ವಾಷಿಂಗ್ಟನ್: ಅಮೆರಿಕದ ಹಲವು ರಾಜ್ಯಗಳಲ್ಲಿ ಆರ್ಥಿಕ ಚಟುವಟಿಕೆ ದೃಷ್ಟಿಯಿಂದ ವ್ಯಾಪಾರ, ವಹಿವಾಟಿಗೆ ಅವಕಾಶ ಮಾಡಿಕೊಟ್ಟಿರುವುದನ್ನು ವಿರೋಧಿಸಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕಿನಿಂದ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ. ಆದರೂ ಸರ್ಕಾರ ಜನರ ಆರೋಗ್ಯದ ಮೇಲೆ ಕಾಳಜಿ ಇಲ್ಲದ ಸರ್ಕಾರ ಈ ರೀತಿ ನಡೆದುಕೊಳ್ಳುತ್ತಿರುವುದು ಸರಿಯಲ್ಲ ಎಂದು ಖಂಡಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇನ್ನು ಸಾರ್ವಜನಿಕ ಆರೋಗ್ಯ ತಜ್ಞರು ಎಚ್ಚರಿಕೆ ಸಂದೇಶ ರವಾನಿಸಿದ್ದು, ಅಲ್ಲದೇ ಅಮೆರಿಕದ ಅರಿಜೋನಾದಲ್ಲಿ ಲಾಕ್ ಡೌನ್ ನಿರ್ಬಂಧ ತೆರವುಗೊಳಿಸಿದ್ದರ ಬಗ್ಗೆ ಜನರು ವಿರೋಧ ವ್ಯಕ್ತಪಡಿಸಿ, ಬೀದಿಗಿಳಿದಿದ್ದಾರೆ.
ಅಂಕಿ ಅಂಶದ ಪ್ರಕಾರ ಅರಿಜೋನಾ ರಾಜ್ಯದಲ್ಲಿ ಕೋವಿಡ್-19ಗೆ 620 ಮಂದಿ ಸಾವನ್ನಪ್ಪಿದ್ದು. ಸೋಂಕಿತರ ಸಂಖ್ಯೆಯೂ ಏರಿಕೆಯಾಗುತ್ತಿದೆ ಎಂದು ಹೇಳಲಾಗಿದೆ.
ಮೆರಿಕದಲ್ಲಿ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಈಗಾಗಲೇ 58,300 ಹೆಚ್ಚು ಜನರು ಮೃತಪಟ್ಟಿದ್ದಾರೆ. ಸುಮಾರು ಒಂದು ಮಿಲಿಯನ್ ಗೂ ಅಧಿಕ ಪ್ರಕರಣ ಪತ್ತೆಯಾಗಿರುವುದಾಗಿದ್ದು, ಈ ನಡುವೆ ಇದುಬೇಕಿತ್ತ ಎಂದು ಜನರು ಸರ್ಕಾರವನ್ನು ಪ್ರತ್ನಿಸುತ್ತಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail