NEWSನಮ್ಮಜಿಲ್ಲೆರಾಜಕೀಯ

ಕಂಪಲಾಪುರ ಗ್ರಾಪಂಗೆ ಕಾಂಗ್ರೆಸ್  ಬೆಂಬಲಿತೆ ರಾಣಿ ಅಧ್ಯಕ್ಷೆ, ರಾಮಲಿಂಗ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ:  ತಾಲೂಕಿನ ಕಂಪಲಾಪುರ ಗ್ರಾಮಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ರಾಣಿ ಹಾಗೂ ಉಪಾಧ್ಯಕ್ಷರಾಗಿ ರಾಮಲಿಂಗ ಅವಿರೋಧ ಆಯ್ಕೆಯಾಗಿದ್ದಾರೆ.

ಒಟ್ಟು 17 ಸದಸ್ಯ ಬಲ ಹೊಂದಿರುವ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಬೆಂಬಲಿತ 12 ಹಾಗೂ ಜೆಡಿಎಸ್ ಬೆಂಬಲಿತ 5 ಮಂದಿ ಜಯಗಳಿಸಿದ್ದರು.

ಸೋಮವಾರ ಪಂಚಾಯಿತಿ ಆವರಣದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಬಿ ಗೆ ಮೀಸಲಾಗಿದ್ದು ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಾಣಿ, ಉಪಾಧ್ಯಕ್ಷರ ಸ್ಥಾನಕ್ಕೆ ರಾಮಲಿಂಗ ಇಬ್ಬರನ್ನು ಬಿಟ್ಟು ಬೇರಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ವೈ.ಕೆ.ತಿಮ್ಮೇಗೌಡ ಇವರ ಆಯ್ಕೆಯನ್ನು ಅಧಿಕೃತವಾಗಿ  ಘೋಷಿಸಿದರು.

ಈ ಸಂದರ್ಭ ಗ್ರಾ.ಪಂ ಸದಸ್ಯರಾದ ಮಂಜು, ಶ್ರೀಪತಿ, ರವಿ,  ಚಂದ್ರು,  ಸೋಮು, ಶೀಲಾ, ಮಮತ, ಜಾನಕಿ, ಸುಮ, ಮುಖಂಡರಾದ ಪ್ರಕಾಶ್ ಗೌಡ, ಉದ್ಯಮಿ ಕೆ.ಪಿ.ನಿಂಗರಾಜು, ಹಾಲಿನ ಡೇರಿ ಅಧ್ಯಕ್ಷ ಎಂ.ರಮೇಶ್, ಐ.ಎಸ್.ಗೋಪಿ, ಕೀರಾ, ರವಿ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್