Please assign a menu to the primary menu location under menu

CrimeNEWSರಾಜಕೀಯ

ಜೂಜಾಟದಲ್ಲಿ ತೊಡಗುವವರಿಗೆ ಶಿಕ್ಷೆ ಕಡ್ಡಾಯವಾಗಲಿ: ಶಾಸಕ ರಂಗನಾಥ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಕ್ರಮ ಜೂಜಾಟದಲ್ಲಿ ಯುವಕರು ತೊಡಗುತ್ತಿರುವುದು ಹೆಚ್ಚಾಗುತ್ತಿದೆ. ಹೀಗಾಗಿ ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ರಂಗನಾಥ್‌ ಹೇಳಿದರು.

ಮಂಗಳವಾರದ ವಿಧಾನ ಮಂಡಳ ಅಧಿವೇಶನದಲ್ಲಿ ನಡೆದ ಪ್ರಶ್ನೋತ್ತರ ವೇಳೆ ಮಾತನಾಡಿದ ಅವರು, ಕೊರೊನಾ ಕಾರಣದಿಂದ ಕೆಲಸ ಕಳೆದುಕೊಂಡ ಹಲವಾರು ಯುವಕರು ನಗರ ಬಿಟ್ಟು ಹಳ್ಳಿಗಳಿಗೆ ಬಂದಿದ್ದಾರೆ. ಆ ಯುವಕರು ಸೇರಿದಂತೆ ಹಳ್ಳಿಗಳಲ್ಲಿರುವ ಹಲವಾರು ಮಂದಿ ಜೂಜಾಟದಲ್ಲಿ ತೊಡಗಿರುವುದರಿಂದ ಅವರು ಕುಟುಂಬಗಳು ತೊಂದರೆಗೆ ಸಿಲುಕುವಂತಾಗಿದೆ. ಹೀಗಾಗಿ ಜೂಜು ಅಡ್ಡೆಯನ್ನು ಮಟ್ಟಹಾಕುವ ಕೆಲಸವನ್ನು ಪೊಲೀಸರು ಮಾಡಬೇಕು ಎಂದರು.

ಈ ವೇಳೆ ಉತ್ತರಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಜೂಜು ಮುಕ್ತ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ನಾವು ಈಗಿನ ಕಾಯ್ದೆಗೆ ತಿದ್ದುಪಡಿ ಮಾಡಿ ಹೊಸ ಕಾಯ್ದೆ ತರುತ್ತಿದ್ದೇವೆ. ಈ ಕಾಯ್ದೆಯಿಂದ ಮುಂದಿನ ದಿನಗಳಲ್ಲಿ ಅಕ್ರಮ ಜೂಜುಕೋರರಿಗೆ ಶಿಕ್ಷೆಯಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯವನ್ನು ಜೂಜು ಮುಕ್ತವಾಗಿಸಲು ಸಹಕಾರವಾಗಲಿದೆ ಎಂದು ಹೇಳಿದರು.

ಈ ವೇಳೆ ಮಾತನಾಡಿದ ಶಾಸಕ ತಮ್ಮಣ್ಣ ಅವರು ಅಕ್ರಮ ಜೂಜು ಅಡ್ಡೆ ಸಂಬಂಧ ಪೊಲೀಸ್‌ ಅಧಿಕಾರಿಗಳ ಜತೆ ಮಾತನಾಡಿದ್ದೇವೆ ಆದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಇದರಿಂದ ಗ್ರಾಮೀಣ ಭಾಗದ ಹಲವು ಕುಟುಂಬಗಳು ತೊಂದರೆಗೆ ಸಿಲುಕುತ್ತಿವೆ ಎಂದು ತಿಳಿಸಿದರು.

ಈ ವೇಳೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾಯ್ದೆ ಜಾರಿಗೆ ಎಲ್ಲ ಸದಸ್ಯರು ಸಹಕರಿಸಿದರೆ ಎಲ್ಲವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಮುಂದಾಗಿ ಜೂಜು ಕೋರರನ್ನು ಮಟ್ಟಹಾಕಬಹುದು ಎಂದರು.

Leave a Reply

error: Content is protected !!
LATEST
ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್‌ BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ