NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಪ್ರಣಬ್ ಮುಖರ್ಜಿ ನಿಧನಕ್ಕೆ ಸಿಎಂ ಬಿಎಸ್‌ವೈ, ಮಾಜಿ ಸಿಎಂ ಎಚ್‌ಡಿಕೆ ಸೇರಿ ಹಲವು ನಾಯಕರ ಸಂತಾಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ (84) ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ನಿಧನರಾದ ಅವರಿಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ವಿಪಕ್ಷನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನ ಮಂತ್ರಿ ಎಚ್‌.ಡಿ. ದೇವೇಗೌಡ ಸೇರಿ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

ಸಿಎಂ ಬಿಎಸ್‌ವೈ:  ಧೀಮಂತ ರಾಜಕಾರಣಿ, ಭಾರತದ ಮಾಜಿ ರಾಷ್ಟ್ರಪತಿ, ಭಾರತರತ್ನ ಶ್ರೀ ಪ್ರಣಬ್ ಮುಖರ್ಜಿ ವಿಧಿವಶರಾದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಶ್ರೇಷ್ಠ ನೇತಾರರನ್ನು ಕಳೆದುಕೊಂಡ ಅನಾಥಪ್ರಜ್ಞೆ ಇಡೀ ದೇಶಕ್ಕೆ ಆವರಿಸಿದೆ. ಅವರೊಂದಿಗೆ ನನ್ನ ಒಡನಾಟದ ಕ್ಷಣಗಳನ್ನು ನೆನೆಯುತ್ತಾ, ಅವರಿಗೆ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ.

ವಿಪಕ್ಷ ನಾಯಕ ಸಿದ್ದರಾಮಯ್ಯ:  ಮಾಜಿ ರಾಷ್ಟ್ರಪತಿಗಳು, ಕೇಂದ್ರದ ಮಾಜಿ ಸಚಿವರು ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ ಅವರ ನಿಧನದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ.

ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ:  ಸರಳ ಸಜ್ಜನಿಕೆಯ ವ್ಯಕ್ತಿತ್ವದ ಹಿರಿಯ ರಾಜಕಾರಣಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸುತ್ತಿದ್ದೇನೆ. ಇಂತಹ ಮಹಾನ್ ಚೇತನದ ಅಗಲಿಕೆಯಿಂದ ನಮ್ಮ ದೇಶಕ್ಕೆ ತುಂಬಲಾರದ ನಷ್ಟವಾಗಿದೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್