NEWSದೇಶ-ವಿದೇಶ

ಕೊರೊನಾ ನಿಯಂತ್ರಣ ಕ್ರಮ ಕುರಿತು ಪ್ರಧಾನಿ ಮೋದಿ- ಡೆನ್ಮಾರ್ಕ್ ಪ್ರಧಾನಿ  ನಡುವೆ ಚರ್ಚೆ

ವಿಜಯಪಥ ಸಮಗ್ರ ಸುದ್ದಿ

ಡೆನ್ಮಾರ್ಕ್:  ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸುವ ಕುರಿತು  ಡೆನ್ಮಾರ್ಕ್‌ನ ಪ್ರಧಾನ ಮಂತ್ರಿ  ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಸಂಭಾಷಣೆ ನಡೆಸಿದರು.

ಕೋವಿಡ್-19 ಸಾಂಕ್ರಾಮಿಕ ರೋಗ ನಿಭಾಯಿಸಲು ಉಭಯ ದೇಶಗಳಲ್ಲಿ ಕೈಗೊಂಡ ಕ್ರಮಗಳನ್ನು ಉಭಯ ನಾಯಕರು ಹೋಲಿಸಿ ಚರ್ಚಿಸಿದರು.  ಸೋಂಕುಗಳ ಹೆಚ್ಚಳಕ್ಕೆ ಕಾರಣವಾಗದೆ ಲಾಕ್‌ಡೌನ್ ನಿರ್ಬಂಧಗಳನ್ನು ತೆಗೆದುಹಾಕಿದ ಡೆನ್ಮಾರ್ಕ್‌ನ ಯಶಸ್ಸನ್ನು ಪ್ರಧಾನಿ ಮೋದಿ ಶ್ಲಾಘಿಸಿದರು. ಪರಸ್ಪರರ ಅನುಭವದಿಂದ ಕಲಿಯಲು ಭಾರತೀಯ ಮತ್ತು ಡ್ಯಾನಿಶ್ ತಜ್ಞರು ಸಂಪರ್ಕದಲ್ಲಿರುವ ಬಗ್ಗೆ ಸಮ್ಮತಿಸಲಾಯಿತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಭಾರತ-ಡೆನ್ಮಾರ್ಕ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಬಯಕೆಯನ್ನು ಉಭಯ ನಾಯಕರು ಪುನರುಚ್ಚರಿಸಿದರು ಮತ್ತು ಕೋವಿಡ್ ನಂತರದ ಜಗತ್ತಿನಲ್ಲಿ ಎರಡೂ ದೇಶಗಳು ಒಟ್ಟಾಗಿ ಕೆಲಸ ಮಾಡುವ  ಬಗ್ಗೆಯೂ ಚರ್ಚಿಸಿದರು.

12 ಮೇ 2020 ರಂದು ಉಭಯ ದೇಶಗಳ ವಿದೇಶಾಂಗ ಸಚಿವರ ನಡುವಿನ ಜಂಟಿ ಆಯೋಗದ ಸಭೆಯ ಯಶಸ್ವಿ ಆಯೋಜನೆಯನ್ನು ಅವರು ಸ್ವಾಗತಿಸಿದರು.

ಆರೋಗ್ಯ ಸಂಶೋಧನೆ, ಸ್ವಚ್ಛ ಮತ್ತು ಪರಿಸರ ಸ್ನೇಹಿ ಇಂಧನ, ಹವಾಮಾನ ಬದಲಾವಣೆಯ ಸ್ಥಿತಿಸ್ಥಾಪಕತ್ವ ಮುಂತಾದ ಕ್ಷೇತ್ರಗಳು ಪರಸ್ಪರ ಲಾಭದಾಯಕ ಸಹಯೋಗಕ್ಕೆ ಅಪಾರ ಅವಕಾಶವನ್ನು ನೀಡುತ್ತವೆ ಎಂದು ಒಪ್ಪಿಕೊಂಡ ನಾಯಕರು, ಭಾರತ ಮತ್ತು ಡೆನ್ಮಾರ್ಕ್ ನಡುವೆ ದೃಢವಾದ ಪರಿಸರ ಕಾರ್ಯತಂತ್ರದ ಸಹಭಾಗಿತ್ವವನ್ನು ಸೃಷ್ಟಿಸುವ ಗುರಿಯತ್ತ ಕೆಲಸ ಮಾಡಲು ಉಭಯ ನಾಯಕರು ಸಮ್ಮತಿ ಸೂಚಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ