Breaking NewsNEWSರಾಜಕೀಯ

ಮತ್ತೆ ಮುಂಬೈಗೆ ಪಯಣ: ಕಾನೂನಿನ ಆಯುಧದಡಿ ಸಿಲುಕಿದ್ರ ರಮೇಶ್ ಜಾರಕಿಹೊಳಿ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ರಾಸಲೀಲೆ ಸಿಡಿ ವಿಚಾರ ಭಾರಿ ಸದ್ದು ಮಾಡಿದ್ದರಿಂದ ಸಚಿವ ಸ್ಥಾನ ಕಳೆದುಕೊಂಡು ಒಂದು ರೀತಿ ರಾಜಕೀಯ ಅತಂತ್ರ ಸ್ಥಿತಿಗೆ ತಲುಪಿರುವ ಶಾಸಕ ರಮೇಶ್ ಜಾರಕಿಹೊಳಿಗೆ ರಾತ್ರಿ ಹೊತ್ತು ಸರಿಯಾಗಿ ನಿದ್ದೆ ಬರುತ್ತಿಲ್ಲ, ಇನ್ನು ಬೆಳಗಾದರೆ ಕಾನೂನಿನ ಆಯುಧದಲ್ಲಿ ಸಿಲುಕಿಕೊಳ್ಳುವ ಭಯ, ಇದರಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಇನ್ನು ರಾಜಕೀಯವೇ ನನಗೆ ಬೇಡ, ಈ ಎಲ್ಲ ಗೊಂದಲಗಳಿಂದ ಹೊರಬಂದರೆ ಸಾಕು ಎಂದು ಎಣಿಸುತ್ತಿರುವ ರಮೇಶ್ ಜಾರಕಿಹೊಳಿ ಅವರು ಅದಕ್ಕೆ ಹಲವಾರು ನಾಯಕರ ಮನೆ ಕದ ತಟ್ಟುತ್ತಿದ್ದಾರೆ. ಅದರಂತೆ ಇಂದು ಸಂಜೆ (ಜೂನ್ 28) ಮತ್ತೆ ಮುಂಬೈಗೆ ತೆರಳಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಸಂಜೆ ಬೆಳಗಾವಿ ಸಾಂಬ್ರಾ ಏರ್​ಪೋರ್ಟ್​ನಿಂದ ಮುಂಬೈಗೆ ಕೆಲ ಆಪ್ತರ ಜೊತೆ ಪ್ರಯಾಣ ಬೆಳೆಸಲಿದ್ದು, ಜೂನ್‌ 29ರ (ನಾಳೆ) ಬೆಳಗ್ಗೆ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಭೇಟಿ ಮಾಡಿ, ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ದೇವೇಂದ್ರ ಫಡ್ನವಿಸ್, ರಮೇಶ್ ಜಾರಕಿಹೊಳಿ ಬಿಜೆಪಿ ಸೇರ್ಪಡೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಫಡ್ನವಿಸ್​ ಅವರನ್ನು ರಾಜಕೀಯ ಗಾಡ್​ಫಾದರ್ ಎಂದು ಜಾರಕಿಹೊಳಿ ನಂಬಿದ್ದಾರೆ.

ಈ ನಡುವೆ ತಮ್ಮ ಏಳಿಗೆ ಸಹಿಸದೇ ಷಡ್ಯಂತ್ರ ಮಾಡಿದ್ದಾರೆಂದು ಬಿಜೆಪಿಯ ಕೆಲ ಪ್ರಮುಖ ನಾಯಕರ ವಿರುದ್ಧವೇ ಈಗ ರಮೇಶ್ ಮಾಡಿರುವ ಗಂಭೀರ ಆರೋಪವನ್ನು ಫಡ್ನವಿಸ್ ಹೈಕಮಾಂಡ್ ನಾಯಕರ ಗಮನಕ್ಕೆ ತಂದಿದ್ದಾರೆ. ಈ ವಿಚಾರದ ಬಗ್ಗೆ ಹೈಕಮಾಂಡ್ ಸಂದೇಶವನ್ನು ಫಡ್ನವಿಸ್ ರಮೇಶ್‌ಗೆ ತಿಳಿಸುತ್ತಾರಾ ಎಂಬ ಪ್ರಶ್ನೆ ಸದ್ಯ ಹುಟ್ಟುಕೊಂಡಿರೋದು.

ಇನ್ನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಹೇಳಿರುವ ರಮೇಶ್ ಜಾರಕಿಹೊಳಿಗೆ ತಮ್ಮ ನಿರ್ಧಾರದಿಂದ ಹಿಂದೆ ಸರಿಯಲು ರಾಜ್ಯ ನಾಯಕರು ಸಲಹೆ ನೀಡಿದ್ದಾರೆ. ಜತೆಗೆ ನಾಳೆ ಫಡ್ನವಿಸ್ ಭೇಟಿ ಬಳಿಕ ದೆಹಲಿಗೆ ತೆರಳಿ, ಹೈಕಮಾಂಡ್ ನಾಯಕರ ಭೇಟಿಯಾಗುವ ಸಾಧ್ಯತೆಯಿದೆ.

ಸಹೋದರರ ಸಲಹೆ
ಆತುರಕ್ಕೆ ಬಿದ್ದು ಯಾವುದೇ ನಿರ್ಧಾರ ಬೇಡ ಎಂದು ನಿನ್ನೆ ತಡರಾತ್ರಿ ನಡೆದ ಜಾರಕಿಹೊಳಿ ಬ್ರದರ್ಸ್ ಮೀಟಿಂಗ್​ನಲ್ಲಿ ಸಹೋದರರು ಸಲಹೆ ನೀಡಿದ್ದಾರೆ. ಇನ್ನು ಇಂದಿನ ಮಾನಸಿಕ ವೇದನೆಯನ್ನು ತಡೆದುಕೊಂಡರೆ ಮತ್ತೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಈಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಮುಂದೆ ಹಲವು ಅಡ್ಡಿಗಳು ಎದುರಾಗಬಹುದು ಎಂದು ತಿಳಿ ಹೇಳಿದ್ದಾರೆ ಎನ್ನಲಾಗಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...