NEWSರಾಜಕೀಯಸಂಸ್ಕೃತಿ

ನನಗೆ ಸಚಿವ ಸ್ಥಾನ ಸಿಗಲಿದೆ ಎಂಬ ಗಾಳಿ ಸುದ್ದಿಗೆ ಕಿವಿಗೊಡಬೇಡಿ: ಸಂಸದ ಪ್ರತಾಪ್‌ಸಿಂಹ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ಕರ್ನಾಟಕದಿಂದ ಮೈಸೂರು ಸಂಸದ ಪ್ರತಾಪ್ ಸಿಂಹಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂಬ ಸುದ್ದಿ ದಟ್ಟವಾಗಿ ಹಬ್ಬಿದೆ. ಈ ಬಗ್ಗೆ ಸ್ವತಃ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ನನಗೆ ಸಚಿವ ಸ್ಥಾನ ಸಿಗಲಿದೆ ಎಂಬ ಗಾಳಿ ಸುದ್ದಿಗೆ ಕಿವಿಗೊಡಬೇಡಿ ಎಂದು ಹೇಳಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗಿಂತಲೂ ಹಿರಿಯರು, ಅನುಭವಿಗಳು ರಾಜ್ಯದಲ್ಲಿ ಸಂಸದರಾಗಿದ್ದಾರೆ. ಅವರೆಲ್ಲರಿಗೂ ನಾನು ಶುಭಾಶಯ ತಿಳಿಸುತ್ತೇನೆ. ನನಗೆ ಸಚಿವ ಸ್ಥಾನ ಸಿಗಲಿದೆ ಎಂಬ ಗಾಳಿ ಸುದ್ದಿಗೆ ಕಿವಿಗೊಡಬೇಡಿ ಎಂದರು.

ಇನ್ನು ಮೈಸೂರು ಕೊಡಗಿನ ಜನ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಆ ವಿಶ್ವಾಸಕ್ಕೆ ತಕ್ಕಂತೆ ಸಾಕಷ್ಟು ಕೆಲಸ ಮಾಡಿದ್ದೇನೆ. ಸಂಸದನಾಗಿ ಇದಕ್ಕಿಂತ ದೊಡ್ಡ ಹುದ್ದೆ ಬೇರೆ ಯಾವುದು ಇಲ್ಲ. ಇದಕ್ಕಿಂತ ನಾನು ಬೇರೆನೂ ನಿರೀಕ್ಷೆ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಜಾತಿ ಬೆಂಬಲ ಇಲ್ಲದ ಕಾರಣ ವಿವಾದ ಸೃಷ್ಟಿ
ಮೈಸೂರಿನ ಮಾದರಿ ಸರ್ಕಾರಿ ಶಾಲೆ ಜಾಗದಲ್ಲಿ ವಿವೇಕ ಸ್ಮಾರಕ ನಿರ್ಮಾಣದ ಬಗ್ಗೆ ಸೃಷ್ಟಿಯಾಗಿರುವ ವಿವಾದದ ಕುರಿತು ಪ್ರತಿಕ್ರಿಯಿಸಿದ ಅವರು, ವಿವೇಕಾನಂದರು ಯಾವ ಪ್ರಬಲ ಜಾತಿಗೆ ಸೇರಿದವರಲ್ಲ. ಅವರು ಪ್ರಬಲ ಜಾತಿಗೆ ಸೇರಿದವರಾಗಿದ್ದರೆ. ಇಂದು ಈ ವಿವಾದವೇ ಬರುತ್ತಿರಲಿಲ್ಲ. ಇಷ್ಟೊತ್ತಿಗೆ ಸ್ಮಾರಕ ನಿರ್ಮಾಣ ಆಗಿ ವರ್ಷಗಳೇ ಕಳೆಯುತ್ತಿದ್ದವು. ಅವರಿಗೆ ಜಾತಿ ಬೆಂಬಲ ಇಲ್ಲದ ಕಾರಣ ಈ ರೀತಿ ವಿವಾದ ಸೃಷ್ಟಿ ಮಾಡಲಾಗಿದೆ ಎಂದರು.

ಈ ವಿಚಾರ ವಿವಾದವಾಗಿದ್ದು ಮೈಸೂರಿಗೆ ಆಗುತ್ತಿರುವ ಅವಮಾನ. ವಿವೇಕಾನಂದರು ಜಾತಿಯ ಐಕಾನ್ ಅಲ್ಲ, ಅವರು ರಾಷ್ಟ್ರದ ಐಕಾನ್. ಮಹಾರಾಜರೇ ಅವರನ್ನು ಪ್ರೀತಿಯಿಂದ ಗೌರವದಿಂದ ಕಂಡಿದ್ದಾರೆ. ಇದನ್ನು ನಾವು ಮೊದಲು ನೆನಪಿಟ್ಟುಕೊಳ್ಳಬೇಕು. ಸ್ಮಾರಕ ವಿರೋಧ ಮಾಡುತ್ತಿರುವುದು ನಾಚೀಕೆಗೇಡಿನ ಸಂಗತಿ. ಸಂಕುಚಿತ ಮನೋಭಾವದ ಜನ ಸ್ಮಾರಕದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಬೆಂಗಳೂರಿನ ಫ್ಲೈಓವರ್ ಗೆ ಹೆಸರಿಡುವ ವಿಚಾರದಲ್ಲೂ ಹೀಗೆ ಮಾಡಿದರು. ಕೆಲವು ಸಂಕುಚಿತ ಮನೋಭಾವದ ಜನರು ಅಲ್ಲಿಯೂ ಹೀಗೆ ವಿರೋಧ ಮಾಡಿದರು. ಬಳಿಕ ಸಾರ್ವಕರ್ ಹೆಸರು ನಾಮಕರಣ ಮಾಡಲಾಯಿತು. ಮೈಸೂರಿನಲ್ಲಿ ಸಹ ಕೆಲ ಸಂಕುಚಿತ ಜನರು ಶಾಲೆಯ ನೆಪದಲ್ಲಿ ಹೋರಾಟ ಮಾಡುತ್ತಿದ್ದಾರೆ. ಬೇಕಿದ್ದರೆ ಈ ಶಾಲೆಯನ್ನು ಮುಂಭಾಗದ ಕಟ್ಟಡಕ್ಕೆ ಶಿಫ್ಟ್ ಮಾಡಬಹುದು ಅಥವಾ ಕೂಗಳತೆಯ ದೇವರಾಜ ಶಾಲೆಗೆ ವರ್ಗಾಯಿಸಬಹುದು.

ಸಿಎಂ ಈ ಸರ್ಕಾರಿ ಶಾಲೆಯ ಜಾಗ ಹಸ್ತಾಂತರಕ್ಕೆ ಆದೇಶ ಮಾಡಿಕೊಡಲಿ. ನಾನು ಕೇವಲ ಎರಡೇ ಗಂಟೆಯಲ್ಲಿ ಕನ್ನಡ ಮಕ್ಕಳಿಗೆ ಅನ್ಯಾಯವಾಗದಂತೆ ಶಾಲೆಯನ್ನು ಶಿಫ್ಟ್ ಮಾಡಿ, ಸ್ಮಾರಕ ನಿರ್ಮಾಣಕ್ಕೆ ಮುಂದಾಗುತ್ತೇನೆ ಎಂದರು.

ಮೈಸೂರಿನಲ್ಲಿ ಮತ್ತೊಂದು‌ ಫ್ಲೈಓವರ್ ನಿರ್ಮಾಣಕ್ಕೆ ಮೇಟಗಳ್ಳಿ ಬಳಿಯ ರಿಂಗ್‌ ರಸ್ತೆಯಲ್ಲಿ ಸ್ಥಳ ಪರಿಶೀಲನೆ ನಡೆಸಲಾಯಿತು. ಸಂಸದ ಪ್ರತಾಪಸಿಂಹ, ರೈಲ್ವೆ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಡನೆ ರಾಷ್ಟ್ರೀಯ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಜಯ್ ಕುಮಾರ್ ಸ್ಥಳ ಪರಿಶೀಲಿಸಿದರು. ಈ ವೇಳೆ ಮುಡಾ ಅಧ್ಯಕ್ಷ ರಾಜೀವ್, ಚೆಸ್ಕಾಂ ಅಧಿಕಾರಿಗಳು ಭಾಗಿಯಾಗಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು