NEWSರಾಜಕೀಯಶಿಕ್ಷಣ-ಸಂಸ್ಕೃತಿ

ರಾಜೀವ್ ಗಾಂಧಿ ಹೆಸರು ಬದಲಾಯಿಸಿ ಶಂಕರಾಚಾರ್ಯರ ಹೆಸರಿಡಬೇಕು : ಸಚಿವೆ ಶೋಭಾ ಕರಂದ್ಲಾಜೆ

ವಿಜಯಪಥ ಸಮಗ್ರ ಸುದ್ದಿ

ಕಾರವಾರ: ಶೃಂಗೇರಿಯ ಕೇಂದ್ರೀಯ ಸಂಸ್ಕೃತ ವಿಶ್ವ ವಿದ್ಯಾಲಯದ ಕ್ಯಾಂಪಸ್‍ಗೆ ರಾಜೀವ್ ಗಾಂಧಿ ಹೆಸರನ್ನು ಬದಲಾಯಿಸಿ ಶಂಕರಾಚಾರ್ಯರ ಹೆಸರಿಡಬೇಕು ಎನ್ನುವ ಬೇಡಿಕೆ ಇದೆ. ಹೀಗಾಗಿ ರಾಜೀವ್ ಗಾಂಧಿ ಹೆಸರಿಗೆ ಬದಲಾಗಿ ಶಂಕರಾಚಾರ್ಯ ಹೆಸರನ್ನು ಇಡುವುದು ಸೂಕ್ತ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಕೈಗಡಿ ಗ್ರಾಮದಲ್ಲಿ ಮಾತನಾಡಿದ ಅವರು, ಈ ವಿಷಯವನ್ನು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಗಮನಕ್ಕೆ ತರುತ್ತೇವೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಪೋಸಲ್ ನೀಡಿದರೆ ಕೇಂದ್ರದ ಕಲ್ಚರ್ ಡಿಪಾರ್ಟಮ್ಮೆಂಟ್‍ನಲ್ಲಿ ಪರಿಶೀಲನೆ ಮಾಡಲು ಒತ್ತಡ ತರುತ್ತೇನೆ ಎಂದು ತಿಳಿಸಿದರು.

ಇನ್ನು ದೇವಾಲಯಗಳನ್ನು ಒಡೆಯುವ ಮೊದಲು ಊರ ಜನರ ವಿಶ್ವಾಸ ಗಳಿಸಬೇಕು. ಆ ದೇವಾಲಯಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು, ದೇವಾಲಯ ಅಕ್ರಮವಾಗಿದ್ದರೇ ಊರಿನ ಜನರ ಮನವೊಲಿಸಿ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದರು.

2008ರ ದೇವಾಲಯ ಯಾವುದಿದೆ. ಅದನ್ನು ಸಕ್ರಮ ಮಾಡಬಹುದು ಎಂದು ಸುಪ್ರೀಂಕೋರ್ಟ್ ಆದೇಶವಿದೆ ಎಂದು ಮೈಸೂರಿನ ಘಟನೆಗೆ ಖಂಡನೆ ವ್ಯಕ್ತಪಡಿಸಿದ ಶೋಭಾ ಕರಂದ್ಲಾಜೆ, ಮೈಸೂರು ದೇವಾಲಯ ಚೋಳರ ಕಾಲದ್ದಾಗಿದೆ. ಸಕ್ರಮಗೊಳಿಸಲು ಪ್ರಕ್ರಿಯೆ ಮಾಡಬೇಕು ಎಂದು ಆಗ್ರಹಿಸಿದರು.

2008ರ ನಂತರ ಕಟ್ಟಿದ ದೇವಾಲಯಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಪುರಾತನ ದೇವಾಲಯಗಳನ್ನು ಉಳಿಸುವ, ಸಕ್ರಮಗೊಳಿಸುವ ಬಗ್ಗೆ ಸರ್ಕರ ಪರಿಶೀಲಿಸಬೇಕು. ಇದೇ ಸಪ್ಟೆಂಬರ್ 22ಕ್ಕೆ ಕೃಷಿ ರಪ್ತುದಾರರ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಕೃಷಿ ಸಂಬಂಧಿತ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದೇವೆ. ಆದಷ್ಟು ರೈತರ ಸಮಸ್ಯೆಗೆ ಉತ್ತರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...