ಯಾದಗಿರಿ: ಕ್ವಾರಂಟೈನ್ ಸಮಯದಲ್ಲಿ ಕಾರ್ಮಿಕರಿಗೆ ಬೇಕಾದ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು. ಪ್ರತಿಯೊಬ್ಬರೂ ಸಾಮಾಜಿಕ ಅಂತರ ಪಾಲನೆ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಬೇರೆ ರಾಜ್ಯಗಳಿಗೆ ವಲಸೆ ಹೋಗಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿಗೆ ಮರಳುವ ಕಾರ್ಮಿಕರ ತಪಾಸಣೆಗಾಗಿ ಜಿಲ್ಲೆಯ ಕವಡಿಮಟ್ಟಿಯಲ್ಲಿ ತೆರೆದಿರುವ ಕಾರ್ಮಿಕರ ತಪಾಸಣಾ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ ಮಾತನಾಡಿದರು.
ತಪಾಸಣಾ ಕೇಂದ್ರಕ್ಕೆ ಕಾರ್ಮಿಕರನ್ನು ಕರೆತರುವ ಬಸ್ ಗಳ ನಿಲುಗಡೆ ವ್ಯವಸ್ಥೆ ಹಾಗೂ ಕಾರ್ಮಿಕರಿಗಾಗಿ ಮಾಡಿರುವ ಕುಡಿಯುವ ನೀರು, ಉಪಾಹಾರ, ಸ್ಯಾನಿಟೈಸರ್ ಹಾಗೂ ಇನ್ನಿತರ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅಲ್ಲಿನ ಅಧಿಕಾರಿಗಳಿಗೆ ಸೂಚಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಬೇರೆ ರಾಜ್ಯಗಳಿಗೆ ಹೋಗಿ ಸುರಪುರ ತಾಲೂಕಿಗೆ ವಾಪಸ್ ಆಗುವ ಎಲ್ಲಾ ಕಾರ್ಮಿಕರ ವಿವರಗಳನ್ನು ಪಡೆದು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಅವರನ್ನು ಇನ್‌ಸ್ಟಿಟ್ಯೂಷನಲ್ ಕ್ವಾರಂಟೈನ್ ಗೆ ಕಳುಹಿಸಬೇಕು. ನಂತರ ಎಲ್ಲಾ ಕಾರ್ಮಿಕರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಬೇಕು. ರೋಗದ ಯಾವುದಾದರೂ ಗುಣಲಕ್ಷಣಗಳು ಕಂಡುಬಂದಲ್ಲಿ ಅವರ ಗಂಟಲು ದ್ರವ ಮಾದರಿಗಳನ್ನು ಪಡೆದು ಕೋವಿಡ್-19 ಪರೀಕ್ಷೆಗೆ ಕಳುಹಿಸಿ ಎಂದು ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ಡಿ.ವೈ.ಎಸ್.ಪಿ ವೆಂಕಟೇಶ್ ಉಗಿಬಂಡಿ, ತಹಸೀಲ್ದಾರ್ ನಿಂಗಣ್ಣ ಬಿರಾದಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail