NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ದೈವದ ಮೇಲೆ ನಮ್ಮ ಕುಟುಂಬಕ್ಕಿರುವ ನಂಬಿಕೆ ಪ್ರಶ್ನಿಸುವವರು ಮೂರ್ಖರು: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಆಗಾಗ್ಗೆ ಈ ಮಾತು ಹೇಳುತ್ತಿರುತ್ತೇನೆ. ನಮ್ಮ ನಡುವಿನ ನಿಷ್ಕಪಟ, ಕಳಂಕವಿಲ್ಲದ ಜಾತ್ಯತೀತವಾದಿ ದೇವೇಗೌಡ ಅವರು. ತಮ್ಮ ಧರ್ಮದ ಬಗ್ಗೆ ಆಳವಾದ ನಂಬಿಕೆ ಇದ್ದೂ, ಪರಧರ್ಮದ ಬಗ್ಗೆ ಅಪಾರ ಗೌರವ ಉಳ್ಳವರವರು. ಅವರಷ್ಟು ದೈವತ್ವ ನಂಬಿದವರು, ದೇಗುಲ ನೋಡಿದವರು ಇನ್ನೊಬ್ಬರಿಲ್ಲ. ದೈವದ ಮೇಲೆ ನಮ್ಮ ಕುಟುಂಬಕ್ಕಿರುವ ನಂಬಿಕೆ ಪ್ರಶ್ನಿಸುವವರು ಮೂರ್ಖರು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

“ಪ್ರಧಾನಿ ಸ್ಥಾನ ಕೊಟ್ಟಿದ್ದೂ ದೇವರೇ, ಆ ಸ್ಥಾನದಲ್ಲಿ ಮುಂದುವರಿಯುವ ಅಥವಾ ಸ್ಥಾನ ತೊರೆಯುವ ಅವಕಾಶಗಳಿದ್ದರೂ ಸ್ಥಾನ ತೊರೆಯಬೇಕೆಂಬ ನಿರ್ಣಯ ಕೊಟ್ಟಿದ್ದೂ ದೇವರೇ,” ಇದು ಶೃಂಗೇರಿ ಜಗದ್ಗುರುಗಳ ಎದುರು ದೇವೇಗೌಡರು ಪ್ರಮಾಣಿಕವಾಗಿ, ಬಹಿರಂಗವಾಗಿ ಹೇಳಿದ್ದ ಮಾತು. ಇದು ನಮ್ಮ ದೈವ ಬದ್ಧತೆಗೆ ಸಾಕ್ಷಿ. ಇದು ನಮಗಿರುವ ದೈವ ಕೃಪೆಗೂ ಸಾಕ್ಷಿ! ಎಂದು ಸರಣಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ರಾಮನ ಹೆಸರಿನ ಮೇಲೆ ನಡೆಯುತ್ತಿರುವ ರಾಜಕೀಯ, ಹಣದ ಕೊಳ್ಳೆ, ಅಧಿಕಾರಕ್ಕಾಗಿ ನಡೆಯುತ್ತಿರುವ ಸ್ತುತಿಯನ್ನು ಪ್ರಶ್ನೆ ಮಾಡಿದ್ದಕ್ಕೆ ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ. ಇವರಿಗೆ ನೆನಪಿರಲಿ, ದೇವರಿಗಾಗಿ ನಾವು ಮಾಡಿದಷ್ಟು ಪ್ರಾರ್ಥನೆ, ಪೂಜೆಗಳ ಮುಂದೆ, ಈ ನಕಲಿಗಳು ಮಾಡಿದ ‘ಅಧಿಕಾರ ರಾಮ ಜಪ’ ಕಾಲು ಭಾಗಕ್ಕೂ ಸಾಲದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಚ್ಛೆಗಳನ್ನಿಟ್ಟುಕೊಂಡು ದೇವರನ್ನು ಆರಾಧಿಸುವುದೇ ತಪ್ಪು. ಅಂಥದ್ದರಲ್ಲಿ ದೇವರನ್ನು ಅಧಿಕಾರಕ್ಕಾಗಿ, ರಾಜಕೀಯಕ್ಕಾಗಿ, ಹಣಕ್ಕಾಗಿ ಬಳಸಿಕೊಳ್ಳುವುದು ಧಾರ್ಮಿಕ ಭ್ರಷ್ಟಾಚಾರ. ರಾಮನ ಹೆಸರಲ್ಲಿ ಧಾರ್ಮಿಕ ಭ್ರಷ್ಟಾಚಾರದಲ್ಲಿ ತೊಡಗಿರುವವರಿಗೆಲ್ಲ ಮುಂದೆ ತಕ್ಕ ಫಲ ಸಿಗಲಿಕ್ಕಿದೆ. ಈಗ ಅರಚುವವರೆಲ್ಲರೂ ಅದಕ್ಕಾಗಿ ಕಾಯಲಿ. ಅದರ ಫಲವನ್ನೂ ಉಣ್ಣಲಿ ಎಂದಿದ್ದಾರೆ.

ದೇವರ ವಿಚಾರದಲ್ಲಿ ನಮಗಿರುವ ಬದ್ಧತೆಯನ್ನು ಪ್ರಶ್ನೆ ಮಾಡುವವರು, ನನ್ನನ್ನು ಹಾಗೂ ನನ್ನ ಕುಟುಂಬವನ್ನು ಟೀಕೆ ಮಾಡುವವರು, ಬಾಯಿಗೆ ಬಂದಂತೆ ಮಾತನಾಡುವವರು ಒಂದಲ್ಲ ಹತ್ತು ಬಾರಿ ಯೋಚನೆ ಮಾಡುವುದು ಒಳಿತು. ಯಾಕೆಂದರೆ, ನಾನಾಗಲಿ, ನನ್ನ ಕುಟುಂಬವಾಗಲಿ ಈಗ ದೇಶದಲ್ಲಿ ಕೆಲವರಿಂದ ನಡೆಯುತ್ತಿರುವ ಧಾರ್ಮಿಕ ಭ್ರಷ್ಟಾಚಾರದಂಥ ಕೃತ್ಯ ಮಾಡಿಲ್ಲ! ಎಂದು ತಿಳಿಸಿದ್ದಾರೆ.

ಒಬ್ಬರು ಹೇಳಿದ್ದಾರೆ… ಶ್ರೀರಾಮನ ಮೇಲೆ ನಂಬಿಕೆ ಇದ್ದರೆ ಕುಮಾರಸ್ವಾಮಿ ದೇಣಿಗೆ ನೀಡಲಿ ಎಂದು. ಹಣ, ದೇಣಿಗೆ ನೀಡಿ ಶ್ರೀರಾಮನನ್ನು ಕುರುಡು ಕುರುಡಾಗಿ ಆರಾಧಿಸುವ ಭಕ್ತ ನಾನಲ್ಲ. ಹಣ ನೀಡಿ ನನ್ನ ಭಕ್ತಿ ಸಾಬೀತು ಮಾಡಬೇಕಿಲ್ಲ. ನಮ್ಮೆಲ್ಲರ ಭಕ್ತಿ, ಭಾವನೆಗಳನ್ನು ಹಣವಾಗಿ, ಅಧಿಕಾರವಾಗಿ ಪರಿವರ್ತಿಸುವ ನಿಮ್ಮ ನಡವಳಿಕೆ ತಿದ್ದಿಕೊಳ್ಳಿ ಎಂದಿದ್ದಾರೆ.

ನನ್ನ ಹೇಳಿಕೆಯಲ್ಲಿ ಬೇಜವಾಬ್ದಾರಿ ಗುರುತಿಸಿರುವ ಧಾರ್ಮಿಕ ಮುಖಂಡರೊಬ್ಬರು ಮೊದಲು ತಮ್ಮ ಜವಾಬ್ದಾರಿ ಅರಿಯಬೇಕು. ರಾಮನ ಭಕ್ತಿಯು ಹಣ,ಅಧಿಕಾರ, ರಾಜಕಾರಣವಾಗಿ ಪರಿವರ್ತನೆಯಾಗುವುದನ್ನು ಅವರು ತಡೆದಿದ್ದರೆ, ಅದು ಅವರ ಜವಾಬ್ದಾರಿಯ ಸಮರ್ಥ ನಿರ್ವಹಣೆ ಆಗಿರುತ್ತಿತ್ತು. ಅದು ಬಿಟ್ಟು ರಾಜಕೀಯದ ಹೇಳಿಕೆ ನೀಡುವುದು ಧಾರ್ಮಿಕ ನಾಯಕರಿಗೆ ಶೋಭೆಯಲ್ಲ ಎಂದು ಹೇಳಿದ್ದಾರೆ.

ಪಬ್ಲಿಸಿಟಿಗೆ ನಾನು ಈ ಹೇಳಿಕೆ ಕೊಟ್ಟಿದ್ದೇನೆ ಎಂದು ಸೋದರ ಶ್ರೀರಾಮುಲು ಹೇಳಿದ್ದಾರೆ. ಪಾಪ ಅವರು ಮುಗ್ಧರು. ದೈವಬಲ, ಜನಾಶೀರ್ವಾದದಿಂದ 2 ಬಾರಿ ಸಿಎಂ ಆದ ನಾನು ಇನ್ನು ಯಾವ ಪಬ್ಲಿಸಿಟಿ ಪಡೆಯಬೇಕಿದೆ? ನನಗೆ ಅದರ ಅಗತ್ಯವೇನಿದೆ? ರಾಮ ಮಂದಿರ ಆಗಬೇಕೆಂದು ಕುಮಾರಸ್ವಾಮಿ ಅವರ ಮನಸ್ಸಲ್ಲೂ ಇದೆ ಎಂಬ ಅವರ ಮಾತನ್ನು ಮಾತ್ರ ಅನುಮೋದಿಸುತ್ತೇನೆ ಎಂದಿದ್ದಾರೆ.

ಇತಿಹಾಸ ಹೇಳುತ್ತಾ ನಿಂತಿರುವ ಪುರಾತನ ದೇಗುಲಗಳ ಹಿಂದೆ ಜನರನ್ನು ವಿಭಜಿಸಿದ ಕತೆಗಳಿಲ್ಲ. ಆ ದೇಗುಲಗಳ ನಿರ್ಮಾಣಕ್ಕಾಗಿ ದೇಣಿಗೆ ಹೆಸರಿನಲ್ಲಿ ಹಣ ಸಂಗ್ರಹಿಸಿದ ಉಲ್ಲೇಖವಿಲ್ಲ. ದೇವರನ್ನು ರಾಜಕೀಯಕ್ಕಾಗಿ ಉಪಯೋಗಿಸಿಕೊಂಡ ಉಲ್ಲೇಖವಿರುವ ಒಂದೇ ಒಂದು ಶಾಸನ ನಮಗೆ ಸಿಕ್ಕಿಲ್ಲ. ಈಗ ಇಂಥ ಕೃತ್ಯ ಮಾಡುತ್ತಿರುವವರು ದಯವಿಟ್ಟು ನಿಲ್ಲಿಸಿ ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಮಕ್ಕಳು-ಮರಿಗಳಿಗೆ,ಅಪ್ಪನ ಅಧಿಕಾರದ ಹಿಂದೆ ಅಡಗಿ ದುಡ್ಡು ಕೊಳ್ಳೆ ಹೊಡೆಯುತ್ತಿರುವ ಸ್ವಘೋಷಿತ ನವ ಇಲಿಗಳಿಗೆ ನಾನು ಪ್ರತಿಕ್ರಿಯಿಸಲಾರೆ. ಇಷ್ಟು ಹೇಳಿಯೂ ಅರ್ಥವಾಗದವರಿಗೆ ಹೇಳುವುದು ಇಷ್ಟೆ-ರಾಮಮಂದಿರ ಹಿಂದೂಗಳ ಭಕ್ತಿ,ಭಾವನೆಗಳ ಮೂರ್ತ ರೂಪ ಅದು ಆಗಬೇಕು. ಆದರೆ ಅದೇ ಹೆಸರಿನಲ್ಲಿ ನಡೆಯುತ್ತಿರುವ ವಿಭಜನೆಗೆ ನನ್ನ ವಿರೋಧವಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು