NEWSರಾಜಕೀಯ

ರಮೇಶ್ ಜಾರಕಿಹೊಳಿ ಸಚಿವರಾಗುತ್ತಾರಾ ಇಲ್ಲ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರಾ?

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು : ರಾಸಲೀಲೆ ಸಿಡಿ ಪ್ರಕರಣದ ಬಳಿಕ ಸಚಿವ ಸ್ಥಾನ ಕಳೆದುಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದರ ಜತೆಗೆ ಇಂದು ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬಾಂಬ್ ಸಿಡಿಸಲಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಈ ಸಂಬಂಧ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಜತೆ ಚರ್ಚಿಸಿ ಬಂದಿರುವಂತ ರಮೇಶ್ ಜಾರಕಿಹೊಳಿ, ಇಂದು ಸುತ್ತೂರು ಮಠಕ್ಕೆ ಭೇಟಿ ನೀಡುತ್ತಿದ್ದಾರೆ.

ಇನ್ನು ಸುತ್ತೂರು ಮಠಕ್ಕೆ ರಮೇಶ್ ಜಾರಕಿಹೊಳಿ ಭೇಟಿ ನೀಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ. ಸುತ್ತೂರು ಮಠದ ಶ್ರೀಗಳನ್ನು ಭೇಟಿ ಮಾಡಿದ ನಂತರ ಜಾರಕಿಹೊಳಿ ರಾಜ್ಯ ರಾಜಕೀಯದಲ್ಲಿ ಸ್ಪೋಟಕವೆಂಬಂತೆ, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎನ್ನಲಾಗುತ್ತಿದೆ. ಬಲ್ಲ ಮೂಲಗಳ ಪ್ರಕಾರ ರಮೇಶ್ ಜಾರಕಿಹೊಳಿ ಅವರು, ಇಂದು ಇಲ್ಲವೇ ನಾಳೆ ರಾಜೀನಾಮೆ ನಿರ್ಧಾರವನ್ನು ತಿಳಿಸಲಿದ್ದಾರೆ ಎನ್ನಲಾಗುತ್ತಿದ್ದು, ಆ ಬಗ್ಗೆ ಕಾದು ನೋಡಬೇಕಿದೆ.

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...