Vijayapatha – ವಿಜಯಪಥ
Saturday, November 2, 2024
CrimeNEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಯಾವುದೇ ಕ್ರಿಮಿನಲ್‌ ಕೇಸ್‌ ಇಲ್ಲದ ದಿಶಾ ರವಿ ಬಂಧನ ಖಂಡನೀಯ: ಪರಿಸರ ಕಾರ್ಯಕರ್ತೆಗೆ ವಿಪಕ್ಷಗಳ ಬೆಂಬಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ರೈತರ ಪ್ರತಿಭಟನೆಗೆ ಸಂಬಂಧಪಟ್ಟಂತೆ ಟೂಲ್ ಕಿಟ್ ಸಿದ್ದಪಡಿಸಿದ್ದ ಆರೋಪದಡಿ ಪರಿಸರ ಕಾರ್ಯಕರ್ತೆ ದಿಶಾ ರವಿ ಬಂಧನವನ್ನು ಕಾಂಗ್ರೆಸ್ ಸೇರಿ ವಿಪಕ್ಷಗಳ ಪ್ರಮುಖರು ಬಲವಾಗಿ ಖಂಡಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ದಿಶಾ ರವಿಗೆ ಸಂಪೂರ್ಣ ಬೆಂಬಲ ಸೂಚಿಸಿರುವ ವಿಪಕ್ಷ ನಾಯಕರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹುನ್ನಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಆದಷ್ಟು ಬೇಗನೆ ಬೇಗನೆ ಅರವರನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ವಿತ್ತ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಈ ಬಂಧನವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕೇಂದ್ರದ ಸರ್ವಾಧಿಕಾರಿ ಧೋರಣೆ ಆಡಳಿತದ ವಿರುದ್ಧ ಪ್ರತಿಭಟಿಸಲು ಎಲ್ಲಾ ವಿದ್ಯಾರ್ಥಿಗಳು ಹಾಗೂ ಯುವ ಜನತೆ ಒಗ್ಗೂಡಿ ದನಿ ಎತ್ತಬೇಕು ಎಂದು ಇದೇ ವೇಳೆ ಮನವಿ ಮಾಡಿದ್ದಾರೆ.

ಬೆಂಬಲ ವ್ಯಕ್ತಪಡಿಸಿರುವ ಮತ್ತೊಬ್ಬ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಇದು ನೀಚ ಕೃತ್ಯ ಇದು ಅನಪೇಕ್ಷಿತ ಕಿರುಕುಳ ಬೆದರಿಕೆ ಎಂದು ಆರೋಪಿಸಿದ್ದಾರೆ.

ಸಿಪಿಎಂ ಮುಖಂಡ ಸೀತಾರಾಮ್ ಯೆಚೂರಿ ಸಹ ಇದನ್ನು ಖಂಡಿಸಿದ್ದು, ಮೋದಿ ಆಡಳಿತವು ರೈತರ ಮೊಮ್ಮಗಳನ್ನು ದೇಶದ್ರೋಹದ ಆರೋಪದಡಿಯಲ್ಲಿ ಬಂಧಿಸುವ ಮೂಲಕ ಹೋರಾಟವನ್ನು ದುರ್ಬಲಗೊಳಿಸಬಹುದು ಎಂದುಕೊಂಡಿದ್ದಾರೆ. ಆದರೆ ವಾಸ್ತವವಾಗಿ ಇದರಿಂದ ಮತ್ತಷ್ಟು ಜಾಗೃತರಾಗಿ ಇದು ಪ್ರಜಾಪ್ರಭುತ್ವ ಹೋರಾಟವನ್ನು ಬಲಗೊಳಿಸುತ್ತದೆ ಎಂದು ಹೇಳಿದ್ದಾರೆ.

ಇನ್ನು ಕಾಂಗ್ರೆಸ್ ನಾಯಕ ಶಶಿತರೂರ್ ಸುದ್ದಿಯೊಂದನ್ನು ಉಲ್ಲೇಖಿಸುತ್ತಾ ದಿಶಾರವಿ ಬಂಧನ ದೇಶದ ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ರಾಜಕೀಯ ಭಿನ್ನಾಭಿಪ್ರಾಯದ ಮೇಲಿನ ದೌರ್ಜನ್ಯ ವಾಗಿದ್ದು ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರೆ.

ಕೇಂದ್ರ ಮಾಜಿ ಸಚಿವ ಆನಂದ್ ಶರ್ಮಾ ಕೂಡ ದಿಶಾ ರವಿಯವರ ಬಂಧನ ಅತ್ಯಂತ ದುರದೃಷ್ಟಕರ ಎಂದು ಹೇಳಿದ್ದಾರೆ. ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲದ ಯುವತಿಯ ಬಂಧನ ಹಾಗೂ ವಿಚಾರಣೆಯನ್ನು ಸಮರ್ಪಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಹೇಗೆ ಬೆಂಬಲಿಸಬೇಕು ಎಂಬುದಕ್ಕೆ ಸಂಬಂಧಪಟ್ಟಂತೆ ಟೂಲ್‌ಕಿಟ್‌ ಸಿದ್ದಪಡಿಸಿದ್ದ ಆರೋಪದಲ್ಲಿ ಬೆಂಗಳೂರಿನ 21 ವರ್ಷದ ಪರಿಸರ ಕಾರ್ಯಕರ್ತೆ ದಿಶಾ ರವಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನೆಯನ್ನು ಬೆಂಬಲಿಸಲು ಈ ಕಿಟ್‌ ಸಿದ್ದಪಡಿಸಿದ್ದರು ಎಂದು ಆರೋಪಿಸಲಾಗಿದೆ. ದೇಶದ್ರೋಹ ಜನರ ನಡುವೆ ದ್ವೇಷಕ್ಕೆ ಕುಮ್ಮಕ್ಕು ಮತ್ತು ಅಪರಾಧ ಒಳಸಂಚಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಈಕೆ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಸ್ವೀಡನ್ನ ಪರಿಸರ ಕಾರ್ಯಕರ್ತೆ ಗ್ರೇಟಾ ತಂಬರ್ಗ ಸೇರಿದಂತೆ ಹಲವು ಗಣ್ಯರು ಈ ಟೂಲ್ ಕಿಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಜನವರಿ 26ರ ಗಣರಾಜ್ಯೋತ್ಸವದ ದಿನ ರೈತರು ನಡೆಸಿದ ಟ್ರ್ಯಾಕ್ಟರ್ ಪರೆಡ್‌ ವೇಳೆ ಭಾರೀ ಹಿಂಸಾಚಾರ ನಡೆಯಿತು. ಅಲ್ಲದೆ ಗುಂಪೊಂದು ಕೆಂಪುಕೋಟೆಗೆ ಮೇಲೆರಿ ಧಾರ್ಮಿಕ ಧ್ವಜವನ್ನು ಹಾರಿಸಿತ್ತು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ