NEWSರಾಜಕೀಯ

ಇಂಧನದ ಜತೆಗೆ ಹೆಣ, ಔಷಧಿಯಲ್ಲೂ ಹಣ ಲೂಟಿ ಮಾಡುತ್ತಿದೆ ಈ ಸರ್ಕಾರ: ಡಿಕೆಶಿ ಕಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಚಿತ್ರದುರ್ಗ: ಹೆಣ ಸುಡುವುದಕ್ಕೂ ಕ್ಯೂ, ಆಸ್ಪತ್ರೆಗೆ ದಾಖಲಾಗುವುದಕ್ಕೂ ಕ್ಯೂ, ಔಷಧಕ್ಕೂ ಕ್ಯೂ, ಲಸಿಕೆ ಪಡೆಯುವುದಕ್ಕೂ ಕ್ಯೂ ನಿಲ್ಲುವಂತಾಗಿದೆ. ಬಿಜೆಪಿ ಸರ್ಕಾರ ಇನ್ನೇನು ಜನರನ್ನು ಕಾಪಾಡುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

100 ನಾಟೌಟ್, ಪೆಟ್ರೋಲ್ ಪಿಕ್‌ಪಾಕೆಟ್ ಅಭಿಯಾನದ ಎರಡನೇ ಇದಿನವಾದ ಇಂದು ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಯಲ್ಲಿ ಮಾತನಾಡಿದರು.

ಈ ಸರ್ಕಾರ ಹೆಣದಲ್ಲೂ ಹಣ, ಔಷಧಿಯಲ್ಲೂ ಹಣ ಲೂಟಿ ಮಾಡುತ್ತಿದೆ. ಈ ದೇಶಕ್ಕೆ ಕೊರೊನಾ ಕಾಯಿಲೆ ತಂದದ್ದು ಯಾರೆಂದು ಪ್ರಶ್ನಿಸಿದ ಅವರು ದೇಶದ ಜನತೆ ಬಿಜೆಪಿ ಸರ್ಕಾರವನ್ನು ಉಗಿಯುತ್ತಿದ್ದಾರೆ ಎಂದು ಹೇಳಿದರು.

ತಮ್ಮ ಮಾತನ್ನು ಮುಂದುವರಿಸಿದ ಡಿಕೆಶಿ, ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ದರ ಏರಿಕೆಯಾಗುತ್ತಿದೆ. ಅದೇ ರೀತಿ ರೈತರಿಗೆ ಬೆಂಬಲ ಬೆಲೆ ಹೆಚ್ಚಾಗಿ ಕೊಡುತ್ತಿದ್ದೀರಾ? ಸರ್ಕಾರಿ, ಖಾಸಗಿ ದಿನಗೂಲಿ ನೌಕರರ ಸಂಬಳ ಹೆಚ್ಚಿಸಿದ್ದೀರಾ? ಎಂದು ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದರು.

ನರೇಗಾ ಯೋಜನೆಯ ಕೂಲಿ ಹಣವನ್ನೂ ಹೆಚ್ಚಳ ಮಾಡಿಲ್ಲ. ಕೇವಲ ಇವರ ಜೇಬು ಮಾತ್ರ ತುಂಬಬೇಕಾಗಿದೆ ಅಷ್ಟೆ. ನಾವು, ಜನಸಾಮಾನ್ಯರು ಸೇರಿ ಈ ಸರ್ಕಾರ ಕಿತ್ತೊಗೆಯಬೇಕು. ನಾಳೆ ಗ್ರಾಮ ಮಟ್ಟದಲ್ಲಿ ನಡೆಯುವ ಹೋರಾಟದಲ್ಲಿ ಮುಖಂಡರು ಭಾಗಿಯಾಗಬೇಕು. ಕಡ್ಡಾಯವಾಗಿ ಕಾಂಗ್ರೆಸ್ ಮುಖಂಡರು ಜನರಿಗೆ ಸ್ಪಂದಿಸಬೇಕು ಎಂದು ಸಲಹೆ ನೀಡಿದರು..

ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಗರಂ
ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಗರಂ ಆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು ಮಾತಾಡುವಾಗ ಮಧ್ಯ ಮಾತಾಡಿದರೆ ಒದ್ದು ಹೊರಗೆ ಹಾಕುತ್ತೇವೆ ಎಂದು ಪಕ್ಷದ ಶಿಸ್ತು ಉಲಂಘಿಸುತ್ತಿದ್ದವರಿಗೆ ಎಚ್ಚರಿಕೆ ನೀಡಿದರು. ಕಾರ್ಯಕರ್ತರು ಮಧ್ಯದಲ್ಲಿ ಮಾತನಾಡಿದ್ದರು. ಇದಕ್ಕೆ ಸಿಟ್ಟುಗೊಂಡ ಡಿಕೆಶಿ ಕಾರ್ಯಕರ್ತರ ವಿರುದ್ಧ ಗರಂ ಆಗಿ, ನಾನು ಕತ್ತೆ ಕಾಯೋಕೆ ಇಲ್ಲಿಗೆ ಬಂದಿಲ್ಲ. ಪಕ್ಷದ ಕಾರ್ಯಕರ್ತರಿಗೆ ಶಿಸ್ತು ಕಲಿಸಿ ಎಂದು ಜಿಲ್ಲಾಧ್ಯಕ್ಷ ತಾಜ್ ಪೀರ್ಗೆ ಸೂಚನೆ ನೀಡಿದರು.

 

Leave a Reply

error: Content is protected !!
LATEST
2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ