NEWSನಮ್ಮರಾಜ್ಯ

ಬೆಂಗಳೂರಿನಿಂದ ಬಂದಿದ್ದ ಸೋಂಕಿತನ ಸಂಪರ್ಕ: 18 ಮಂದಿ ಕ್ವಾರಂಟೈನ್‍ಗೆ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ಮುಖ್ಯಪೇದೆಯಾಗಿರುವ ಕೋವಿಡ್ – 19 ಪಾಸಿಟಿವ್ ವ್ಯಕ್ತಿ ಚಾಮರಾಜನಗರ ಜಿಲ್ಲೆಯ ಹನೂರು ಸಮೀಪದ ಬೆಳತ್ತೂರು ಗ್ರಾಮದ ಸಂಬಂಧಿಕರ ಮನೆಗೆ ಬಂದು ಹೋಗಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಸಂಪರ್ಕಕ್ಕೆ ಬಂದಿದ್ದ 18 ಮಂದಿಯನ್ನು ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಮಾತನಾಡಿ, ಬೆಂಗಳೂರು ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿರುವ ವ್ಯಕ್ತಿಗೆ ಬೆಂಗಳೂರಿನಲ್ಲಿ ಗಂಟಲಿನ ದ್ರವ ಮಾದರಿಯನ್ನು ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಆದರೆ ಫಲಿತಾಂಶ ವರದಿ ಇನ್ನೂ ಬಂದಿರಲಿಲ್ಲ. ಈ ನಡುವೆ ಮೇ 4ರಂದು ಆ ವ್ಯಕ್ತಿಯು ಜಿಲ್ಲೆಯ ಹನೂರು ಸಮೀಪದ ಬೆಳತ್ತೂರು ಗ್ರಾಮದಲ್ಲಿರುವ ತಮ್ಮ ಅತ್ತೆಯ ಮನೆಗೆ ಪತ್ನಿ ಹಾಗೂ 8 ವರ್ಷದ ಮಗುವಿನೊಂದಿಗೆ ಕಾರಿನಲ್ಲಿ ಬಂದಿದ್ದರು.

ಮಧ್ಯಾಹ್ನ ನಂತರ ಗಂಟಲಿನ ಮಾದರಿಯ ಫಲಿತಾಂಶ ವರದಿಯು ಪಾಸಿಟಿವ್ ಬಂದಿದೆ ಎಂಬ ಮಾಹಿತಿ ಬೆಂಗಳೂರಿನಿಂದ ಬಂದ ಕೂಡಲೇ ಬೆಂಗಳೂರಿಗೆ ಕುಟುಂಬ ಸಮೇತ ಹಿಂತಿರುಗಿದ್ದಾರೆ ಎಂದು ತಿಳಿಸಿದರು.

ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಚೆಕ್‍ಪೋಸ್ಟ್ ಮೂಲಕ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ತಪಾಸಣೆ ನಡೆಸಿದ್ದ ಪೊಲೀಸ್, ಇತರೆ ಸಿಬ್ಬಂದಿಯನ್ನು ಸಹ ಕ್ವಾರಂಟೈನ್‍ಗೆ ಕರೆತರುವ ಪ್ರಕ್ರಿಯೆ ನಡೆಯುತ್ತಿದೆ. ಮನೆಯ ಸಂಬಂಧಿಕರಾಗಿರುವ ಐವರು, ನೆರೆಹೊರೆಯವರೂ ಸೇರಿದಂತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ 14 ಜನರ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದಿರುವ ನಾಲ್ವರು ಸೇರಿದಂತೆ ಒಟ್ಟು 18 ಜನರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಅಲ್ಲದೆ 5ನೇ ದಿನ ಹಾಗೂ 14ನೇ ದಿನದಂದೂ ಸಹ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗುತ್ತದೆ. ಸದ್ಯಕ್ಕೆ ಜನರು ಯಾವುದೇ ಆತಂಕಕ್ಕೆ ಒಳಗಾಗಬೇಕಿಲ್ಲ. ಅನಗತ್ಯ ವದಂತಿಗೆ ಕಿವಿಗೊಡಬೇಕಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಒಟ್ಟು ಕ್ವಾರಂಟೈನ್‍ಗೆ ಕಳುಹಿಸಲಾಗಿರುವ ಪೈಕಿ 7 ಮಂದಿ ಪುರುಷರು, 7 ಮಂದಿ ಮಹಿಳೆಯವರು, ನಾಲ್ವರು ಮಕ್ಕಳಿದ್ದಾರೆ. ಇವರಲ್ಲಿ 60 ವರ್ಷ ದಾಟಿದ ಮೂವರು, 10 ವರ್ಷ ಒಳಪಟ್ಟ ನಾಲ್ವರು ಇದ್ದಾರೆ. ಜಿಲ್ಲಾಡಳಿತ ಮತ್ತಷ್ಟು ವಿವರ ಮಾಹಿತಿಯನ್ನು ಕಲೆಹಾಕುತ್ತಿದೆ. ಬೆಳತ್ತೂರು ಗ್ರಾಮದಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಗ್ರಾಮದಲ್ಲಿ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ನೈರ್ಮಲ್ಯ ಪಾಲನೆಗೆ ಸೂಚಿಸಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ್ ಅವರು ಮಾತನಾಡಿ ಚೆಕ್‍ಪೋಸ್ಟ್‍ಗಳಲ್ಲಿ ಬಿಗಿ ತಪಾಸಣಾ ಕ್ರಮ ಅನುಸರಿಸಬೇಕು. ಸಾರ್ವಜನಿಕರು ಹೊರಭಾಗದಿಂದ ಯಾರೇ ಬಂದರೂ ಸಹ ಕೂಡಲೇ ಮಾಹಿತಿ ನೀಡಬೇಕು. ಆರೋಗ್ಯ ತಪಾಸಣೆ, ಇತರೆ ಪರೀಕ್ಷೆಗಳಿಗೆ ಒಳಪಡಿಸಲು ಜನರ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ ರವಿ, ಇತರರು   ಹಾಜರಿದ್ದರು.

1 Comment

  • Avaru banglirenalle iddare chenagittu chamarajanagaradalli obbarigu sonkku illa antha helthiddaru higa nodi

Leave a Reply

error: Content is protected !!
LATEST
ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಕೆಡವಿ ಮಾಲ್ ಕಟ್ಟುವ ಬಿಡಿಎ ನಿರ್ಧಾರಕ್ಕೆ ಎಎಪಿ ವಿರೋಧ ಜೈಲಲ್ಲೇ ದೇವರಾಜೇಗೌಡರ ಜೀವಕ್ಕೆ ಅಪಾಯವಿದೆ : ಸುರೇಶಗೌಡ ಆತಂಕ KSRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾವು, ನಾಲ್ವರ ಸ್ಥಿತಿ ಗಂಭೀರ ಜಿಆರ್ ಫಾರ್ಮ್ ಹೌಸ್‌ನಲ್ಲಿ ರೇವ್​ ಪಾರ್ಟಿ: ನಟಿಯರು ಸೇರಿ 80ಕ್ಕೂ ಹೆಚ್ಚು ಬಂಧನ KSRTC: ಹೆದ್ದಾರಿಯಲ್ಲಿ ಕೆಟ್ಟುನಿಂತ ಬಸ್‌ಗಳು - ಕಿಮೀ ವರೆಗೆ ಟ್ರಾಫಿಕ್ ಜಾಮ್ KSRTC: ₹185 ಟಿಕೆಟ್‌ ಕೊಟ್ಟು ₹200 ಕೇಳಿದ ಕಂಡಕ್ಟರ್‌ - ದೂರು ಕೊಟ್ಟ ಪ್ರಯಾಣಿಕ ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು ಪತ್ನಿ, ಮಗನಿಗೆ ಮಾಸಿಕ ಜೀವನಾಂಶ ಪಾವತಿಸದ ಪತಿ ಆಸ್ತಿ ಮುಟ್ಟುಗೋಲು: ಹೈಕೋರ್ಟ್ ಮಹತ್ವದ ಆದೇಶ ಬೆಳ್ಳಂಬೆಳಗ್ಗೆ ಸರಣಿ ಅಪಘಾತ: ಕಾರು ನಜ್ಜುಗುಜ್ಜು - ಪ್ರಯಾಣಿಕರು ಸೇಫ್ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ:‌ ಶೇ.25.5 ವೇತನ ಹೆಚ್ಚಳ ಬಹುತೇಕ ಖಚಿತ