CrimeNEWSರಾಜಕೀಯ

2.84 ಕೋಟಿ ರೂ. ವಂಚನೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಎಫ್ಐಆರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಿವೇಶನ ಹಾಗೂ ಫ್ಲ್ಯಾ ಟ್ ಖರೀದಿ ವಿಚಾರವಾಗಿ 2.84 ಕೋಟಿ ರೂ. ವ್ಯವಹಾರ ನಡೆಸಿ ವಂಚಿಸಿರುವ ಆರೋಪದಡಿ ಬಿಜೆಪಿ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಇಂಡ್ ಸಿಂಗ್ ಡೆವಲಪರ್ಸ್ ಕಂಪನಿ ನಿರ್ದೇಶಕ ಎಂ. ಕೃಷ್ಣ ಎಂಬುವರ ದಾಖಲಿಸಿದ್ದ ಖಾಸಗಿ ದೂರಿನ ಮೇರೆಗೆ ವಿಚಾರಣೆ ನಡೆಸಿದ್ದ 4ನೇ ಎಸಿಎಂಎಂ ನ್ಯಾಯಾಲಯ, ಆರೋಪಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಸೂಚಿಸಿತ್ತು.

ಅದರನ್ವಯ ಕೃಷ್ಣ ಅವರಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆಮುಂದುವರಿದಿದ್ದು, ಆರೋಪಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹಾಗೂ ಎಂ. ಕೃಷ್ಣ, ಹಲವು ವರ್ಷಗಳಿಂದ ಪರಿಚಿತರು. ಅವರ ನಡುವೆ ಹಣಕಾಸಿನ ವ್ಯವಹಾರ ಇತ್ತು . ನಿವೇಶನ ಹಾಗೂ ಫ್ಲ್ಯಾಟ್‌ಗಳನ್ನು ಖರೀದಿಮಾಡುವ ಸಲುವಾಗಿ ಆರೋಪಿ, ಕೃಷ್ಣ ಅವರಿಂದ ಹಂತಹಂತವಾಗಿ 2.84 ಕೋಟಿ ರೂ. ಪಡೆದಿದ್ದರು. ಕೆಲ ದಿನ ಬಿಟ್ಟು ದುಪ್ಪಟ್ಟು ಲಾಭ ನೀಡುವುದಾಗಿಯೂ ಭರವಸೆ ನೀಡಿದ್ದರು.

ಹಲವು ದಿನ ಕಳೆದರೂ ಆರೋಪಿ ಹಣ ವಾಪಸ್‌ ಕೊಟ್ಟಿರಲಿಲ್ಲ . ಈ ಬಗ್ಗೆ ಕೃಷ್ಣ ವಿಚಾರಿಸಿದಾಗ 2 ಲಕ್ಷರೂ.ಗಳನ್ನು ಮಾತ್ರ 2018ರಲ್ಲಿ ಹಿಂದಿರುಗಿಸಿದ್ದರು. ಬಾಕಿ ಹಣ ನೀಡುವಂತೆ ಕೃಷ್ಣ ಒತ್ತಾಯಿಸಿದ್ದರು. ಹಣ ನೀಡಲು ಸುಬ್ರಹ್ಮಣ್ಯ ಹಿಂದೇಟು ಹಾಕಿದ್ದರು ಎಂದು ದೂರಿನಲ್ಲಿದೆ ಕೊಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮ್ಮ ಮೇಲಿನ ಆರೋಪಕ್ಕೆ ಪ್ರತಿಕ್ರಿಯಿಸಿ ‘ಫೇಸ್ಬುಕ್’ನಲ್ಲಿ ಪೋಸ್ಟ್ ಪ್ರಕಟಿಸಿರುವ ಕಟ್ಟಾ ಸುಬ್ರಮಹ್ಮಣ್ಯ ನಾಯ್ಡು , ರಾಜಕೀಯ ದುರುದ್ದೇ ಶದಿಂದ ನನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗುತ್ತಿದೆ. ನನಗೆ ನ್ಯಾಯಾಲಯದಲ್ಲಿ ನಂಬಿಕೆಯಿದ್ದು , ಕಾನೂನು ಹೋರಾಟ ನಡೆಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...