NEWSನಮ್ಮರಾಜ್ಯರಾಜಕೀಯ

ಪ್ರವಾಹ- ಆಂಧ್ರ, ತೆಲಂಗಾಣಕ್ಕೆ ಪಿಎಂ ಉದಾರತೆ, ಕರ್ನಾಟಕ ಕಂಡರೆ ಉದಾಸೀನತೆ: ಮೋದಿ ವಿರುದ್ಧ ಎಚ್‌‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರವಾಹ ಹಾಗೂ ರಾಜ್ಯಗಳಲ್ಲಿ ಎದುರಾದ ಸಂಕಷ್ಟ ಮತ್ತು ನಷ್ಟಗಳ ಕುರಿತು ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರ್ನಾಟಕವನ್ನು ಮಾತ್ರ ನಿರ್ಲಕ್ಷಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜ್ಞಾನಭಾರತಿ ವಾರ್ಡ್‌ನಲ್ಲಿ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, ತಮ್ಮ ಪಕ್ಷದ ಸರ್ಕಾರ ರಾಜ್ಯದಲ್ಲಿದೆ ಆದರೂ ಪ್ರವಾಹದಿಂದ ತತ್ತರಿಸಿರುವ ಜನರ ಸಂಕಷ್ಟಕ್ಕೆ ಪ್ರಧಾನಮಂತ್ರಿ ಮೋದಿ ದಾವಿಸದಿರುವುದು ತುಂಬ ನೋವಿನ ಸಂಗತಿ. ಅತಿವೃಷ್ಟಿಯಿಂದ ಕಂಗಾಲಾಗಿರುವ ಜನರ ಸಮಸ್ಯೆಗೆ ಸ್ಪಂದಿಸದೆ ಇರುವ ಇವರು ನಿಜವಾದ ಜನನಾಯಕರ ಎಂದು ಪ್ರಧಾನಿ ವಿರುದ್ಧ ಕಿಡಿಕಾರಿದರು.

ಪ್ರವಾಹ ವಿಚಾರದಲ್ಲಿ ಪ್ರಧಾನಿ ಮೋದಿ ರಾಜ್ಯವನ್ನು ನಿರ್ಲಕ್ಷಿಸುತ್ತಿದ್ದಾರೆ. ಇದು ರಾಜ್ಯದ ಜನತೆಗೆ ಅವರು ಮಾಡುತ್ತಿರುವ ಅವಮಾನ. ಜನರ ಸಮಸ್ಯೆಗಳಿಗೆ ಹೆಚ್ಚು ಗಮನಕೊಡದ ಕಂದಾಯ ಸಚಿವ ಆರ್.ಅಶೋಕ್ ಪ್ರವಾಹಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಅದು ಕಾಟಾಚಾರದ ಭೇಟಿ. ಅಲ್ಲಿಗೆ ಹೋದ ಅವರು ಕೇವಲ 10 ನಿಮಿಷದಲ್ಲೇ ವಾಪಸ್‌ ಆಗಿದ್ದಾರೆ. ಇದು ಬಿಜೆಪಿ ಸಚಿವರು ಕಷ್ಟದಲ್ಲಿರುವ ನಾಡಿನ ಜನರಿಗೆ ಸ್ಪಂದಿಸುವ ರೀತಿ ಎಂದು ಅಸಮಾಧಾನ ಹೊರಹಾಕಿದರು.

ಇನ್ನಾದರೂ ಪ್ರವಾಹ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಪ್ರಧಾನಿ ಮೋದಿಯವರಿಗೆ ಮತ್ತೊಮ್ಮೆ ಪತ್ರ ಬರೆಯಬೇಕು. ರಾಜ್ಯದಿಂದ ಒಟ್ಟು 25 ಸಂಸದರಿದ್ದಾರೆ. ಆದರೂ ಕೇಂದ್ರ ಸರ್ಕಾರ, ಮೋದಿಯವರು ರಾಜ್ಯವನ್ನು ಪರಿಗಣಿಸುತ್ತಿರುವ ಪರಿಯನ್ನು ನೋಡಿದರೆ, ನಮ್ಮ ರಾಜ್ಯ ಸಂದಸರು ತಾವು ಜನರಿಗೆ ಏನನ್ನು ಮಾಡುತ್ತಿದ್ದಾರೆಂಬುದರ ಕುರಿತು ತಮ್ಮನ್ನು ತಾವೇ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಸಲಹೆ ನೀಡಿದ್ದಾರೆ.

ಪ್ರವಾಹದಿಂದ ತತ್ತರಿಸಿರುವ ಜನರು ಒಪ್ಪೊತ್ತಿನ ಕೂಳಿಗಾಗಿ ಪರದಾಡುತ್ತಿದ್ದಾರೆ. ಕೊರೊನಾ ಸೋಂಕಿನ ಈ ಸಂದರ್ಭದಲ್ಲಿ ಮನೆ, ಶೇಖರಿಸಿಟ್ಟಿದ್ದ ಆಹಾರ ವಸ್ತುಗಳು, ಪಾತ್ರೆ ಕಗಡೆ ಎಲ್ಲವನ್ನು ಕಳೆದುಕೊಂಡು ಬೀದಿಗೆ ಬಿದ್ದಿರುವ ಜನರ ಸಮಸ್ಯೆಗೆ ಇನ್ನಾದರೂ ಸರ್ಕಾರ ಸೂಕ್ತ ಕ್ರಮ ತೆಗೆದುಕೊಂಡು ಅವರ ಜೀವ ಮತ್ತು ಜೀವನಕ್ಕೆ ಆಸರೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ