NEWSರಾಜಕೀಯಶಿಕ್ಷಣ-

ಎಲ್ಲ ಪದವೀಧರರಿಗೂ ಮತದಾನಕ್ಕೆ ಅವಕಾಶ ಕಲ್ಪಿಸಲು ಎಎಪಿ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಳ್ಳಲು ಸಾಧ್ಯವಾಗದ ಪದವೀಧರ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಕೂಡ ವಿಧಾನ ಪರಿಷತ್‌ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ನೀಡಬೇಕೆಂದು ಆಮ್‌ ಆದ್ಮಿ ಪಾರ್ಟಿ ಆಗ್ರಹಿಸಿದೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಎಎಪಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, “ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಂದ ಪ್ರತಿವರ್ಷ 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪದವೀಧರರಾಗಿ ಹೊರಹೊಮ್ಮುತ್ತಿದ್ದಾರೆ.

ಆದರೆ ಪ್ರಸ್ತುತ ಕಾನೂನಿನ ಪ್ರಕಾರ, ಮತದಾರರ ಪಟ್ಟಿಗೆ ನೋಂದಣಿ ಮಾಡಿಸಿಕೊಂಡವರಿಗೆ ಮಾತ್ರ ವಿಧಾನಪರಿಷತ್‌ನ ಪದವೀಧರರ ಕ್ಷೇತ್ರಗಳ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಸಂಬಂಧಪಟ್ಟ ಕಚೇರಿಗೆ ತೆರಳಿ ನೋಂದಣಿ ಮಾಡಲು ಸಾಧ್ಯವಾಗದ ಲಕ್ಷಾಂತರ ಪದವೀಧರರು ಮತದಾನದ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ, ಪದವಿ ಕೋರ್ಸ್‌ಗಳಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳ ಮಾಹಿತಿಯನ್ನು ವಿಶ್ವವಿದ್ಯಾಲಯಗಳಿಂದ ತರಿಸಿಕೊಂಡು ಎಲ್ಲ ವಿದ್ಯಾರ್ಥಿಗಳಿಗೂ ಚುನಾವಣಾ ಆಯೋಗವು ಮತದಾನಕ್ಕೆ ಅವಕಾಶ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

ಆರು ವರ್ಷಕ್ಕೊಮ್ಮೆ ನಡೆಯುವ ಪ್ರತಿ ಚುನಾವಣೆಗೂ ಹೊಸದಾಗಿ ನೋಂದಣಿ ಮಾಡಬೇಕೆಂಬ ನಿಯಮದಿಂದಾಗಿ ಅನೇಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪರಿಷತ್‌ ಚುನಾವಣೆಗೆ ಮತನಾದ ಮಾಡುವ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ.

ಇದರ ಬದಲಾಗಿ, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಿಗೆ ಇರುವ ನಿಯಮದಂತೆ, ಒಮ್ಮೆ ಹೆಸರು ನೋಂದಣಿಯಾದರೆ ಅದನ್ನೇ ಪ್ರತಿ ಚುನಾವಣೆಗೂ ಮುಂದುವರಿಸಬೇಕು. ಈ ಕುರಿತು ಚುನಾವಣಾ ನಿಯಮಕ್ಕೆ ತಿದ್ದುಪಡಿ ತರಬೇಕು ಎಂದು ಚುನಾವಣಾ ಆಯೋಗಕ್ಕೆ ಲಿಖಿತ ಮನವಿ ಸಲ್ಲಿಸಲಾಗಿದೆ ಎಂದು ಜಗದೀಶ್‌ ಚಂದ್ರ ತಿಳಿಸಿದರು.

ಆಮ್‌ ಆದ್ಮಿ ಪಾರ್ಟಿಯ ಪದವೀಧರರು ಹಾಗೂ ಶಿಕ್ಷಕರ ವಿಭಾಗದ ಅಧ್ಯಕ್ಷರಾದ ಚನ್ನಬಸಪ್ಪ ರೇವಡಿ ಮಾತನಾಡಿ, “ಈಗಿರುವ ನಿಯಮವನ್ನು ದುರುಪಯೋಗ ಪಡಿಸಿಕೊಂಡು ಭ್ರಷ್ಟಾಚಾರಿಗಳು ಹಾಗೂ ಅಕ್ರಮ ಎಸಗುವವರು ತಮಗೆ ಬೇಕಾದವರನ್ನು ಮತದಾರರ ಪಟ್ಟಿಗೆ ಸೇರಿಸಿ ಸುಲಭವಾಗಿ ಚುನಾವಣೆ ಗೆಲ್ಲುತ್ತಿದ್ದಾರೆ.

ಈ ಮೂಲಕ ವಿಧಾನ ಪರಿಷತ್‌ನ ಆಶಯವನ್ನೇ ಬುಡಮೇಲು ಮಾಡುತ್ತಿದ್ದಾರೆ. ನಿಯಮಗಳಿಗೆ ಬದಲಾವಣೆ ತರುವುದರಿಂದ ಚುನಾವಣಾ ಅಕ್ರಮಕ್ಕೆ ಕಡಿವಾಣ ಹಾಕಿದಂತಾಗುತ್ತದೆ. ಯೋಗ್ಯ ಅಭ್ಯರ್ಥಿಗಳು ಮೇಲ್ಮನೆಗೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚಲಿದೆ” ಎಂದು ಹೇಳಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ