CrimeNEWSರಾಜಕೀಯ

ಕುಖ್ಯಾತ ಹ್ಯಾಕರ್ ಶ್ರೀಕಿ ಬಂಧಿಸಿದ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಬಿಟ್ ಕಾಯಿನ್ ವಿಚಾರ ಚರ್ಚೆಯಲ್ಲಿರುವಾಗಲೇ ಕುಖ್ಯಾತ ಹ್ಯಾಕರ್ ಶ್ರೀಕಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹೋಟೆಲ್ ಸೆಕ್ಯೂರಿಟಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಜೀವನಭೀಮಾನಗರ ಪೊಲೀಸರು ನಿನ್ನೆ ಮಧ್ಯಾಹ್ನ ಶ್ರೀಕಿ ಮತ್ತು ಸ್ನೇಹಿತ ವಿಷ್ಣು ಭಟ್‍ನನ್ನು ಬಂಧಿಸಿರುವ ಪೊಲೀಸರು, ತಡರಾತ್ರಿವರೆಗೂ ವಿಚಾರಣೆ ನಡೆಸಿದ್ದು, ಆತನ 2 ಮೊಬೈಲ್‌, ಜತೆಗೆ ಶ್ರೀಕಿಯ ನಾಲ್ಕು ಲ್ಯಾಪ್ ಟ್ಯಾಪ್‍ಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಸ್ತುತ ಐಪಿಸಿ ಸೆಕ್ಷನ್ 504, 348, 323 ಅಡಿ ಪ್ರಕರಣ ದಾಖಲಾಗಿದ್ದು, ಇಂದು ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ವಿಷ್ಣು ಭಟ್ ಹಲ್ಲೆ ಮಾಡಿರೋದು ಸಾಬೀತು ಆಗಿದ್ದು, ಹಲ್ಲೆ ವೇಳೆ ಶ್ರೀಕಿ ವಿಷ್ಣು ಜತೆಗಿದ್ದ. ಆದ್ರೆ ಹಲ್ಲೆ ಮಾಡಿಲ್ಲ ಅನ್ನೋ ಮಾಹಿತಿ ಕೂಡ ಪೊಲೀಸರಿಗೆ ಲಭ್ಯವಾಗಿದೆ. ಪ್ರಸ್ತುತ ವಿಷ್ಣು ಭಟ್ ಮತ್ತು ಶ್ರೀಕಿಗೆ ಮೆಡಿಕಲ್ ಚೆಕಪ್ ಮಾಡಿಸಿರೋ ಪೊಲೀಸರು ಮೆಡಿಕಲ್ ರಿಪೋರ್ಟ್ ಗಾಗಿ ಕಾಯುತ್ತಿದ್ದಾರೆ.

ಮೆಡಿಕಲ್ ನಲ್ಲಿ ಮಾದಕ ವಸ್ತು ಸೇವನೆ ಪಕ್ಕಾ ಆದ್ರೆ ಎನ್‍ಡಿಪಿಎಸ್ ಕೇಸ್ ದಾಖಲು ಮಾಡುವ ಸಿದ್ಧತೆಯಲ್ಲಿ ಪೊಲೀಸರು ಇದ್ದಾರೆ. ಬಿಟ್ ಕಾಯಿನ್ ವಿಚಾರದಲ್ಲಿ ರಾಜಕೀಯ ವಲಯದಲ್ಲಿ ಹ್ಯಾಕರ್ ಶ್ರೀಕಿ ಹೆಸರು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ