NEWSನಮ್ಮರಾಜ್ಯರಾಜಕೀಯ

ನೆರೆಪೀಡಿತ 10ಜಿಲ್ಲೆಗಳಲ್ಲಿ ಶಾಶ್ವತ ಪುನಶ್ಚೇತನ ಭವನ: ಸಚಿವ ಅಶೋಕ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ರಾಜ್ಯದಲ್ಲಿ ಅತಿ ಹೆಚ್ಚು ಪ್ರವಾಹ ಪರಿಸ್ಥಿತಿ ಉಂಟಾಗುತ್ತಿರುವ 10 ಜಿಲ್ಲೆಗಳಲ್ಲಿ ಶಾಶ್ವತ ಪುನಶ್ಚೇತನ ಭವನ ನಿರ್ಮಿಸಲು ತೀರ್ನಿಮಾನಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್  ಹೇಳಿದ್ದಾರೆ.

ಕರ್ನಾಟಕ ಸೇರಿ ಪ್ರವಾಹ ಪೀಡಿತ ರಾಜ್ಯಗಳ ಜತೆ ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಸಿದ ವಿಡಿಯೋ ಸಂವಾದ ನಂತರ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹೆಚ್ಚು ಪ್ರವಾಹ ಪರಿಸ್ಥಿತಿ ಎದುರಾಗುವ 10 ಜಿಲ್ಲೆಯಲ್ಲಿ ಶಾಶ್ವತವಾಗಿ ಪುನಶ್ಚೇತನ ಭವನ ನಿರ್ಮಿಸಲು ನಿರ್ಧರಿಸಲಾಗಿದೆ. ಭವನದಲ್ಲಿ ಆಸ್ಪತ್ರೆ, ಗ್ರಂಥಾಲಯ, ವಾಸ್ತವ್ಯ ವ್ಯವಸ್ಥೆ, ಶೌಚಾಲಯಗಳ ವ್ಯವಸ್ಥೆ ಇರಲಿದೆ. ಇದಕ್ಕಾಗಿ 200 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಪ್ರವಾಹ ಸಂತ್ರಸ್ತರ ಆರೋಗ್ಯದ ದೃಷ್ಟಿಯಿಂದ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಬೇಕು. ರ‍್ಯಾಪಿಡ್ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಕೋವಿಡ್ ಸೋಂಕಿತರಿಗೆ ಪ್ರತ್ಯೇಕ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ನೆರೆ ಸಂತ್ರಸ್ತರಿಗೆ ಪೌಷ್ಟಿಕ ಆಹಾರ
ಪ್ರವಾಹ ಸಂತ್ರಸ್ತರಿಗೆ ಕಾಳಜಿ ಕೇಂದ್ರದಲ್ಲಿ ಪೌಷ್ಟಿಕಾಂಶ ಆಹಾರ ನೀಡಲು ನಿರ್ಧರಿಸಲಾಗಿದ್ದು, ಮಧ್ಯಾಹ್ನ ಮತ್ತು ರಾತ್ರಿ ಊಟದ ಜೊತೆಗೆ ಮೊಟ್ಟೆ, ಉಪ್ಪಿನಕಾಯಿ, ಪಲ್ಯ, ಮೊಸಲು ನೀಡಲಾಗುವುದು ಎಂದು ತಿಳಿಸಿದರು.

ಪ್ರವಾಸ ಸಂತ್ರಸ್ತರಿಗೆ ಕೇವಲ ಅನ್ನ ಸಂಬಾರು ಮಾತ್ರ ನೀಡಲಾಗುತ್ತಿತ್ತು. ನೊಂದು ಬಂದಿರುವ ಜನರಿಗೆ ಕೇವಲ ಅನ್ನ ಸಂಬಾರು ನೀಡುವುದು ಸರಿಯಲ್ಲ. ನೊಂದವರಿಗೆ ಪೌಷ್ಟಿಕಾಂಶದ ಆಹಾರ ನೀಡುವುದು ಮುಖ್ಯ ಎಂಬುದನ್ನು ಅರಿತು ಇನ್ನು ಮುಂದೆ ಮಧ್ಯಾಹ್ನ ಹಾಗೂ ರಾತ್ರಿ ಊಟದ ವೇಳೆ ಮೊಟ್ಟೆ, ಉಪ್ಪಿನಕಾಯಿ, ಪಲ್ಯ, ಮೊಸಲು ನೀಡಲು ತೀರ್ಮಾನಿಸಲಾಗಿದೆ ಎಂದರು.

2019ರ ಪ್ರವಾಹ ಪರಿಸ್ಥಿತಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, 2019ರಲ್ಲಿ ಮಳೆಯಿಂದಾಗಿ ಮನೆ ಬಿದ್ದವರಿಗೆ ಹಣ ನೀಡಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಆದರೆ, ಸರ್ಕಾರವು 21 ಜಿಲ್ಲೆಗಳಿಗೆ ರೂ.334.29 ಕೋಟಿ ಬಿಡುಗಡೆ ಮಾಡಿದೆ ಎಂದು ಜಿಲ್ಲಾವಾರು ಮಾಹಿತಿ ನೀಡಿದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್