NEWSಉದ್ಯೋಗರಾಜಕೀಯಶಿಕ್ಷಣ-

ಉದ್ಯೋಗ, ಶಿಕ್ಷಣದಲ್ಲಿಎಷ್ಟು ತಲೆಮಾರುಗಳ ವರೆಗೆ ಮೀಸಲಾತಿ ಮುಂದುವರಿಯುತ್ತದೆ: ಕೇಳಿದ ಸುಪ್ರೀಂಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಉದ್ಯೋಗ ಮತ್ತು ಶಿಕ್ಷಣದಲ್ಲಿ ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಯುತ್ತದೆ ಎಂದು ಸುಪ್ರೀಂಕೋರ್ಟ್ ಕೇಳಿದೆ.

ಶುಕ್ರವಾರ ಮರಾಠ ಮೀಸಲಾತಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಒಟ್ಟಾರೆ ಶೇ. 50ರಷ್ಟು ಮೀಸಲಾತಿ ನೀತಿಯನ್ನು ತೆಗೆದುಹಾಕಿದರೆ ಉದ್ಭವಿಸುವ ಅಸಮಾನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ಅಶೋಕ ಭೂಷಣ್‌ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಮಹಾರಾಷ್ಟ್ರ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರಿಗೆ ಈ ರೀತಿಯಲ್ಲಿ ಹೇಳಿದ್ದು, ಬದಲಾದ ಸಂದರ್ಭಗಳಲ್ಲಿ ಮಂಡಲ್ ತೀರ್ಪನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಹೇಳಿದರು ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಯನ್ನು ಶೇ. 50ಕ್ಕೆ ಸೀಮಿತಗೊಳಿಸಲಾಗಿತ್ತು.

1931 ರ ಜನಗಣತಿಯ ಮೇಲೆ ಮಂಡಲ್‌ ತೀರ್ಪನ್ನು ರೂಪಿಸಲಾಗಿತ್ತು. ಬದಲಾದ ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು ಮೀಸಲಾತಿ ಕೋಟಾವನ್ನು ಸರಿಪಡಿಸಲು ನ್ಯಾಯಾಲಯಗಳು ರಾಜ್ಯಗಳಿಗೆ ಬಿಡಬೇಕು ಎಂದು ಅವರು ಹೇಳಿದರು.

ಮರಾಠರಿಗೆ ಮೀಸಲಾತಿ ನೀಡುವ ಮಹಾರಾಷ್ಟ್ರ ಕಾನೂನಿನ ಪರವಾಗಿ ವಾದಿಸಿದ ಇಂದ್ರ ಸಾಹ್ನಿ ಪ್ರಕರಣ ಎಂದು ಕರೆಯಲ್ಪಡುವ ಮಂಡಲ್‌ ತೀರ್ಪಿನ ವಿವಿಧ ಅಂಶಗಳನ್ನು ಉಲ್ಲೇಖಿಸಿದರು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಶೇಕಡ 10ರಷ್ಟು ಮೀಸಲಾತಿ ನೀಡುವ ಕೇಂದ್ರದ ನಿರ್ಧಾರವು ಶೇ.50 ಮಿತಿಯನ್ನು ಉಲ್ಲಂಘಿಸಿದೆ ಎಂದು ತಿಳಿಸಿದರು.

ನೀವು ಸೂಚಿಸಿದಂತೆ ಶೇಕಡಾ 50ರಷ್ಟು ಅಥವಾ ಮಿತಿ ಇಲ್ಲದಿದ್ದರೆ ಆಗ ಸಮಾನತೆಯ ಪರಿಕಲ್ಪನೆ ಏನು? ನಾವು ಅಂತಿಮವಾಗಿ ಅದನ್ನು ಎದುರಿಸಬೇಕಾಗುತ್ತದೆ. ಅದರಿಂದ ಆಗುವ ಅಸಮಾನತೆ ಬಗ್ಗೆ ಏನು ಅಸಮಾನತೆ ಏನು? ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರೆಯುತ್ತದೆ ಎಂದು ನ್ಯಾಯಮೂರ್ತಿಗಳಾದ ಎಲ್‌. ನಾಗೇಶ್ವರ ರಾವ್, ಎಸ್‌. ಅಬ್ದುಲ್ ನಜೀರ್, ಹೇಮಂತ್‌ ಗುಪ್ತಾ ಮತ್ತು ರವೀಂದ್ರ ಭಟ್ ಅವರನ್ನೊಳಗೊಂಡ ನ್ಯಾಯಪೀಠ ಕೇಳಿತು.

ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳು ಕಳೆದಿವೆ ಮತ್ತು ರಾಜ್ಯಗಳು ಅನೇಕ ಪ್ರಯೋಜನಕಾರಿ ಯೋಜನೆಗಳನ್ನು ಜಾರಿಗೊಳಿಸಿವೆ ಆದರೆ ಯಾವುದೇ ಅಭಿವೃದ್ಧಿಯಾಗಿಲ್ಲ. ಆದರೂ ಹಿಂದುಳಿದ ವರ್ಗಗಳ ಅಭಿವೃದ್ಧಿಯಾಗಿದೆ ಎಂಬುದನ್ನು ಒಪ್ಪಿಕೊಳ್ಳಬೇಕಾಗಿದೆ ಎಂದು ನ್ಯಾಯಪೀಠ ಹೇಳಿತು.

ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮರಾಠಿಗರಿಗೆ ಮೀಸಲಾತಿ ನೀಡುವುದನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು. ಈ ತೀರ್ಪಿನ ವಿರುದ್ಧ ಸಲ್ಲಿಸಲಾಗಿರುವ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸುತ್ತಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...