NEWSರಾಜಕೀಯ

ಮಾಟ ಮಂತ್ರ ಮಾಡೋ ಕುಟುಂಬ ನಿನ್ನದು: ಎಚ್‌ಡಿಕೆ ವಿರುದ್ಧ ಏಕ ವಚನದಲ್ಲೇ ನಾಲಿಗೆ ಹರಿಬಿಟ್ಟ ಗುಬ್ಬಿ ಶಾಸಕ ಶ್ರೀನಿವಾಸ್

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಹೊಟ್ಟೆಗೆ ಏನ್ ತಿಂತಿಯಾ, ಮಾಟ ಮಂತ್ರ ಮಾಡೋ ಕುಟುಂಬ ನಿನ್ನದು. ನಾಚಿಕೆ ಆಗಲ್ವಾ ನಿನಗೆ ಎಂದು ಏಕ ವಚನದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್ ನಾಲಿಯನ್ನು ಉದ್ದವಾಗಿ ಹರಿಯಬಿಟ್ಟಿದ್ದಾರೆ.

ಖಾಸಗಿ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ನಿಮ್ಮದು ನಾಲಿಗೆನಾ. ಬಾಯಿ ಬಿಟ್ಟರೆ ಅಸತ್ಯ. ಗ್ಲಿಸರಿನ್ ಹಾಕಿ ಕಣ್ಣೀರು ಹಾಕ್ತಿಯಾ. ಎಂಥಾ ಆಸಾಮಿಗಳು ಇವರು. 20 ವರ್ಷ ಪಕ್ಷ ಕಟ್ಟಿದ್ದ ನನ್ನ ಆಚೆಗೆ ಹಾಕ್ತಿಯಾ ಎಂದು ಪ್ರಶ್ನಿಸಿದ್ದಾರೆ.

ಇನ್ನು ಗಣಿ ದುಡ್ಡು ಬಂತು ಅಂತೇಳಿ ನನ್ನ ಆಚೆಗೆ ಹಾಕ್ತಿಯಾ. ನಿನಗೆ ಮಾನಮರ್ಯಾದೆ ಇಲ್ಲ. ಮೊಸಳೆ ಕಣ್ಣೀರಿನ ಮೂಲಕ ಜನರನ್ನು ತಲುಪಲು ಇನ್ನೂ ಆಗಲ್ಲ ಎಂದು ಎಚ್‍ಡಿಕೆ ವಿರುದ್ಧ ಕಿಡಿಕಾರಿದರು.

ನನಗೆ ಯಾರೂ ದಿಕ್ಕಿಲ್ಲ. ಕಾಂಗ್ರೆಸ್‍ನವರೇ ಈಗ ನನಗೆ ದಿಕ್ಕು. ಸಿದ್ದರಾಮಣ್ಣ ಜೊತೆಗೆ ಕರೆದುಕೊಂಡು ಹೋದರೆ ಅವರ ಜೊತೆ ಹೋಗುತ್ತೇನೆ ಎಂದರು.

ಜೆಡಿಎಸ್‍ನಿಂದ ಹೊರಬಿದ್ದಿರುವ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಮತ್ತು ಎಂಎಲ್‍ಸಿ ಬೆಮೆಲ್ ಕಾಂತರಾಜು ಕಾಂಗ್ರೆಸ್ ಸೇರುವುದು ಫಿಕ್ಸ್ ಆಗಿದೆ. ಖಾಸಗಿ ಆಸ್ಪತ್ರೆ ಉದ್ಘಾಟನೆಗೆಂದು ಗುಬ್ಬಿಗೆ ಬಂದಿದ್ದ ಸಿದ್ದರಾಮಯ್ಯ, ಕಾಂಗ್ರೆಸ್ ಸಮಾವೇಶ ನಡೆಸಿದರು.

ಈ ವೇಳೆ ಸಿದ್ದರಾಮಯ್ಯ ಜೊತೆ ಎಸ್‍ಆರ್ ಶ್ರೀನಿವಾಸ್ ಮತ್ತು ಬೆಮೆಲ್ ಕಾಂತರಾಜು ಕಾಣಿಸಿಕೊಂಡರು. ಎಸ್‍ಆರ್ ಶ್ರೀನಿವಾಸ್ ಕಾಂಗ್ರೆಸ್ ಸೇರಿದ್ರೆ ಅವರು ಕಾಂಗ್ರೆಸ್ ಕ್ಯಾಂಡಿಡೇಟ್ ಎಂದು ಸಿದ್ರಾಮಯ್ಯ ಘೋಷಿಸಿದರು. ನೀವಿಬ್ರು ಪಕ್ಷಕ್ಕೆ ಬಂದ್ರೆ ಗೌರವಯುತವಾಗಿ ನಡೆಸಿಕೊಳ್ತೀವಿ ಎಂದು ಆಫರ್ ನೀಡಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...