NEWSನಮ್ಮರಾಜ್ಯರಾಜಕೀಯ

ಕೊಡವರು ಗೋಮಾಂಸ ತಿನ್ನುತ್ತಾರೆ ಎಂದ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಮಡಿಕೇರಿ: ಕೊಡವರು ಗೋಮಾಂಸ ತಿನ್ನುತ್ತಾರೆ ಎಂಬ ವಿಧಾನಸಭೆಯ ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿ ಕೊಡವರು ಮಡಿಕೇರಿಯಲ್ಲಿಂದು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಮಡಿಕೇರಿ ಕೊಡವ ಸಮಾಜ, ಪೊನ್ನಂಪೇಟೆ ಕೊಡವ ಸಮಾಜ, ಮಡಿಕೇರಿ ಹಿತ ರಕ್ಷಣಾ ವೇದಿಕೆ ಮತ್ತಿತರ ಸಂಘಟನೆ ಸದಸ್ಯರು ಜಮಾವಣೆಗೊಂಡು ಘೋಷಣೆ ಕೂಗಿ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿದರು.

ಸಿದ್ದರಾಮಯ್ಯ ಹೇಳಿಕೆಯಿಂದ ಕೊಡವ ಸಮುದಾಯಕ್ಕೆ ಅಪಮಾನವಾಗಿದೆ. ಹೀಗಾಗಿ ಅವರು ಬಹಿರಂಗವಾಗಿ ಕೊಡವರ ಕ್ಷಮೆ ಕೋರಬೇಕು. ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಪ್ರತಿಭಟನಕಾರರ ಒಕ್ಕೊರಲಿನಿಂದ ಆಗ್ರಹಿಸಿದರು.

ಸಿದ್ದರಾಮಯ್ಯಗೆ ಸತ್ಯ ಹೇಳುವ ಬುದ್ಧಿ ಬರಲಿ
ಮೊನ್ನೆ ” ಕೊಡವರು ಬೀಫ್ ತಿನ್ನುತ್ತಾರೆ” ಎಂಬ ಅಪ್ಪಟ ಸುಳ್ಳನ್ನು ಹೇಳಿ ನಂತರ ವಿಷಾದ ವ್ಯಕ್ತ ಪಡಿಸಿದ್ದ ರಾಜ್ಯದ ಪ್ರತಿಪಕ್ಷದ ನಾಯಕರು ಇಂದು ನಾನು (ಶಿಕ್ಷಣ ಸಚಿವ) ” ಖಾಸಗಿ ಶಿಕ್ಷಣ ಸಂಸ್ಥೆಗಳ ಜೊತೆ ಶಾಮಿಲಾಗಿದ್ದೇನೆ” ಎಂಬ ಮತ್ತೊಂದು ಅಪ್ಪಟ ಅಸತ್ಯವನ್ನು ಹೇಳಿದ್ದಾರೆ. ಅವರಿಗೆ ಸತ್ಯ ಹೇಳುವ ಬುದ್ಧಿ ಬರಲಿ ಎಂದು ಸಚಿವ ಸುರೇಶ್‌ ಕುಮಾರ್‌ ವ್ಯಂಗ್ಯವಾಗಿ ಟ್ವೀಟ್‌ ಮಾಡಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...