ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನವನ್ನು ಜನವರಿ 31ಕ್ಕೆ ಮುಂದೂಡಲಾಗಿದೆ.
ಜ. 17ರಂದು ದೇಶಾದ್ಯಂತ ಪೋಲಿಯೋ ಲಸಿಕೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಜನವರಿ 16ರಂದು ‘ಕೋವಿಡ್-19’ ವಿರುದ್ಧದ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಜನವರಿ 31 ಕ್ಕೆ ಮುಂದೂಡಲಾಗಿದೆ.
ಅಭಿಯಾನ ಮುಂದೂಡುವ ಸಂಬಂಧ ರಾಷ್ಟ್ರಪತಿ ಕಚೇರಿಯ ಉನ್ನತ ಅಧಿಕಾರಿಗಳು ಮತ್ತು ಗಣ್ಯರೊಂದಿಗೆ ಸಮಾಲೋಚಿಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಜ.31ರಂದು ಬೆಳಗ್ಗೆ 11.45ಕ್ಕೆ ರಾಷ್ಟ್ರಪತಿ ದೆಹಲಿಯ ರಾಜಭವನದಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ‘ರಾಷ್ಟ್ರೀಯ ರೋಗನಿರೋಧಕ ದಿನ‘ಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದೆ.