NEWSದೇಶ-ವಿದೇಶರಾಜಕೀಯ

ಪೆಟ್ರೋಲ್ – ಡೀಸೆಲ್ ಬೆಲೆ ಮತ್ತೆ ಏರಿಕೆ: ಗ್ರಾಹಕರ ಜೇಬಿಗೆ ನೇರ ಕತ್ತರಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಮತ್ತೆ ಬುಧವಾರ ಹೆಚ್ಚಿಸಿವೆ. ಈ ಹೆಚ್ಚಳದ ಪರಿಣಾಮವಾಗಿ ಪೆಟ್ರೋಲ್ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟದ ಸನಿಹಕ್ಕೆ ಬಂದಿದೆ.

ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 26 ಪೈಸೆಯಷ್ಟು, ಡೀಸೆಲ್ ಬೆಲೆ 25 ಪೈಸೆಯಷ್ಟು ಹೆಚ್ಚಳವಾಗಿದೆ. ದೆಹಲಿಯಲ್ಲಿ ಲೀಟರ್‌ ಪೆಟ್ರೋಲ್ ಬೆಲೆ 83.97 ರೂ. ಡೀಸೆಲ್ ಬೆಲೆ 74.12 ರೂ.ಗೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 28 ಪೈಸೆ ಹೆಚ್ಚಾಗಿದೆ. ಲೀಟರ್‌ ಪೆಟ್ರೋಲ್‌ 86.79 ರೂ. ಡೀಸೆಲ್ 78.59 ರೂ. ತಲುಪಿದೆ. ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ ಗರಿಷ್ಠ ಮಟ್ಟ ಮುಟ್ಟಿದ್ದು 2018ರ ಅಕ್ಟೋಬರ್‌ 4ರಂದು. ಆಗ ಅಲ್ಲಿ ಪೆಟ್ರೋಲ್ ಬೆಲೆ 84 ರೂ. ಆಗಿತ್ತು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಗುವ ಬದಲಾವಣೆಗಳಿಗೆ ಅನುಗುಣವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದಿನವೂ ಪರಿಷ್ಕರಿಸಬೇಕಿದ್ದರೂ, ಕೋವಿಡ್–19 ಸಾಂಕ್ರಾಮಿಕ ಹರಡಿದ ನಂತರದಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಅದನ್ನು ಪಾಲಿಸುತ್ತಿಲ್ಲ. ಇದರಿಂದ ಗ್ರಾಹಕರ ಮೇಲೆ ಹೊರೆ ಬೀಳುತ್ತಿದೆ. ಇದು ಹೀಗೆ ಮುಂದುವರಿದರೆ ಜನ ಸಾಮನ್ಯನ ಬದುಕು ಇನ್ನಷು ಬೀದಿಗೆ ಬೀಳಲಿದೆ ಎಂದು ಸ್ವತಃ ಅಧಿಕಾರಿಗಳೇ ಹೇಳುತ್ತಿದ್ದಾರೆ.

ಈ ನಡುವೆ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವ ಆಲೋಚನೆ ಸರ್ಕಾರದ ಮುಂದೆ ಇಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದು, ಇದರಿಂದ ಇನ್ನಷ್ಟು ವಿಷಮ ಪರಿಸ್ಥಿಗೆ ದೇಶದ ಜನರನ್ನು ದೂಡಲು ಕೇಂದ್ರ ಸರ್ಕಾರ ಎಲ್ಲಾ ದಿಕ್ಕಿನಿಂದಲೂ ಸಜ್ಜಾದಂತೆ ಕಾಣುತ್ತಿದೆ.

ಇನ್ನು 2020ರ ಮಾರ್ಚ್‌ನಲ್ಲಿ ಬೇಡಿಕೆ ಕುಸಿದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕಡಿಮೆ ಆದಾಗ ಅದರ ಪ್ರಯೋಜನವನ್ನು ಕಂಪನಿಗಳು ಗ್ರಾಹಕರಿಗೆ ವರ್ಗಾಯಿಸಲಿಲ್ಲ. ಆದರೆ, ರಾಜ್ಯ ಸರ್ಕಾರಗಳು ಮಾರಾಟ ತೆರಿಗೆ ಹೆಚ್ಚಿಸಿದಾಗ ಕಂಪನಿಗಳು ಅದನ್ನು ಗ್ರಾಹಕರಿಗೆ ವರ್ಗಾವಣೆ ಮಾಡಿದವು. ಕೇಂದ್ರ ಸರ್ಕಾರವು ಎಕ್ಸೈಸ್ ಸುಂಕವನ್ನು ಹೆಚ್ಚಿಸಿದಾಗ, ಕಂಪನಿಗಳು ಅದನ್ನು ತೈಲ ಬೆಲೆ ಕುಸಿತದ ಜೊತೆ ಹೊಂದಿಸಿಕೊಂಡವು.

2020ರ ಮೇ ನಂತರ ಪ್ರತಿ ಲೀಟರ್ ಪೆಟ್ರೋಲ್‌ ಬೆಲೆಯಲ್ಲಿ 14.28 ರೂ.ಗಳಷ್ಟು, ಲೀಟರ್ ಡೀಸೆಲ್ ಬೆಲೆಯಲ್ಲಿ
11.83 ರೂ.ಗಳಷ್ಟು ಹೆಚ್ಚಳ ಆಗಿದೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್