NEWSಕೃಷಿದೇಶ-ವಿದೇಶರಾಜಕೀಯ

ಪ್ರತಿಭಟನಾ ನಿರತ ರೈತರು ಬರುವ ರಸ್ತೆಗೆ ಮೊಳೆ ಹೊಡೆಸಿದ ಕೇಂದ್ರ ಸರ್ಕಾರ: ರೈತರ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ದೆಹಲಿ ಗಡಿಯಲ್ಲಿ ಕೇಂದ್ರ ಸರ್ಕಾರ ತಂದಿರುವ ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಹೋರಾಟ ಮಾಡುತ್ತಿರುವ ರೈತರು ‘ಕೇಂದ್ರ ಸರ್ಕಾರ ಮತ್ತು ಪೊಲೀಸರು ತಮಗೆ ನೀಡುತ್ತಿರುವ ಕಿರುಕುಳಗಳನ್ನು ನಿಲ್ಲಿಸುವವರೆಗೆ ಸರ್ಕಾರದ ಜತೆ ಯಾವುದೇ ರೀತಿಯ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯುವ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದಿರುವ ರೈತರು ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಹೇಳಿದ್ದಾರೆ. ಈ ನಡುವೆ ಈಗಾಗಲೇ ಕೇಂದ್ರ ಸರ್ಕಾರ ಮತ್ತು ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳ ಪದಾಧಿಕಾರಿಗಳ ಜತೆ 11 ಸುತ್ತು ಮಾತುಕತೆ ಆಗಿ ಅಷ್ಟೂ ಸುತ್ತಿನ ಮಾತುಕತೆ ವಿಫಲವಾಗಿದೆ.

ರೈತರು ದೆಹಲಿ ಪ್ರವೇಶ ಮಾಡುತ್ತಾರೆ ಎನ್ನುವ ಕಾರಣಕ್ಕೆ ಪ್ರತಿಭಟನೆ ನಡೆಯುತ್ತಿರುವ ರಸ್ತೆಗಳಲ್ಲಿ ಹಲವು ಸುತ್ತಿನ ಬ್ಯಾರಿಕೇಡ್‌ ಹಾಕಲಾಗಿದೆ. ಅದರ ಮೇಲೆ ಮುಳ್ಳು ತಂತಿ ಬೇಲಿಗಳನ್ನು ಹಾಕಲಾಗಿದೆ. ರಸ್ತೆಗಳಲ್ಲಿ ಕಂದಕ ಸೃಷ್ಟಿಸಲಾಗಿದೆ. ಭಾರೀ ಜನರಿರುವ ಕಡೆ ದೊಡ್ಡ ಮಟ್ಟದ ಅಪಾಯ ತಂದೊಡ್ಡಬಹುದು ಎಂಬ ಪರಿವೆಯೇ ಇಲ್ಲದೆ ರಸ್ತೆಗಳಲ್ಲಿ ಮೊಳೆಗಳನ್ನು ನೆಡಲಾಗಿದೆ ಇದು ರೈತಪರ ಇರುವ ಸರ್ಕಾರದ ಪರಿ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ತಾತ್ಕಾಲಿಕವಾಗಿ ಇಂಟರ್​ನೆಟ್, ಕರೆಂಟ್ ಮತ್ತು ನೀರನ್ನು ಸ್ಥಗಿತಗೊಳಿಸಲಾಗುತ್ತಿದೆ. ಹೀಗೆ ತೊಂದರೆ ಕೊಡುತ್ತಿರುವ ಹಿನ್ನೆಲೆಯಲ್ಲಿ ‘ಮಾತುಕತೆ ವಿರೋಧಿಸಿ’ ಸಂಯುಕ್ತ್ ಕಿಸಾನ್ ಮೋರ್ಚಾ ಹೇಳಿಕೆ ಬಿಡುಗಡೆ ಮಾಡಿದೆ.

ಹೀಗಾಗಿ ರೈತರ ಹೋರಾಟ ಹೆಚ್ಚುತ್ತಿರುವುದರಿಂದ ಕೇಂದ್ರ ಸರ್ಕಾರ ಈಗ ರೈತರ ಜತೆ ಔಪಚಾರಿಕ ಚರ್ಚೆ ನಡೆಸುವ ಪ್ರಯತ್ನ ಮಾಡುತ್ತಿದೆ. ಆದರೆ ರೈತ ಸಂಘಟನೆಗಳನ್ನು ಮುನ್ನಡೆಸುತ್ತಿರುವ ಸಂಯುಕ್ತ್ ಕಿಸಾನ್ ಮೋರ್ಚಾ ಕೇಂದ್ರ ಸರ್ಕಾರ ಮತ್ತು’ಪೊಲೀಸರು ತಮಗೆ ನೀಡುತ್ತಿರುವ ಕಿರುಕುಳಗಳನ್ನು ನಿಲ್ಲಿಸುವವರೆಗೆ’ ಸರ್ಕಾರದ ಜತೆ ಯಾವುದೇ ರೀತಿಯ ಮಾತುಕತೆ ನಡೆಸಲು ಸಾಧ್ಯವಿಲ್ಲ’ ಎಂದು ಸ್ಪಷ್ಟಪಡಿಸಿದೆ.

ಕೇಂದ್ರ ಸರ್ಕಾರ ಮತ್ತು ಪೊಲೀಸರು ರೈತರಿಗೆ ಕಿರುಕುಳ ನೀಡುವ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಅವರು ‘ಸೇತುವೆಗಳನ್ನು ಕಟ್ಟಿ, ಗೋಡೆಗಳನ್ನಲ್ಲ’ ಎಂಬ ಮಾರ್ಮಿಕವಾದ ಮಾತನ್ನಾಡಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು ‘ಪ್ರಧಾನ್ ಮಂತ್ರಿ ಜೀ, ಅಪನೆ ಕಿಸಾನೊ ಸೆ ಹೀ ಯುದ್ಧ್?’ (ಪ್ರಧಾನ ಮಂತ್ರಿಯವರೇ, ನಮ್ಮ ರೈತರೊಂದಿಗೇ ಯುದ್ಧವಾ?) ಎಂದು ಟ್ವೀಟ್ ಮಾಡಿದ್ದಾರೆ. ಜತೆಗೆ ದೆಹಲಿ ಗಡಿಯಲ್ಲಿ ಪೊಲೀಸರು ನಿರ್ಮಿಸಿರುವ ಮುಳ್ಳು ತಂತಿಯುಳ್ಳ ಬೇಲಿ ಹಾಗೂ ಬ್ಯಾರಿಕೇಡ್ ಗೋಡೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇಂದು ಸಂಸತ್ ಕಲಾಪದ ವೇಳೆ ಕೂಡ ದೆಹಲಿ ಗಡಿಗಳಲ್ಲಿ ಗೋಡೆ ನಿರ್ಮಿಸಿರುವ, ಮುಳ್ಳು ಬೇಲಿ ಹಾಕಿರುವ ಕೇಂದ್ರ ಸರ್ಕಾರದ ಅಮಾನುಷ ವರ್ತನೆ ಬಗ್ಗೆ ವಿರೋಧ ವ್ಯಕ್ತವಾಯಿತು.

ರೈತ ವಿರೋಧಿಯಾಗಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂಬುದನ್ನು ಬಿಟ್ಟು ರೈತರು ಕೇಂದ್ರ ಸರ್ಕಾರದಿಂದ ಮತ್ತೇ ಇನ್ನೇನನ್ನೂ ನಿರೀಕ್ಷೆ ಮಾಡುವುದಿಲ್ಲ ಎಂಬುದಾಗಿ ಸಂಯುಕ್ತ್ ಕಿಸಾನ್ ಮೋರ್ಚಾ ಸ್ಪಷ್ಟಪಡಿಸಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್