ. ಮಂಜುನಾಥ್ ಹೇಳಿದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ