NEWSರಾಜಕೀಯ

ಬಿಎಸ್‌ವೈಗೆ ವಯಸ್ಸಾಗಿದೆ- ಸಿಎಂ ಬದಲಾವಣೆ ಆಗಲೇಬೇಕು: ಎಚ್‌.ವಿಶ್ವನಾಥ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ವಯಸ್ಸಾಗಿದೆ, ಅವರಿಗೆ ಮೊದಲಿನಂತೆ ಕೆಲಸ ಮಾಡಲು ಆಗುತ್ತಿಲ್ಲ, ಹೀಗಾಗಿ ತಮ್ಮ ಪರಿಸ್ಥಿತಿ, ವಯಸ್ಸಿನ ಇತಿಮಿತಿ, ಆರೋಗ್ಯವನ್ನು ಮನಗಂಡು ಬೇರೆಯವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮತ್ತೊಮ್ಮೆ ಯಡಿಯೂರಪ್ಪ ನಾಯಕತ್ವದ ಬಗ್ಗೆ ಅಪಸ್ವರ ಎತ್ತಿದ್ದಾರೆ.

ಬಿಜೆಪಿಯಲ್ಲಿ ಹಲವು ಮಂದಿ ಸಮರ್ಥ ನಾಯಕರಿದ್ದಾರೆ, ಬೇರೆಯವರಿಗೆ ಬೆಳೆಯಲು ಯಡಿಯೂರಪ್ಪನವರು ಅವಕಾಶ ನೀಡಲಿ. ಪಂಚಮಸಾಲಿ ಲಿಂಗಾಯತ ಸಮುದಾಯದವರೇ ಬೇಕಾದರೆ ಮುಖ್ಯಮಂತ್ರಿ ಆಗಲಿ, ಮುರುಗೇಶ್ ನಿರಾಣಿ, ಬಸನ ಗೌಡ ಪಾಟೀಲ್ ಯತ್ನಾಳ್ ಮತ್ತು ಅರವಿಂದ ಬೆಲ್ಲದ್ ಈ ಮೂವರಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿಗಳಾಗಲಿ ಎಂದು ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಗುರುವಾರ ಅರುಣ್ ಸಿಂಗ್ ಅವರ ಜತೆ ಒನ್ ಟು ಒನ್ ಮೀಟಿಂಗ್ ನಡೆಸಿದ ನಂತರ ಹೊರಗೆ ಬಂದು ಸುದ್ದಿಗಾರರೊಂದಿಗೆ ಮಾತನಾಡಿದರು. ಯಡಿಯೂರಪ್ಪನವರ ಬಗ್ಗೆ ನಮಗೆ ಮೊದಲಿನಂದಲೂ ಗೌರವವಿದೆ. ಆದರೆ ರಾಜ್ಯದ ಹಿತದೃಷ್ಟಿಯಿಂದ ಅವರ ಬದಲಾವಣೆ ಮುಖ್ಯ. ಅವರಲ್ಲಿ ಮೊದಲು ಇದ್ದಂತಹ ಶಕ್ತಿ, ಆಡಳಿತವನ್ನು ವೇಗವಾಗಿ ತೆಗೆದುಕೊಂಡು ಹೋಗುವ ಉತ್ಸಾಹ ಕಾಣುತ್ತಿಲ್ಲ ಎಂದರು.

ಇನ್ನು ಬಹುತೇಕ ಶಾಸಕರು, ಸಚಿವರು ಕೂಡ ಅವರ ನಾಯಕತ್ವದ ಬಗ್ಗೆ ಅಸಮಾಧಾನ ಹೊಂದಿದ್ದಾರೆ, ಆದರೆ ಅದನ್ನು ಬಹಿರಂಗವಾಗಿ ಹೇಳಿಕೊಳ್ಳುತ್ತಿಲ್ಲ ಅಷ್ಟೆ. ಅನೇಕ ಇಲಾಖೆಗಳಲ್ಲಿ ಯಡಿಯೂರಪ್ಪನವರ ಕುಟುಂಬದ ಹಸ್ತಕ್ಷೇಪ ನಡೆಯುತ್ತಿದೆ. ಭ್ರಷ್ಟಾಚಾರ ಮಿತಿಮೀರುತ್ತಿದೆ. ಸಚಿವರಿಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಇದು ಹೀಗೆಯೇ ಮುಂದುವರಿದರೆ ರಾಜ್ಯಕ್ಕೆ, ಪಕ್ಷಕ್ಕೆ ಒಳ್ಳೆಯದಲ್ಲ, ಹಾಗಾಗಿ ನಾಯಕತ್ವ ಬದಲಾವಣೆ ಅನಿವಾರ್ಯ ಎಂದು ವಿಶ್ವನಾಥ್ ವಾದ ಮಂಡಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು