NEWSದೇಶ-ವಿದೇಶರಾಜಕೀಯ

ಚುನಾವಣೆ ಹೊತ್ತಲೇ ಕಾಂಗ್ರೆಸ್ ಕಚೇರಿ ಮೇಲೆ ಐಟಿ ದಾಳಿ: 8.5 ಲಕ್ಷ ರೂ. ವಶ  

ವಿಜಯಪಥ ಸಮಗ್ರ ಸುದ್ದಿ

ಪಾಟ್ನಾ: ಚುನಾವಣೆ ಹೊತ್ತಿನಲ್ಲೇ ಬಿಹಾರದ ಕಾಂಗ್ರೆಸ್ ಪ್ರಧಾನ ಕಚೇರಿ ಸದಾಕತ್ ಆಶ್ರಮದ ಮೇಲೆ ಆದಾಯ ತೆರಿಗೆ ಅಧಿಕಾರಿ (ಐಟಿ) ಗಳು ದಾಳಿ ನಡೆಸಿದ್ದು, ಕಚೇರಿಯ ಆವರಣದ ಪಾರ್ಕಿಂಗ್‍ನಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 8.5 ಲಕ್ಷ ರೂ.ಪತ್ತೆಯಾಗಿದೆ.

ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ಕಾಂಗ್ರೆಸ್ ಕಚೇರಿ ಮೇಲೆ ದಾಳಿ ನಡೆಸಿದ್ದು, ಕಾರಿನಲ್ಲಿದ್ದ 8.5 ಲಕ್ಷ ರೂ. ಜತೆಗೆ ಕಾಂಗ್ರೆಸ್ ಕಾರ್ಯಕರ್ತ ಎನ್ನಲಾದ ಅಶುತೋಷ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿ ಹಣ ಪತ್ತೆಯಾದ ಕುರಿತು ಬಿಹಾರ್ ಕಾಂಗ್ರೆಸ್ ಇನ್‍ಚಾರ್ಜ್ ಶಕ್ತಿ ಸಿಂಗ್ ಗೋಹಿಲ್ ಹಾಗೂ ರಾಷ್ಟ್ರೀಯ ಮೀಡಿಯಾ ಇನ್‍ಚಾರ್ಜ್ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಸದಾಕತ್ ಆಶ್ರಮದ ಮೇಲೆ ನಡೆದ ಐಟಿ ದಾಳಿಯನ್ನು ಶಕ್ತಿ ಸಿಂಗ್ ಗೋಹಿಲ್ ಅವರು ಖಂಡಿಸಿದ್ದು, ಬಿಹಾರ ಚುನಾವಣೆಯಲ್ಲಿ ನಾವು ಸೋಲುತ್ತೇವೆ ಎಂಬುದು ಬಿಜೆಪಿ-ಜೆಡಿಯುಗೆ ತಿಳಿದಿದೆ. ಹೀಗಾಗಿ ಈ ರೀತಿಯ ಕೆಲಸ ಮಾಡುತ್ತಿದೆ. ಯಾರ ಕಾರಿನಿಂದ ಹಣ ವಶಪಡಿಸಿಕೊಳ್ಳಲಾಗಿದೆಯೋ ಅವರು ನಮಗೆ ಸಂಬಂಧವಿಲ್ಲ. ಹಣ ಹಾಗೂ ಕಾರು ಯಾರಿಗೆ ಸೇರಿದ್ದು ಎಂಬುದು ಸಹ ನಮಗೆ ತಿಳಿದಿಲ್ಲ ಎಂದು ಶಕ್ತಿ ಸಿಂಗ್ ಗೋಹಿಲ್ ಹೇಳಿದ್ದಾರೆ.

ಅತ್ತ ಈ ದಾಳಿಯನ್ನು ಐಟಿ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಇತ್ತ ಕಾಂಗ್ರೆಸ್ ತಪ್ಪು ಮಾಡುತ್ತಿದೆ ಎಂಬುದನ್ನು ಬಿಂಬಿಸಲು ಈ ರೀತಿ ಮಾಡಲಾಗುತ್ತಿದೆ ಎಂದು ಬಿಂಬಿಸುವ ಉದ್ದೇಶದಿಂದ ಬಿಜೆಪಿ-ಜೆಡಿಯು ಸರ್ಕಾರದ ಸೂಚನೆ ಮೇರೆಗೆ ಐಟಿ ದಾಳಿ ನಡೆಸಲಾಗಿದೆ ಎಂದು ಕೈ ಮುಖಂಡರು ಆರೋಪಿಸಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್...