NEWSರಾಜಕೀಯ

ನಾಮಪತ್ರ ಸಲ್ಲಿಸಲು ಸಮಯವನ್ನೇ ನೀಡದ ಚುನಾವಣಾ ಆಯೋಗ: ಚುನಾವಣೆ ಮುಂದೂಡಲು ಎಎಪಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಪ್ರಕ್ರಿಯೆಗಳ ವೇಳಾಪಟ್ಟಿಯನ್ನು ಏಪ್ರಿಲ್ 8 ರಂದು ಘೋಷಿಸಿ ಏಪ್ರಿಲ್ 15 ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನ ಎಂದು ತಿಳಿಸಿದೆ.

ಹೀಗಾಗಿ ಇಂದೇ ಕಡೆಯ ದಿನವಾಗಿರುವುದರಿಂದ ಇಂದು ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸಾಧ್ಯವಾಗಿಲ್ಲ. ಸಾಕಷ್ಟು ಸಮಯಾವಕಾಶ ಸಿಗದಿರುವುದರಿಂದ ಚುನಾವಣೆಯನ್ನು ಮುಂದೂಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಆಗ್ರಹಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಇರುವ ಏಳು ದಿನಗಳ ಕಾಲಾವಕಾಶದಲ್ಲಿ ನಾಲ್ಕು ದಿನಗಳು ಸರಕಾರಿ ರಜೆಗಳಾಗಿವೆ. ಇದರ ಪರಿಣಾಮವಾಗಿ, ಆಮ್ ಆದ್ಮಿ ಪಕ್ಷವನ್ನು ಒಳಗೊಂಡಂತೆ ಅನೇಕ ಅಭ್ಯರ್ಥಿಗಳಿಗೆ ಜಾತಿ ಪ್ರಮಾಣಪತ್ರ, ಆದಾಯ ತೆರಿಗೆ ಪ್ರಮಾಣಪತ್ರಗಳು, ಮತದಾರರ ಪಟ್ಟಿ ಸಾರಗಳು, ಅಫಿಡವಿಟ್, ಬ್ಯಾಂಕ್ ಸ್ಟೇಟ್‌ಮೆಂಟ್‌ಗಳಂತಹ ದಾಖಲೆಗಳನ್ನು ಸರ್ಕಾರಿ ಕಚೇರಿಗಳು ಮತ್ತು ಬ್ಯಾಂಕ್‌ಗಳಿಂದ ಸಂಗ್ರಹಿಸಲು ಸಾಧ್ಯವಾಗದ ಕಾರಣ ನಾಮಪತ್ರ ಸಲ್ಲಿಸಲು ತೊಡಕಾಗಿದೆ.

ಆದರೆ ಈ ವೇಳಾಪಟ್ಟಿಯನ್ನು ಮುಂಚಿತವಾಗಿ ತಿಳಿದಿರುವ ಆಡಳಿತಾರೂಢ ಬಿಜೆಪಿಯ ಅಭ್ಯರ್ಥಿಗಳು ವೇಳಾಪಟ್ಟಿ ಘೋಷಣೆಗೆ ಮುನ್ನವೇ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ಮೂಲಕ ಆಯೋಗ ಬಿಜೆಪಿಯ ಪರ ನಿಂತಿರುವ ಸ್ಪಷ್ಟ ಚಿತ್ರಣ ನಮ್ಮ ಮುಂದಿದೆ. ಆದರೆ ಇತರ ಪಕ್ಷಗಳ ಅಭ್ಯರ್ಥಿಗಳಿಗೆ ಸರಕಾರಿ ರಜೆಗಳ ಕಾರಣದಿಂದ ಮತ್ತು ಅಧಿಕಾರಿಗಳ ರಜೆಗಳ ಕಾರಣದಿಂದ ಅಗತ್ಯ ದಾಖಲೆಗಳನ್ನು ಸಂಗ್ರಹಿಸಲು ಸಾಧ್ಯವಾಗದೇ ನಾಮಪತ್ರ ಸಲ್ಲಿಸಲು ಕಷ್ಟಸಾಧ್ಯವಾಗಿದೆ.

ರಾಜ್ಯ ಚುನಾವಣಾ ಅಧಿಕಾರಿಗಳು ಬಿಜೆಪಿ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡಲು ದಿಢೀರನೇ ಘೋಷಿಸಿರುವ ಈ ಚುನಾವಣೆಯನ್ನು ಮುಂದೂಡಿ ಅಭ್ಯರ್ಥಿಗಳಿಗೆ ಸಮರ್ಪಕವಾಗಿ ನಾಮಪತ್ರ ಸಲ್ಲಿಸಲು ಸಮಯಾವಕಾಶ ನೀಡುವಂತೆ ಆಮ್ ಆದ್ಮಿ ಪಕ್ಷ ಚುನಾವಣಾ ಆಯೋಗವನ್ನು ಆಗ್ರಹಿದೆ ಎಂದರು.

ಚುನಾವಣಾ ಆಯೋಗದ ನಡೆದುಕೊಂಡಿರುವ ರೀತಿ ಬಿಜೆಪಿಗೆ ಅನುಕೂಲವನ್ನು ಸೃಷ್ಟಿಸಿದ್ದು ಚುನಾವಣಾ ಮಾನದಂಡಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಗೌರವಾನ್ವಿತ ಸುಪ್ರೀಂ ಕೋರ್ಟ್‌ ಗೋವಾ ಮುನ್ಸಿಪಲ್ ಚುನಾವಣೆಗಳಲ್ಲಿ ನೀಡಿದ ತೀರ್ಪಿಗೆ ವಿರುದ್ಧವಾಗಿದೆ. (ಗೋವಾ ರಾಜ್ಯ v/s ಫೌಜಿಯಾ ಇಮ್ತಿಯಾಜ್ ಶೇಖ್ ಪ್ರಕರಣ) ಇದು ದೇಶದ ಘನವೆತ್ತ ಕಾನೂನಿಗೆ ಮಾಡಿರುವ ಅಪಮಾನವಾಗಿದೆ ಎಂದು ತಿಳಿಸುತ್ತದೆ ಎಂದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ