ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಂಗಳವಾರ (ಇಂದು) ಸದನ ಆರಂಭವಾಗುತ್ತಿದ್ದಂತೆ ಸಿಡಿ ಪ್ರದರ್ಶಿಸಿ ಕಾಂಗ್ರೆಸ್ ನಾಯಕರು 6 ಸಚಿವರೂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಧರಣಿ ನಡೆಸಿದರು.
ಇದಕ್ಕೂ ಮುನ್ನಾ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಸದನ ಪ್ರವೇಶಿಸುತ್ತಿದ್ದಂತೆ ಸಿಡಿ ಪ್ರದರ್ಶಿಸಿದರು. ಸದನದ ಬಾವಿಗಿಳಿದು ಧರಣಿ ಇತರ ಕಾಂಗ್ರೆಸ್ ನಾಯಕರು ಸಿಡಿ ಪ್ರದರ್ಶಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಮಾಜಿ ಸಚಿವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ವಿಚಾರಣೆ ಮಾಡಿ ವರದಿ ನೀಡುವಂತೆ ಹೇಳಿದೆ. ಆದರೆ, ತನಿಖೆ ಮಾಡಿ ವರದಿ ಕೊಡೋಕೆ ಹೇಳಿಲ್ಲ. ಅದಕ್ಕೆ ನಾವು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು.
ನಿನ್ನೆ ಪ್ರಕರಣ ಸಂಬಂಧ ಸರ್ಕಾರ ಉತ್ತರ ಕೊಟ್ಟಿದೆ. ಪ್ರಶ್ನೋತ್ತರ ಕಲಾಪಕ್ಕೆ ಅವಕಾಶ ಕೊಡಿ. ಪ್ರಕರಣದಲ್ಲಿ ತನಿಖೆ ನಡೆಯುತ್ತಿದ್ದು ಸದನದ ಸಮಯ ವ್ಯರ್ಥ ಮಾಡಬೇಡಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಯಿ ಹೇಳಿದರು. ಆದರೂ ಕಾಂಗ್ರೆಸ್ ಶಾಸಕರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಈ ನಡುವೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ವಾಕ್ಸಮರ ಹೆಚ್ಚಾಗುತ್ತಿದ್ದಂತೆ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಲಾಪವನ್ನು ಹತ್ತು ನಿಮಿಷ ಕಾಲ ಮುಂದೂಡಿದರು.