NEWSರಾಜಕೀಯಸಂಸ್ಕೃತಿ

ಬಿಹಾರದಲ್ಲಿ ಸಿಡಿಲಿಗೆ 83 ಮಂದಿ ಬಲಿ: ಗಣ್ಯರ ಸಂತಾಪ

ವಿಜಯಪಥ ಸಮಗ್ರ ಸುದ್ದಿ

ಪಾಟ್ನಾ: ಬಿಹಾರದಲ್ಲಿ ಸಿಡಿಲಿನಿಂದಾಗಿ ಪ್ರಾಣ ಕಳೆದುಕೊಂಡ 83 ಮಂದಿಯ ಕುಟುಂಬದವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜೆಡಿಎಸ್‌ ವರಿಷ್ಠ ದೇವೇಗೌಡ, ಮಾಜಿ ಸಿಎಂ ಎಚ್‌ಡಿಕೆ, ಸಿಎಂ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕಳೆದ ಇಪ್ಪತ್ನಾಲ್ಕು ಗಂಟೆಯಲ್ಲಿ ಗುಡುಗು ಸಹಿತ ಸುರಿದ ಭಾರಿ ಮಳೆ ವೇಳೆ ರಾಜ್ಯದ ವಿವಿಧೆಡೆ 83 ಜನರು ಮೃತಪಟ್ಟಿದ್ದಾರೆ ಎಂದು ಬಿಹಾರ ಮುಖ್ಯಮಂತ್ರಿ ಕಚೇರಿ ಸ್ಪಷ್ಟಪಡಿಸಿದ್ದು, ಸಿಡಿಲಿನ ಅಬ್ಬರಕ್ಕೆ ಕಳೆದ ಎರಡು ದಿನಗಳಲ್ಲಿ  ಮೃತಪಟ್ಟವರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ.

ಬಿಹಾರದ ಗೋಪಾಲ್‌ಗಂಜ್, ಸಿವಾನ್, ಮಧುಬನಿ, ಮೋತಿಹಾರಿ, ದರ್ಭಂಗದಲ್ಲಿ ಸಿಡಿಲಿಗೆ   83 ಜನರು ಮೃತಪಟ್ಟಿದ್ದು, ಗೋಪಾಲ್‌ಗಂಜ್‌ನಲ್ಲಿ 13, ಸಿವಾನ್‌ನಲ್ಲಿ ಐದು,  ಮಧುಬನಿ ಮತ್ತು ಮೋತಿಹರಿಯಲ್ಲಿ ತಲಾ ಇಬ್ಬರು, ದರ್ಬಂಗದಲ್ಲೂ ಒಬ್ಬರು ಬಲಿಯಾಗಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆ ನೀಡುವ ಮಾಹಿತಿ ಪ್ರಕಾರ ಬಿಹಾರದ 23 ಜಿಲ್ಲೆಗಳಲ್ಲಿ ಸಿಡಿಲು ಅಪ್ಪಳಿಸಿದೆ. ಈ ವೇಳೆ 83 ಜನರು ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ. ಅಲ್ಲದೆ ಸಾಕಷ್ಟು ಪ್ರಮಾಣದಲ್ಲಿ ಆಸ್ತಿ-ಪಾಸ್ತಿ ನಷ್ಟ ಉಂಟಾಗಿದೆ.

ಅನೇಕ ಜಿಲ್ಲೆಗಳಲ್ಲಿ 20ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿಯ ಪ್ರಕಾರ, ಗೋಪಾಲ್‌ಗಂಜ್‌ನಲ್ಲಿ ಮೃತಪಟ್ಟವರೆಲ್ಲರೂ ಬಾರೌಲಿ, ಮಂಜಾ, ವಿಜಯಪುರ, ಉಚ್ಕಾಗಾಂವ್, ಕಟೇಯ ಪ್ರದೇಶದ ನಿವಾಸಿಗಳು.

ಸಿಡಿಲಿನ ಹೊಡೆತಕ್ಕೆ ಸಿಲುಕಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈಗಾಗಲೇ ಚಿಕಿತ್ಸೆ ಮುಂದುವರಿದಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಘಟನೆ ವೇಳೆ ಮನೆ ಹಾಗೂ ತೋಟಗಳಿಗೆ ಹಾನಿ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

1 Comment

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?