ಬೆಂಗಳೂರು: ಎಪಿಎಂಸಿ ಮತ್ತು ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ವಿರೋಧಿಸಿ ರೈತ ಪರ ಸಂಘಟನೆಗಳು ಸೋಮವಾರ ( ಸೆ.28) ರಾಜ್ಯಾದ್ಯಂತ ಬಂದ್ಗೆ ಕರೆ ನೀಡಿವೆ.
ಸೆಪ್ಟೆಂಬರ್ 25ರಂದು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲು ಕರೆ ನೀಡಲಾಗಿತ್ತು ಆದರೆ ಅದು ಸಂಪೂರ್ಣ ವಿಫಲವಾಗಿತ್ತು. ಆದರೆ ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್ ಸಂಪೂರ್ಣ ಸಕ್ಸಸ್ ಆಗಗಲಿದೆ ಎಂದು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿವರ ಅವರು, ಈಗಾಗಲೇ ಹಲವು ಸಂಘಟನೆಗಳು ಬಂದ್ಗೆ ಬೆಂಬಲ ನೀಡಿವೆ. ಎಪಿಎಂಸಿ ಕಾಯ್ದೆ ತಿದ್ದುಪಡಿ ವಿಧೇಯಕ ಮಂಡನೆಯಾಗಿದೆ. ಇಂದು ಭೂ ಸುಧಾರಣಾ ವಿಧೇಯಕ ಮಂಡನೆಯಾಗಿದೆ. ಹೀಗಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದುವರಿಯಲಿದೆ. ಸೋಮವಾರ ಬೆಳಗ್ಗೆಯಿಂದ ಸಂಜೆವರೆಗೂ ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಹೇಳಿದ್ದಾರೆ.
ಕೃಷಿ ಪರಂಪರೆ ಹಾಳು ಮಾಡುವ ಕಾಯ್ದೆಯನ್ನು ಕೇಂದ್ರ ತಂದಿದೆ. ಹೀಗಾಗಿ ರೈತರ ಪಾಲಿಗೆ ಕೇಂದ್ರ, ರಾಜ್ಯ ಸರ್ಕಾರ ಸತ್ತಿವೆ. ಸೋಮವಾರದಂದು ಶವ ಯಾತ್ರೆ ಮಾಡುತ್ತೇವೆ ಎಂದು ಕೋಡಿಹಳ್ಳಿ ಆಕ್ರೋಶ ಹೊರ ಹಾಕಿದ್ದಾರೆ.